ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಶೀಘ್ರ ಚಾಲನೆ: ಸಿದ್ದರಾಮಯ್ಯ ಘೋಷಣೆಗೆ ತಮಿಳುನಾಡು ಖಂಡನೆ

| Updated By: Rakesh Nayak Manchi

Updated on: Feb 17, 2024 | 7:40 AM

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಧಾನಸಭೆಯಲ್ಲಿ 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ವೇಳೆ ಕಾವೇರಿ ನದಿಗೆ ಮೇಕೆದಾಟು ಅಣೆಕಟ್ಟು ಯೋಜನೆ ಅನುಷ್ಠಾನಕ್ಕೆ ತಮ್ಮ ಸರ್ಕಾರದ ಬದ್ಧತೆಯನ್ನು ಪ್ರತಿಪಾದಿಸಿದರು. ಶೀಘ್ರದಲ್ಲೇ ಅಣೆಕಟ್ಟು ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಘೋಷಿಸಿದರು. ಇದಕ್ಕೆ ತಮಿಳುನಾಡಿನ ವಿವಿಧ ರಾಜಕೀಯ ಪಕ್ಷಗಳು ಖಂಡನೆ ವ್ಯಕ್ತಪಡಿಸಿವೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಶೀಘ್ರ ಚಾಲನೆ: ಸಿದ್ದರಾಮಯ್ಯ ಘೋಷಣೆಗೆ ತಮಿಳುನಾಡು ಖಂಡನೆ
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಶೀಘ್ರ ಚಾಲನೆ: ಸಿದ್ದರಾಮಯ್ಯ ಘೋಷಣೆಗೆ ತಮಿಳುನಾಡು ಖಂಡನೆ
Follow us on

ಚೆನ್ನೈ, ಫೆ.17: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಶುಕ್ರವಾರ ವಿಧಾನಸಭೆಯಲ್ಲಿ 2024-25ನೇ ಸಾಲಿನ ರಾಜ್ಯ ಬಜೆಟ್ (Karnataka Budget) ಮಂಡನೆ ವೇಳೆ ಕಾವೇರಿ ನದಿಗೆ ಮೇಕೆದಾಟು ಅಣೆಕಟ್ಟು ಯೋಜನೆ (Mekedatu Dam Project) ಅನುಷ್ಠಾನಕ್ಕೆ ತಮ್ಮ ಸರ್ಕಾರದ ಬದ್ಧತೆಯನ್ನು ಪ್ರತಿಪಾದಿಸಿದರು. ಇದು, ತಮಿಳುನಾಡಿನ (Tamil Nadu) ವಿವಿಧ ರಾಜಕೀಯ ಪಕ್ಷಗಳು ಅದರಲ್ಲೂ ಕಾಂಗ್ರೆಸ್​ನ ಐಎನ್​ಡಿಐಎ ಮೈತ್ರಿಕೂಟದ ಭಾಗವಾಗಿರುವ ಡಿಎಂಕೆ (DMK) ಖಂಡಿಸಿದೆ.

ಸೂಕ್ತ ಅನುಮತಿ ಪಡೆದು ಶೀಘ್ರವೇ ಅಣೆಕಟ್ಟು ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು, ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ರಚಿಸಲಾಗಿರುವ ವಿಶೇಷ ಸಮಿತಿಗಳ ಅಡಿಯಲ್ಲಿ ಎರಡು ಉಪ ಸಮಿತಿಗಳು ಕಾರ್ಯನಿರ್ವಹಿಸಲಿವೆ ಎಂದು ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿಯವರ ಈ ಘೋಷಣೆಯು ಕಾವೇರಿ ನ್ಯಾಯಾಧಿಕರಣದ ಅಂತಿಮ ತೀರ್ಪು ಮತ್ತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿಗೆ ವಿರುದ್ಧವಾಗಿದೆ. 9000 ಕೋಟಿ ರೂಪಾಯಿ ವೆಚ್ಚದಲ್ಲಿ 67.14 ಟಿಎಂಸಿ ನೀರನ್ನು ನಿಲ್ಲಿಸಲು ನಿರ್ಮಾಣ ಮಾಡಲಾಗುತ್ತಿದೆ. ಕರ್ನಾಟಕವು ಹೆಚ್ಚಿನ ನೀರಿನ ಸಾಮರ್ಥ್ಯದೊಂದಿಗೆ ಮೇಕೆದಾಟು ಅಣೆಕಟ್ಟು ಮತ್ತು 400 MW ಜಲವಿದ್ಯುತ್ ಸ್ಥಾವರವನ್ನು ನಿರ್ಮಿಸಲು ಯೋಜಿಸುತ್ತಿದೆ. ಇದನ್ನು ಅನುಮತಿಸಿದರೆ ತಮಿಳುನಾಡಿನ ಕಾವೇರಿ ಜಲಾನಯನ ಜಿಲ್ಲೆಗಳು ಮರುಭೂಮಿಯಾಗುತ್ತವೆ ಎಂದು ಎಂಡಿಎಂಕೆ ನಾಯಕ ಮತ್ತು ಸಂಸದ ವೈಕೊ ಹೇಳಿದ್ದಾರೆ.

ಇದನ್ನೂ ಓದಿ: ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ, 2021ರ ಸಿದ್ದು ವಾಕ್​ ಔಟ್ ಇತಿಹಾಸ ಬಿಚ್ಚಿಟ್ಟ ಅಶೋಕ್!

ಕಳೆದ 48 ವರ್ಷಗಳಲ್ಲಿ ತಮಿಳುನಾಡು 15.87 ಲಕ್ಷ ಹೆಕ್ಟೇರ್ ಕೃಷಿ ಭೂಮಿಯನ್ನು ಕಳೆದುಕೊಂಡಿದೆ ಎಂದು ವೈಕೋ ಹೇಳಿದ್ದಾರೆ. ಆದರೆ ಕರ್ನಾಟಕದ ನೀರಾವರಿ ಪ್ರದೇಶ 9.96 ಲಕ್ಷ ಹೆಕ್ಟೇರ್‌ನಿಂದ 38.25 ಲಕ್ಷ ಹೆಕ್ಟೇರ್‌ಗೆ ಏರಿಕೆಯಾಗಿದೆ. ಯೋಜನೆ ಅನುಷ್ಠಾನಕ್ಕೆ ಸಮಿತಿಗಳನ್ನು ರಚಿಸಲಾಗಿದ್ದು, ತಮಿಳುನಾಡಿನಿಂದ ಕಾವೇರಿ ನೀರಿನ ಹಕ್ಕನ್ನು ಕಸಿದುಕೊಳ್ಳುತ್ತಿರುವ ಕರ್ನಾಟಕ ಮತ್ತೆ ಮೇಕೆದಾಟು ಅಣೆಕಟ್ಟು ಕಟ್ಟಲು ಮುಂದಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಅದೇ ರೀತಿ ಸುಪ್ರೀಂ ಕೋರ್ಟ್‌ನ ಆದೇಶವನ್ನು ಧಿಕ್ಕರಿಸಿ ಕರ್ನಾಟಕ ಸರ್ಕಾರ ಕಾವೇರಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಮುಂದಾಗಿರುವುದು ಖಂಡನೀಯ ಎಂದು ಪಿಎಂಕೆ ನಾಯಕ ಡಿಆರ್ ರಾಮದಾಸ್ ಹೇಳಿದ್ದಾರೆ.

ಮೇಕೆದಾಟು ಶಾಶ್ವತ ಸ್ಥಗಿತಕ್ಕೆ ಏಕೈಕ ಮಾರ್ಗ

ಮೇಘದಾಟು ಅಣೆಕಟ್ಟಿನ ಕರಡು ಯೋಜನಾ ವರದಿಯನ್ನು ಸಿದ್ಧಪಡಿಸಲು 2018 ರಲ್ಲಿ ಕೇಂದ್ರ ಸರ್ಕಾರದ ಅನುಮತಿಯನ್ನು ರದ್ದುಗೊಳಿಸುವುದು ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕರ್ನಾಟಕ ಸರ್ಕಾರದ ಯೋಜನೆಯನ್ನು ಶಾಶ್ವತವಾಗಿ ನಿಲ್ಲಿಸುವ ಏಕೈಕ ಮಾರ್ಗವಾಗಿದೆ ಎಂದು ರಾಮದಾಸ್ ಹೇಳಿದರು.

ಈ ವಿಷಯದ ಬಗ್ಗೆ ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸುವಂತೆ ಡಿಎಂಕೆ ಸರ್ಕಾರವನ್ನು ರಾಮದಾಸ್ ಒತ್ತಾಯಿಸಿದರು ಮತ್ತು ಮೇಕೆದಾಟು ಅಣೆಕಟ್ಟಿನ ಕಾಮಗಾರಿಯನ್ನು ಕೈಗೊಳ್ಳದಂತೆ ಕರ್ನಾಟಕಕ್ಕೆ ತಕ್ಷಣವೇ ಎಚ್ಚರಿಕೆ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ: Karnataka Budget 2024: ಬಜೆಟ್‌ನಲ್ಲಿ ನಿಮ್ಮ ಜಿಲ್ಲೆಗೆ ಸಿದ್ದರಾಮಯ್ಯ ಏನೇನು ಕೊಟ್ಟಿದ್ದಾರೆ? ಇಲ್ಲಿದೆ ವಿವರ

ಈ ಬೇಡಿಕೆಗಳಿಗೆ ಒತ್ತು ನೀಡುವ ಮತ್ತು ಮೇಕೆದಾಟು ವಿಚಾರದಲ್ಲಿ ಕರ್ನಾಟಕ ಕೈಗೊಂಡ ನಿರ್ಣಯವನ್ನು ಖಂಡಿಸುವ ನಿರ್ಣಯವನ್ನು ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ರಾಮದಾಸ್ ಹೇಳಿದರು.

ಮೇಕೆದಾಟು ಯೋಜನೆಗೆ ಕರ್ನಾಟಕ ಸರ್ಕಾರ ಮುಂದಾಗುವುದನ್ನು ತಡೆಯಲು ಕಾನೂನು ಮಾರ್ಗಗಳನ್ನು ತೆಗೆದುಕೊಳ್ಳಬೇಕು ಎಂದು ಎಎಂಎಂಕೆ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಒತ್ತಾಯಿಸಿದ್ದಾರೆ.

ಮೇಕೆದಾಟು ಅಣೆಕಟ್ಟಿನ ಪರವಾಗಿ ಕಾವೇರಿ ನಿರ್ವಹಣಾ ಆಯೋಗದ ಸಭೆಯಲ್ಲಿ ಅಂಗೀಕರಿಸಿದ ನಿರ್ಣಯವನ್ನು ರದ್ದುಪಡಿಸಲು ಮತ್ತು ಡೆಲ್ಟಾ ಜಿಲ್ಲೆಗಳನ್ನು ಮರುಭೂಮಿ ಮಾಡಲು ಪ್ರಯತ್ನಿಸುತ್ತಿರುವ ಕರ್ನಾಟಕ ಸರ್ಕಾರದ ಕ್ರಮವನ್ನು ಕಾನೂನುಬದ್ಧವಾಗಿ ನಿಲ್ಲಿಸಬೇಕೆಂದು ನಾನು ತಮಿಳುನಾಡು ಸಿಎಂಗೆ ಒತ್ತಾಯಿಸುತ್ತೇನೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ