AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2024: ಇಂದು ರಾಜ್ಯ ಬಜೆಟ್​, ದಾಖಲೆಯ ಬಜೆಟ್​ನಲ್ಲಿ ಸಿಹಿ ನೀಡ್ತಾರಾ ಸಿದ್ದರಾಮಯ್ಯ? ನಿರೀಕ್ಷೆಗಳೇನು?

ಸಿಎಂ ಸಿದ್ದರಾಮಯ್ಯ ಅವರು ಇಂದು(ಫೆ.16) 15ನೇ ಬಜೆಟ್​ನ್ನು ಮಂಡಿಸಲಿದ್ದಾರೆ. ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಬೆಟ್ಟದಟ್ಟು ನಿರೀಕ್ಷೆ ಹೆಚ್ಚಾಗಿದೆ. ಬೆಳಗ್ಗೆ 10.15 ಕ್ಕೆ ಬಜೆಟ್ ಮಂಡಿಸಿಲಿರುವ ಸಿಎಂ ದಾಖಲೆ ಬರೆಯಲು ಸಜ್ಜಾಗಿದ್ದಾರೆ.. ಇದರ ನಡುವೆ ಯಾರಿಗೆಲ್ಲ ಬಂಪರ್ ಸಿಗಲಿದೆ. ಮಹಿಳೆಯರು, ಕಾರ್ಮಿಕರು, ರೈತರು, ಬೀದಿಬದಿ ವ್ಯಾಪಾರಿಗಳು, ಸಣ್ಣ ಕೈಗಾರಿಕೆಗಳಿಗೆ ಗುಡ್​ನ್ಯೂಸ್ ಸಿಗುತ್ತಾ ಎನ್ನುವ ಕುತೂಹಲ ಹೆಚ್ಚಾಗಿದೆ.

Karnataka Budget 2024: ಇಂದು ರಾಜ್ಯ ಬಜೆಟ್​, ದಾಖಲೆಯ ಬಜೆಟ್​ನಲ್ಲಿ ಸಿಹಿ ನೀಡ್ತಾರಾ ಸಿದ್ದರಾಮಯ್ಯ? ನಿರೀಕ್ಷೆಗಳೇನು?
ಸಿದ್ದರಾಮಯ್ಯ
ರಮೇಶ್ ಬಿ. ಜವಳಗೇರಾ
|

Updated on: Feb 16, 2024 | 6:00 AM

Share

ಬೆಂಗಳೂರು, (ಫೆಬ್ರವರಿ 16):  ಮುಖ್ಯಮಂತ್ರಿ  ಸಿದ್ದರಾಮಯ್ಯ (Siddaramaiah) ಅವರು ಇಂದು(ಫೆಬ್ರವರಿ 16) ಬೆಳಗ್ಗೆ 10:15ಕ್ಕೆ 2024-25ನೇ ಸಾಲಿನ ಬಜೆಟ್ (Karnataka Budget 2024) ಮಂಡನೆ ಮಾಡಲಿದ್ದಾರೆ. ಬಜೆಟ್ ಮಂಡನಗೂ ಮುನ್ನ ಸಿದ್ದರಾಮಯ್ಯ ಅವರು ವಿಶೇಷ ಸಂಪುಟ ಸಭೆ(Cabinet Meeting) ನಡೆಸಲಿದ್ದಾರೆ. ಸಿದ್ದರಾಮಯ್ಯ ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದ್ದು,. ಕರ್ನಾಟಕದ ಮಟ್ಟಿಗೆ ಇದೊಂದು ಹೊಸ ದಾಖಲೆಯಾಗಿದೆ. ಲೋಕಸಭೆ ಚುನಾವಣೆಗೆ(Loksabha Elections 2024) ಹೊತ್ತಲ್ಲೇ ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಗಳಿವೆ.

ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ದಾಟಿರಲಿಲ್ಲ. ಆದ್ರೆ. ಈ ಬಾರಿ ಸುಮಾರು 50 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ. ಇದರೊಂದಿಗೆ ಈ ಬಾರಿ ಬಜೆಟ್​ ಗಾತ್ರ 3.80 ಲಕ್ಷ ಕೋಟಿ ರೂಪಾಯಿ ತಲುಪುವ ನಿರೀಕ್ಷೆಯಿದೆ. ಪಂಚ ಗ್ಯಾರಂಟಿ ಹೊರೆ ಹಾಗೂ ಬರದ ಬರೆ ಸರ್ಕಾರಕ್ಕೆ ಸವಾಲಾಗಿದೆ.. ಪ್ರಸಕ್ತ ವರ್ಷದಲ್ಲಿ ರಾಜಸ್ವ ಸಂಗ್ರಹ ನಿಗದಿತ ಗುರಿ ತಲುಪದೇ ಇರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. 2024-25 ಸಾಲಿನಲ್ಲಿ ಪಂಚ ಗ್ಯಾರಂಟಿಗಳಿಗಾಗಿ ಸಮಾರು 58,000 ಕೋಟಿ ರೂ. ಅನುದಾನ ಮೀಸಲಿಡುವ ಅನಿವಾರ್ಯತೆ ಇದೆ. ಹೀಗಾಗಿ ಗ್ಯಾರಂಟಿ ವೆಚ್ಚದ ಮಧ್ಯೆ ಅಭಿವೃದ್ಧಿಗೆ ವೇಗ ಕೊಡುವ ಸಮತೋಲಿತ ಬಜೆಟ್ ಮಂಡಿಸಬೇಕಿದೆ. ಆದರೂ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟು ರಾಜ್ಯದ ಜನತೆಗೆ ಒಂದಷ್ಟು ಬಂಪರ್ ಕೊಡುವೆ ಕೊಡುವ ನಿರೀಕ್ಷೆ ಹೊಂದಲಾಗಿದೆ.

ಸಿದ್ದರಾಮಯ್ಯ ಬಜೆಟ್​ನ ನಿರೀಕ್ಷೆಗಳು

ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಮೇಕೆದಾಟು ಯೋಜನೆಗೆ ಹಣ ಘೋಷಣೆ ಮಾಡೋ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಟನಲ್ ನಿರ್ಮಾಣಕ್ಕೆ ಅನುದಾನ, ಸುವರ್ಣ ಮಹೋತ್ಸವ ಹಸರಿನಲ್ಲಿ ಅಭಿವೃದ್ಧಿಯ ಯೋಜನೆ ಘೋಷಣೆ ನಿರೀಕ್ಷೆ ಇದೆ. ಬ್ರ್ಯಾಂಡ್ ಬೆಂಗಳೂರಿಗೆ ಬಜೆಟ್​ನಲ್ಲಿ ಒತ್ತು ಸಾಧ್ಯತೆ, ನಮ್ಮ ಮೆಟ್ರೋ ಮಾರ್ಗ ವಿಸ್ತರಣೆ ಹೆಚ್ಚಿನ ಅನುದಾನ. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಿಶೇಷ ಹಣ ಮೀಸಲು ಹಾಗೂ 100 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನಗಳ ಜಿರ್ಣೋದ್ಧಾರ ಮಾಡೋದು. ರಾಜ್ಯ ಸರ್ಕಾರಿ ನೌಕಕರಿಗೆ OPS ಭಾಗ್ಯ ಘೋಷಿಸುವಂತ ಸಾಧ್ಯತೆ ಇದೆ. ಮದ್ಯದ ಮೇಲಿನ ಅಬಕಾರಿ ಸುಂಕ ಏರಿಕೆ ಮಾಡೋ ಸಾಧ್ಯತೆ ದಟ್ಟವಾಗಿದೆ. ಜಿಲ್ಲಾ & ತಾಲೂಕು ಕೇಂದ್ರಕ್ಕೆ ಇಂದಿರಾ ಕ್ಯಾಂಟೀನ್ ವಿಸ್ತರಣೆ ಮಾಡ್ಬೋದು ಎನ್ನಲಾಗಿದೆ.

ಹಳೆ ಮೈಸೂರು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಕರ್ನಾಟಕ, ಮಧ್ಯಕರ್ನಾಟಕ ಹೀಗೆ ಪ್ರಾದೇಶಿಕವಾರು ನೀರಾವರಿ ಸೇರಿ ವಿವಿಧ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವ ನಿರೀಕ್ಷೆಯಿದೆ. ಇನ್ನು ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿ ಜಾರಿಮಾಡುವ ಸಾಧ್ಯತೆಯಿದೆ.

5 ಗ್ಯಾರಂಟಿಗೆ 58 ಕೋಟಿ ಮೀಸಲಿಡೋ ಸವಾಲು!

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಯೋಜನೆಗೆ ಬಜೆಟ್​​ನಲ್ಲಿ ಮೊದಲು ಹಣ ಮೀಸಲಿಡುವುದು ಅನಿವಾರ್ಯ ಆಗಿದೆ. 5 ಗ್ಯಾರಂಟಿ ಯೋಜನೆ ಜಾರಿಗೆ 58 ಸಾವಿರ ಕೋಟಿ ಮೀಸಲಿಡಲಾಗುತ್ತೆ.. ಉಚಿತ ಗ್ಯಾರಂಟಿ ಯೋಜನೆಗೆ ಇಷ್ಟು ದೊಡ್ಡ ಪ್ರಮಾಣದ ಹಣ ಮೀಸಲಿಡೋದೇ ದೊಡ್ಡ ಸವಾಲು ಕೂಡ ಇದೆ. ಇಷ್ಟೇ ಅಲ್ಲ, ಬರ ನಿರ್ವಣೆಗೆ ಹೆಚ್ಚಿನ ಅನುದಾನ ಮೀಸಲಿಡುವ ಸಾಧ್ಯತೆ ಇದೆ. ಕೇಂದ್ರದಿಂದ ಇನ್ನೂ ಬರ ಪರಿಹರ ಹಣ ಬಿಡುಗಡೆ ಆಗಿಲ್ಲ ಅಂತಾ ಈಗಾಗಲೇ ರಾಜ್ಯ ಸರ್ಕಾರ ಆರೋಪಿಸಿದೆ. ಮುಂದಿನ ಮುಂಗಾರು ತನಕ ಬರ ನಿರ್ವಹಣೆ ಮಾಡವೇಕಾದ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವಿದೆ. ಹೀಗಾಗಿ ಬರ ನಿರ್ವಹಣೆಗಾಗಿ ಹೆಚ್ಚಿನ ಅನುದಾನ ಮೀಸಲಿಡಬೇಕಿದೆ. ಅದರಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗಾಗಿ ಜಟ್​​ನಲ್ಲಿ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ.

ಗ್ಯಾರಂಟಿ ಯೋಜನೆಗೆ ಸಂಪನ್ಮೂಲಗಳ ಕೃಡೀಕರಣಕ್ಕಾಗಿ ಕೆಲವು ವಿಭಾಗದಲ್ಲಿ ತೆರಿಗೆ ಹೆಚ್ಚಳ ಮಾಡುತ್ತಾರೆ ಎನ್ನಲಾಗಿದೆ. ಆದ್ರೆ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ತೆರಿಗೆ ಹೆಚ್ಚಳ ಮಾಡಿದರೆ ಜನ ಸಿಡಿದೇಳೋ ಭಯ ರಾಜ್ಯ ಸರ್ಕಾರಕ್ಕೆ ಇದೆ. ಹೀಗಾಗಿ ತೆರಿಗೆ ಹೆಚ್ಚಳ ಮಾಡದೆ ಬಜೆಟ್ ಮಂಡಿಸುವ ಸವಾಲು ಸಿಎಂ ಸಿದ್ದರಾಮಯ್ಯ ಮುಂದಿದೆ.

ಬಜೆಟ್ ಗಾತ್ರ, ಸಾಲದ ಹೊರೆ ಮತ್ತಷ್ಟು ಹೆಚ್ಚಾಗುತ್ತಾ?

ಕಳೆದ ಬಾರಿಗೆ ಹೋಲಿಕೆ ಮಾಡಿದ್ರೆ ಈ ಬಾರಿ ಬಜೆಟ್ ಗಾತ್ರ ಹೆಚ್ಚಾಗುವ ಸಾಧ್ಯತೆ ಇದೆ. ಕಳೆದ ಬಾರಿ ಬಜೆಟ್ ಗಾತ್ರ 3 ಲಕ್ಷದ 27 ಸಾವಿರ ಕೋಟಿ ರೂಪಾಯಿ ಇತ್ತು. ಈ ವರ್ಷದ ಬಜೆಟ್ ಗಾತ್ರ 3 ಲಕ್ಷದ 50 ರಿಂದ 80 ಸಾವಿರ ಕೋಟಿ ರೂಪಾಯಿ ದಾಟುವ ಸಾಧ್ಯತೆ. ಸಾಲದ ಹೊರೆಯೂ ಈ ಬಾರಿ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ಪ್ರತಿ ವರ್ಷವೂ ಬಜೆಟ್ ಗಾತ್ರದಂತೆ ಸಾಲದ ಹೊರೆಯೂ ಹೆಚ್ಚಳವಾಗ್ತಿದೆ. ಕಳೆದ ಬಾರಿ 85,815 ಕೋಟಿ ಸಾಲದ ಮೊರೆ ಹೋಗಿತ್ತು ರಾಜ್ಯ ಸರ್ಕಾರ‌. ಈ ಬಾರಿ ಅಂದಾಜು 1 ಲಕ್ಷ ಕೋಟಿವರೆಗೂ ಸಾಲ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ