ಬೆಂಗಳೂರು, ಫೆ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ದಾಖಲೆಯ 15ನೇ ಬಜೆಟ್ ಮಂಡನೆ ಮಾಡಿದರು. ಹೊಸ ಯೋಜನೆಗಳ ಘೋಷಣೆಗಳೊಂದಿಗೆ ಕಳೆದ ಬಾರಿಗಿಂತ 44 ಸಾವಿರ ಕೋಟಿ ರೂ. ಅಧಿಕ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಅವರು ಬಜೆಟ್ (Karnataka Budget 2024) ಮಂಡನೆ ಮಾಡಲು ತೆಗೆದುಕೊಂಡ ಸಮಯ ಎಷ್ಟು? ಬಜೆಟ್ನ ಒಟ್ಟಾರೆ ಗಾತ್ರ ಎಷ್ಟಿದೆ? ಇಲ್ಲಿದೆ ಮಾಹಿತಿ.
ಸಿದ್ದರಾಮಯ್ಯ ಅವರು ಒಟ್ಟು 3,71,383 ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದು, ಇದಕ್ಕೆ ಒಟ್ಟು 3 ಗಂಟೆ 14 ನಿಮಿಷಗಳನ್ನು ತೆಗೆದುಕೊಂಡಿದ್ದಾರೆ. ಕಳೆದ ಬಾರಿ ಸಿದ್ದರಾಮಯ್ಯ ಅವರು ಮಂಡಿಸಿದ್ದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ಇತ್ತು. ಸದ್ಯ, ಬಜೆಟ್ ಭಾಷಣ ಮುಕ್ತಾಯ ಹಿನ್ನೆಲೆ ಸ್ಪೀಕರ್ ಯುಟಿ ಖಾದರ್ ಅವರು ಕಲಾಪವನ್ನು ಸೋಮವಾರ ಬೆಳಗ್ಗೆ 10.15ಕ್ಕೆ ಮುಂದೂಡಿದರು.
ಇದನ್ನೂ ಓದಿ: Karnataka Budget: ಏನಿಲ್ಲಾ ಏನಿಲ್ಲ ಸಿದ್ದರಾಮಯ್ಯ ಬಜೆಟ್ನಲ್ಲಿ ಏನಿಲ್ಲ: ವಿಧಾನಸೌಧದ ಮುಂದೆ ಬಿಜೆಪಿ ಪ್ರತಿಭಟನೆ
ಸುದೀರ್ಘ ಬಜೆಟ್ ಮಂಡನೆ ನಂತರ ತಮ್ಮ ಸ್ಥಾನದಲ್ಲಿ ಕುಳಿತುಕೊಂಡು ನೀರು ಕುಡಿಯುತ್ತಾ ವಿಶ್ರಾಂತಿ ಪಡೆಯುತ್ತಿದ್ದ ಸಿದ್ದರಾಮಯ್ಯ ಅವರತ್ತ ಸಚಿವರು ಹಾಗೂ ಕಾಂಗ್ರೆಸ್ ಶಾಸಕರು ಆಗಮಿಸಿ ಅಭಿನಂದನೆ ಸಲ್ಲಿಸಿದರು. ಪಕ್ಷೇತರ ಶಾಸಕ ಜನಾರ್ದನ ರೆಡ್ಡಿ ಅವರು ಕೂಡಾ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:25 pm, Fri, 16 February 24