Karnataka Budget: ನಮ್ಮ ಮೆಟ್ರೋ: 2025ರ ಒಳಗೆ ಹೊಸದಾಗಿ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ

ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್​ ಮಂಡಿಸಿದ್ದು ಅದರಲ್ಲಿ ಈ ಬಾರಿ ನಮ್ಮ ಮೆಟ್ರೋಗೆ 44 ಕಿ.ಮೀ ಹೊಸ ಮಾರ್ಗ ಸೇರ್ಪಡೆಯಾಗುವ ಘೋಷಣೆ ಮಾಡಿದ್ದಾರೆ. 2025ರ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ ಮಾರ್ಗ ಸೇರ್ಪಡೆಯಾಗಲಿದೆ ಎಂದು ತಿಳಿಸಿದ್ದಾರೆ

Karnataka Budget: ನಮ್ಮ ಮೆಟ್ರೋ: 2025ರ ಒಳಗೆ ಹೊಸದಾಗಿ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ
ಸಿದ್ದರಾಮಯ್ಯ
Follow us
ನಯನಾ ರಾಜೀವ್
|

Updated on: Feb 16, 2024 | 11:29 AM

ಬೆಂಗಳೂರು ನಮ್ಮ ಮೆಟ್ರೋ(Namma Metro) ಜಾಲಕ್ಕೆ 2025ರ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ ಮಾರ್ಗ ಸೇರ್ಪಡೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 2024-25ನೇ ಸಾಲಿನ ರಾಜ್ಯ ಬಜೆಟ್​ ಮಂಡನೆ ಮಾಡಿದ ಅವರು, ಮೆಟ್ರೋ ಯೋಜನೆ ಹಂತ 2 ಹಾಗೂ 2ಎ ಯೋಜನೆಯಡಿ ಹೊರವರ್ತುಲ ರಸ್ತೆ-ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್ ವೇಳೆಗೆ ಪೂರ್ಣವಾಗಲಿದೆ.

ನಮ್ಮ ಮೆಟ್ರೋ ಹಂತ-3ರಲ್ಲಿ ಅಂದಾಜು 15,611 ಕೋಟಿ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆಗೆ ಅರ್ಜಿ ಸಲ್ಲಿಕೆಯಾಗಿದೆ, ನಮ್ಮ ಮೆಟ್ರೋ ಹಂತ-3ಎ ಅಡಿಯಲ್ಲಿ ಡಿಪಿಆರ್ ಕರಡು ಸಿದ್ಧವಾಗಿದೆ ಎಂದಿದ್ದಾರೆ. ಹಾಗೆಯೇ ಪೆರಿಫೆರಲ್ ರಿಂಗ್ ರೋಡ್​ ಅನ್ನು ಬೆಂಗಳೂರು ಬ್ಯುಸಿನೆಸ್​ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ಬಿಐಇಸಿನಿಂದ ತುಮಕೂರು ಮತ್ತು ಕೆಐಎಎಲ್​ನಿಂದ ದೇವನಹಳ್ಳಿಗೆ ಮೆಟ್ರೋ ಜಾಲ ವಿಸ್ತರಣೆ ಕುರಿತು ಕಾರ್ಯಸಾಧ್ಯತಾ ವರದಿ ತಯಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸೇವೆಗೆ 1334 ಹೊಸ ಎಲೆಕ್ಟ್ರಿಕ್ ಬಸ್​ಗಳು ಮತ್ತು 820 ಬಿಎಸ್​-6 ಡೀಸೆಲ್​ ಬಸ್ಸುಗಳ ಸೇರ್ಪಡೆ.

ಮತ್ತಷ್ಟು ಓದಿ: Karnataka Budget 2024: ಬೆಂಗಳೂರು ಬಿಸಿನೆಸ್ ಕಾರಿಡರ್, 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣಕ್ಕೆ ನಿರ್ಧಾರ

5,550 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಾವೇರಿ ಹಂತ-5 ಯೋಜನೆ ಮೇ 2024ರಲ್ಲಿ ಕಾರ್ಯಾರಂಭವಾಗಲಿದೆ. 12 ಲಕ್ಷ ಜನರಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ, ಒಳಚರಂಡಿ ಕಾಮಗಾರಿ ಡಿಸೆಂಬರ್ 2024ರಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ