Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget: 27,000 ಕೋಟಿ ರೂ ಮೊತ್ತದ ಬೆಳೆ ಸಾಲ ವಿತರಣೆಗೆ ಗುರಿ; ಸಿದ್ದರಾಮಯ್ಯ ಬಜೆಟ್​ನಲ್ಲಿ ರೈತರಿಗೆ ಸಿಕ್ಕಿದ್ದು…

Siddaramaiah Budget and Farmers: ಸಿಎಂ ಸಿದ್ದರಾಮಯ್ಯ ಇಂದು ತಮ್ಮ15ನೇ ಬಜೆಟ್ ಮಂಡನೆ ಮಾಡಿದ್ದಾರೆ. 3.71 ಲಕ್ಷ ಕೋಟಿ ರೂ ಗಾತ್ರದ ಆಯವ್ಯಯ ಇದಾಗಿದೆ. ರಾಜ್ಯದ 26 ಲಕ್ಷಕ್ಕೂ ಹೆಚ್ಚು ರೈತರಿಗೆ 27,000 ಕೋಟಿ ರೂ ಬೆಳೆ ಸಾಲ ವಿತರಿಸುವ ಗುರಿ ಇಡಲಾಗಿದೆ. ವಿವಿಧ ರೈತರಪರ ಯೋಜನೆಗಳನ್ನು ಏಕೀಕರಿಸಿ ರೈತ ಸಮೃದ್ಧಿ ಯೋಜನೆ ಜಾರಿ ಮಾಡುವುದಾಗಿ ಬಜೆಟ್​ನಲ್ಲಿ ಘೋಷಿಸಲಾಗಿದೆ.

Karnataka Budget: 27,000 ಕೋಟಿ ರೂ ಮೊತ್ತದ ಬೆಳೆ ಸಾಲ ವಿತರಣೆಗೆ ಗುರಿ; ಸಿದ್ದರಾಮಯ್ಯ ಬಜೆಟ್​ನಲ್ಲಿ ರೈತರಿಗೆ ಸಿಕ್ಕಿದ್ದು...
ರೈತ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 16, 2024 | 11:47 AM

ಬೆಂಗಳೂರು, ಫೆಬ್ರುವರಿ 16: ಸಿದ್ದರಾಮಯ್ಯ ಇಂದು ಶುಕ್ರವಾರ 3,71,383 ಕೋಟಿ ರೂ ಮೊತ್ತದ ಬಜೆಟ್ ಮಂಡನೆ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳ ಮಧ್ಯೆ ಇತರ ಹಲವು ಯೋಜನೆಗಳಿಗೂ ಅವರು ಪ್ರಾಧಾನ್ಯತೆ ನೀಡುವ ಪ್ರಯತ್ನ ಮಾಡಿದ್ದಾರೆ. ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27,000 ಕೋಟಿ ರೂ ದಾಖಲೆಯ ಬೆಳೆ ಸಾಲ (crop loan) ವಿತರಣೆಯ ಗುರಿ ಮುಂದಿಟ್ಟಿದ್ದಾರೆ. ಹಿಂದಿನ ಅವಧಿಯಲ್ಲಿ ಬೆಳೆಸಾಲ ಮನ್ನಾದ ಬಾಕಿ ಉಳಿದುಕೊಂಡಿರುವ 132 ಕೋಟಿ ರೂ ಹಣವನ್ನು ಡಿಸಿಸಿ ಬ್ಯಾಂಕುಗಳಿಗೆ ಸರ್ಕಾರ ಬಿಡುಗಡೆ ಮಾಡಿದೆ. ಹಾಗೆಯೇ, ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ ಮಾಡುವುದಾಗಿ ಬಜೆಟ್​ನಲ್ಲಿ ಘೋಷಿಸಲಾಗಿದೆ.

ರಾಜ್ಯ ಬಜೆಟ್​ನಲ್ಲಿ ಕೃಷಿಕ್ಷೇತ್ರ ಮತ್ತು ರೈತರಿಗೆ ಮಾಡಿರುವ ಕೆಲ ಪ್ರಮುಖ ಘೋಷಣೆಗಳು

  • ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ದಿ ಯೋಜನೆ
  • ನಮ್ಮ ಮಿಲ್ಲೆಟ್ ಕಾರ್ಯಕ್ರಮದ ಮೂಲಕ ಸಂಸ್ಕರಿಸಿದ ಸಿರಿಧಾನ್ಯಗಳು ಮತ್ತು ಮೌಲ್ಯವರ್ಧಿತ ಉತ್ಪನ್ನಗನ್ನು ಕೈಗಟುಕುವ ದರದಲ್ಲಿ ನೀಡುವ ಯೋಜನೆ
  • ರೈತರಿಗೆ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆಯ ಸಲಹೆಗೆ ಇ-ಸ್ಯಾಪ್ ಸಾಫ್ಟ್​ವೇರ್
  • ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಹಲ್ಲಿ ಫುಡ್ ಪಾರ್ಕ್. ಚಿಕ್ಕಮಗಳೂರಿನಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ದಿ.

ಇದನ್ನೂ ಓದಿ: Karnataka Budget 2024: ಬೆಂಗಳೂರು ಬಿಸಿನೆಸ್ ಕಾರಿಡರ್, 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣಕ್ಕೆ ನಿರ್ಧಾರ

  • ಪ್ರೈವೇಟ್ ಪಬ್ಲಿಕ್ ಪಾರ್ಟ್ನರ್​ಶಿಪ್ ಮಾದರಿಯಲ್ಲಿ ಬೆಂಗಳೂರಿನಲ್ಲಿ ಸುಸಜ್ಜಿತ ವಾಣಿಜ್ಯ ಪುಷ್ಪ ಮಾರುಕಟ್ಟೆ ಸ್ಥಾಪನೆ
  • ರಾಮನಗರ ಮತ್ತು ಶಿಡ್ನಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಾಣದ ಎರಡನೇ ಹಂತದ ಕಾಮಗಾರಿ
  • ರಾಜ್ಯದ ಆಯ್ದ 20 ತಾಲೂಕುಗಳಲ್ಲಿರುವ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್ ಆಗಿ ಮೇಲ್ದರ್ಜೆಗೆ
  • ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27,000 ಕೋಟಿ ರೂ ದಾಖಲೆಯ ಬೆಲೆ ಸಾಲ ವಿತರಣೆಯ ಗುರಿ
  • ಹಿಂದಿನ ಅವಧಿಯ ಬೆಳೆ ಸಾಲ ಮನ್ನಾದ ಬಾಕಿ ಹಣವಾದ 132 ಕೋಟಿ ರೂ ಅನ್ನು ಡಿಸಿಸಿ ಬ್ಯಾಂಕುಗಳಿಗೆ ಬಿಡುಗಡೆ
  • 200 ಕೋಟಿ ರೂ ವೆಚ್ಚದಲ್ಲಿ 115 ಜಲ ಸಂರಕ್ಷಣಾ ಕಾಮಗಾರಿ ಅನುಷ್ಠಾನ

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ