Karnataka Budget: ವಕ್ಫ್​ಗೆ 100 ಕೋಟಿ, ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ. ಘೋಷಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ 2024 ಮಂಡನೆ ಮಾಡುತ್ತಿದ್ದು, ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ, ಕ್ರಿಶ್ಚಿನ್ ಸಮುದಾಯದ ಅಭಿವೃದ್ಧಿಗೆ ಭರ್ಜರಿ ಅನುದಾನ ಘೋಷಣೆ ಮಾಡಲಾಗಿದೆ. ವಕ್ಫ್​​ ಆಸ್ತಿಗಳ ಸಂರಕ್ಷಣೆಗೆ 100 ಕೋಟಿ ಹಾಗೂ ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ಘೋಷಣೆ ಮಾಡಲಾಗಿದೆ.

Karnataka Budget: ವಕ್ಫ್​ಗೆ 100 ಕೋಟಿ, ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ. ಘೋಷಣೆ
ಕರ್ನಾಟಕ ಬಜೆಟ್​ನಲ್ಲಿ ವಕ್ಫ್​ಗೆ 100 ಕೋಟಿ, ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ. ಘೋಷಣೆ
Follow us
TV9 Web
| Updated By: Rakesh Nayak Manchi

Updated on: Feb 16, 2024 | 11:49 AM

ಬೆಂಗಳೂರು, ಫೆ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕರ್ನಾಟಕ ಬಜೆಟ್ 2024 (Karnataka Budget 2024) ಮಂಡನೆ ಮಾಡುತ್ತಿದ್ದು, ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ 100 ಕೋಟಿ ರೂಪಾಯಿ, ಕ್ರಿಶ್ಚಿನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ಘೋಷಣೆ ಮಾಡಲಾಗಿದೆ. ಪ್ರಸಕ್ತ ಬಜೆಟ್​ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಕೈಗೊಳ್ಳಲು ನಿರ್ಧರಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.

  1. ಸರ್ಕಾರಿ/ಖಾಸಗಿ ಕಾಲೇಜುಗಳಲ್ಲಿ ಬಿ.ಎಸ್ಸಿ. ನರ್ಸಿಂಗ್‌/ ಜಿ.ಎನ್‌.ಎಂ ನರ್ಸಿಂಗ್‌ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆಯನ್ನು ಪುನಃ ಪ್ರಾರಂಭ ಮಾಡಲಾಗುವುದು.
  2. ಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ KSFC ಮೂಲಕ ಪಡೆಯುವ 10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ ನೀಡಲಾಗುವುದು.
  3. ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆ.ಎಂ.ಡಿ.ಸಿ ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುವುದು.
  4. ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಒದಗಿಸಲಾಗುವುದು.
  5. ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಹಾಗೂ ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್‌ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು.
  6. ವಕ್ಫ್‌ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಗಾರಗಳನ್ನು ಏರ್ಪಡಿಸಲಾಗುವುದು.
  7. ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗುವುದು.
  8. ಮಂಗಳೂರಿನ ಹಜ್‌ ಭವನದ ನಿರ್ಮಾಣ ಕಾಮಗಾರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
  9. ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಒದಗಿಸಲಾಗುವುದು.
  10. ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ. ಒದಗಿಸಲಾಗುವುದು.
  11. ಬೌದ್ಧರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಲು ಸೂಕ್ತ ಅನುದಾನ ಒದಗಿಸಲಾಗುವುದು.
  12. ರಾಜ್ಯದಲ್ಲಿ ವಾಸಿಸುತ್ತಿರುವ ಸಿಖ್ಖ್‌ ಲಿಗಾರ್‌ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಕೋಟಿ ರೂ. ಅನುದಾನದಲ್ಲಿ ಹೊಸ ಯೋಜನೆಗಳನ್ನು ರೂಪಿಸಲಾಗುವುದು.
  13. ಬೀದರ್‌ನಲ್ಲಿರುವ ಶ್ರೀ ನಾನಕ್‌ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ ಒಂದು ಕೋಟಿ ರೂ. ಅನುದಾನ ನೀಡಲಾಗುವುದು.
  14. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 393 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು
  15. ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು.
  • 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.
  • 100 ಸಂಖ್ಯಾಬಲವುಳ್ಳ 100 ಮೆಟ್ರಿಕ್‌ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.
  • 100 ಹೊಸ ಮೌಲಾನಾ ಆಜಾದ್‌ ಶಾಲೆಗಳನ್ನು ತೆರೆಯಲಾಗುವುದು.
  • ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಲಾಗುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್