Karnataka Budget: ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯ ಎಂದು ಪುನರುಚ್ಚರಿಸಿದ ಸಿಎಂ ಸಿದ್ದರಾಮಯ್ಯ; ವಿಪಕ್ಷಗಳಿಂದ ಪ್ರತಿಭಟನೆ

CM Siddaramaiah Criticizes Central govt in Budget Speech: ಸಿಎಂ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡನೆಯಲ್ಲಿ ಕೇಂದ್ರ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ. ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಕಳೆದ 10 ವರ್ಷಗಳ ಎನ್​ಡಿಎ ಆಡಳಿತ ಕೆಟ್ಟದಾಗಿದೆ ಎಂದಿದ್ದಾರೆ. ಸ್ವಾಮಿನಾಥನ್ ಆಯೋಗವು ಎಂಎಸ್​ಪಿಗೆ ಮಾಡಿರುವ ಶಿಫಾರಸನ್ನು ಕೇಂದ್ರ ಸರ್ಕಾರ ಜಾರಿ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Karnataka Budget: ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯ ಎಂದು ಪುನರುಚ್ಚರಿಸಿದ ಸಿಎಂ ಸಿದ್ದರಾಮಯ್ಯ; ವಿಪಕ್ಷಗಳಿಂದ ಪ್ರತಿಭಟನೆ
ಸಿದ್ದರಾಮಯ್ಯ (ಫೈಲ್ ಚಿತ್ರ)
Follow us
|

Updated on: Feb 16, 2024 | 11:06 AM

ಬೆಂಗಳೂರು, ಫೆಬ್ರುವರಿ 16: ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್ ಮಂಡನೆಯಲ್ಲಿ (Karnataka Budget 2024) ಕೇಂದ್ರ ಸರ್ಕಾರವನ್ನ ತರಾಟೆಗೆ ತೆಗೆದುಕೊಳ್ಳಲು ಎಲ್ಲಾ ಅವಕಾಶಗಳನ್ನು ತೆಗೆದುಕೊಂಡರು. ತೆರಿಗೆ ಹಂಚಿಕೆಯಲ್ಲಿ ರಾಜ್ಯ ಸರ್ಕಾರಕ್ಕೆ ಅನ್ಯಾಯವಾಗಿದೆ ಎಂದು ತಮ್ಮ ಬಜೆಟ್ ಭಾಷಣದ ವೇಳೆ ಸಿಎಂ ಸಿದ್ದರಾಮಯ್ಯ (Siddaramaiah) ಪುನರುಚ್ಚರಿಸಿದರು. ಈ ವೇಳೆ ವಿಪಕ್ಷ ಬಿಜೆಪಿಯ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಸುಳ್ಳು ಹೇಳಬೇಡಿ ಎಂದು ವಿಪಕ್ಷಗಳ ನಾಯಕರು ಸದನದಲ್ಲಿ ಪ್ರತಿಭಟನೆ ನಡೆಸಿದರು. ಸಿಎಂ ಬಜೆಟ್ ಮಂಡನೆ ನಡೆಯುತ್ತಿರುವಂತೆಯೇ ಬಿಜೆಪಿ ಶಾಸಕರು ಸದನದಲ್ಲಿ ಸಿಎಂ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನ ಹೊರಹಾಕಿದರು.

ಸಿದ್ದರಾಮಯ್ಯ ಪ್ರಸಕ್ತ 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಸಾಕಷ್ಟು ಅನ್ಯಾಯವಾಗಿದೆ. 14ನೇ ಹಣಕಾಸು ಆಯೋಗದ ಶಿಫಾರಸುಗಳು ಜಾರಿಯಲ್ಲಿದ್ದಿದ್ದರೆ ರಾಜ್ಯಕ್ಕೆ ಹೆಚ್ಚು ಪಾಲು ಸಿಗುತ್ತಿತ್ತು ಎಂದು ಅಂಕಿ ಅಂಶಗಳ ಸಮೇತ ವಿವರಣೆ ನೀಡಿದರು.

ಇದನ್ನೂ ಓದಿ: Karnataka Budget 2024 Live: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಬಜೆಟ್​​ನಲ್ಲಿ ಸಿಎಂ ಘೋಷಣೆ

ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಸಾಕಷ್ಟು ಅನುದಾನಗಳು ಸಿಕ್ಕಿದ್ದವು. ರಾಜ್ಯದ ಅಭಿವೃದ್ಧಿಗೆ ಅನುಕೂಲವಾಗಿತ್ತು. ಕಳೆದ 10 ವರ್ಷಗಳಿಂದ ಎನ್​ಡಿಎ ಸರ್ಕಾರದಿಂದ ಜನವಿರೋಧಿ ಆಡಳಿತ ಇದೆ. ಸಂಪನ್ಮೂಲ ಶೇಖರಣೆ ಕೆಲವೆಡೆ ಮಾತ್ರ ಕೇಂದ್ರೀಕೃತವಾಗಿದೆ ಎಂದು ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದ ಆರಂಭದಲ್ಲೇ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಕುಟುಕಿದರು.

ತಮ್ಮ ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ತಮ್ಮ ಗ್ಯಾರಂಟಿಯನ್ನು ಕದ್ದಿದೆ ಎಂದೂ ಲೇವಡಿ ಮಾಡಿದರು.

ನಾವು ಐದು ಗ್ಯಾರಂಟಿಗಳನ್ನು ಬಹಳ ಕಡಿಮೆ ಅವಧಿಯಲ್ಲಿ ಜಾರಿ ಮಾಡಿದ್ದೇವೆ. ಈ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ ಆಗಿರಲಿಲ್ಲ. ವಿಪಕ್ಷಗಳು ಈ ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಹಂಗಿಸಿದವು. ಸರ್ಕಾರದ ಬೊಕ್ಕಸ ಖಾಲಿ ಆಗಿದೆ ಎಂದು ಸುಳ್ಳುಗಳನ್ನು ಹೇಳಿ ಸರ್ಕಾರದ ನೈತಿಕ ಸ್ಥೈರ್ಯ ಕುಸಿಯಲು ಪ್ರಯತ್ನಿಸಿದವು ಎಂದು ಮುಖ್ಯಮಂತ್ರಿಗಳು ಹೇಳಿದರು.

ಇದನ್ನೂ ಓದಿ: Karnataka Budget 2024​​: ಮದ್ಯದ ಬೆಲೆ ಏರಿಸಲು ರಾಜ್ಯ ಸರ್ಕಾರ ನಿರ್ಧಾರ

ಸ್ವಾಮಿನಾಥನ್ ಆಯೋಗ ಜಾರಿಗೆ ಒತ್ತಾಯ

ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿ ಕೊಟ್ಟಿರುವುದನ್ನು ಸ್ವಾಗತಿಸಿದ ಸಿದ್ದರಾಮಯ್ಯ, ಆ ಆಯೋಗ ಶಿಫಾರಸು ಮಾಡಿದಂತೆ ವ್ಯವಸಾಯ ವೆಚ್ಚದ ಜೊತೆಗೆ ಶೇ. 50ರಷ್ಟು ಲಾಭವನ್ನು ನೀಡುವ ಎಂಎಸ್​ಪಿ ನೀತಿಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್