AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2024: ರಾಜ್ಯದ 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್, ರೋಪ್​ ವೇ ಸೌಲಭ್ಯ: ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ರಾಜ್ಯ ಬಜೆಟ್​ ಅನ್ನು ಮಂಡನೆ ಮಾಡಿದ್ದಾರೆ. ಅದರಲ್ಲಿ ಪ್ರವಾಸೋದ್ಯಮಕ್ಕೂ ಭಾರಿ ಕೊಡುಗೆ ನೀಡಿದ್ದಾರೆ. 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರು, ರೋಪ್​ ವೇ ಅಳವಡಿಸಲಾಗುವುದು ಎಂದಿದ್ದಾರೆ.

Karnataka Budget 2024: ರಾಜ್ಯದ 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್, ರೋಪ್​ ವೇ ಸೌಲಭ್ಯ: ಸಿದ್ದರಾಮಯ್ಯ
ಕೇಬಲ್ ಕಾರುImage Credit source: India Today
Follow us
ನಯನಾ ರಾಜೀವ್
|

Updated on:Feb 16, 2024 | 1:25 PM

ಕರ್ನಾಟಕದ ಪ್ರಮುಖ 10 ಪ್ರವಾಸಿತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್‌ ಕಾರ್‌(Cable Car) ರೋಪ್‌ ವೇ(Rope Way) ಸೌಲಭ್ಯ ಅಭಿವೃದ್ಧಿಪಡಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ ಪ್ರವಾಸೋದ್ಯಮ(Tourism) ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

2024-25ನೇ ಸಾಲಿನ ಬಜೆಟ್​ನಲ್ಲಿ ಮಾತನಾಡಿರುವ ಅವರು, ಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗುವುದು. ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು.

ಗೋಕಾಕ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು. ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನು 3ಡಿ ಲೇಸರ್‌ ಸ್ಕ್ಯಾನಿಂಗ್‌ ಮೂಲಕ ಡಿಜಿಟಲ್ ದಾಖಲೀಕರಣ ಮಾಡಲಾಗಿದೆ. ಈ ಕಾರ್ಯವನ್ನು ದೇಶದಲ್ಲಿಯೇ ಪ್ರಥಮವಾಗಿ ಕೈಗೊಂಡಿರುವ ಶ್ರೇಯಸ್ಸು ನಮ್ಮ ರಾಜ್ಯದ್ದಾಗಿದೆ. ಈ ಡಿಜಿಟಲ್‌ ಮಾಹಿತಿಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಸಂವಾದಾತ್ಮಕವಾಗಿ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು.

ಮತ್ತಷ್ಟು ಓದಿ: Karnataka Budget 2024​​: ಬೆಂಗಳೂರು ಬಡಜನರಿಗಾಗಿ ಹೊಸ ಭ್ಯಾಗ್ಯ ಘೋಷಿಸಿದ ಸಿದ್ದರಾಮಯ್ಯ

ರಾಷ್ಟ್ರಕೂಟರ ಕಾಲದಲ್ಲಿ ಕರ್ನಾಟಕದ ಮೊಟ್ಟ ಮೊದಲ ವಿಶ್ವವಿದ್ಯಾಲಯವನ್ನು ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲ್ಲೂಕಿನ ನಾಗಾವಿಯಲ್ಲಿ ಸ್ಥಾಪಿಸಲಾಗಿತ್ತು ಎಂಬುದು ಸ್ಥಳೀಯರ ನಂಬಿಕೆ. ಅಲ್ಲಿನ ಪ್ರಾಚ್ಯಾವೇಶಗಳ ಸಂಶೋಧನೆ ಮತ್ತು ಸಂರಕ್ಷಣೆಗಾಗಿ ನೆರವು ನೀಡಲು ಎಎಸ್​ಐ( Archaeological Survey of India) ಗೆ ಶಿಫಾರಸ್ಸು ಮಾಡಲಾಗುವುದು.

ಕೆ.ಎಸ್.‌ಟಿ.ಡಿ.ಸಿ ವತಿಯಿಂದ ಬಾಗಲಕೋಟೆಯ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್‌ ನಿರ್ಮಿಸಲಾಗುವುದು ಹಾಗೂ ರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್‌ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು.

ಬೀದರ್‌ ಹಾಗೂ ವಿಜಯಪುರದಲ್ಲಿ ಕರೇಜ್‌ ಎಂದು ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯನ್ನು ನುರಿತ ಸಂಸ್ಥೆಗಳ ತಾಂತ್ರಿಕ ನೆರವಿನೊಂದಿಗೆ 15 ಕೋಟಿ ರೂ. ವೆಚ್ಚದಲ್ಲಿ ಪುನಶ್ಚೇತನಗೊಳಿಸಲಾಗುವುದು.

ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್‌ಪ್ರಿಟೇಷನ್‌ ಸೆಂಟರ್‌ಗಳನ್ನು ಜೆ.ಎಲ್.ಆರ್‌ ಸಂಸ್ಥೆಯ ಮೂಲಕ ನಿರ್ಮಾಣ ಮಾಡಲಾಗುವುದು. ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು.

ಶ್ರೀ ಕ್ಷೇತ್ರ ರೇಣುಕಾ ಯಲ್ಲಮ್ಮನ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸಂರಕ್ಷಿಸಿ ಅಭಿವೃದ್ಧಿಗೊಳಿಸಲು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯನ್ನು ರಚಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಿದ್ದರಾಮಯ್ಯ ಬಜೆಟ್​ನಲ್ಲಿ ತಿಳಿಸಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:22 pm, Fri, 16 February 24

ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ