ಸಿದ್ದರಾಮಯ್ಯ
ಬೆಂಗಳೂರು, (ಫೆಬ್ರವರಿ 16): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು(ಫೆಬ್ರುವರಿ 16) ರಾಜ್ಯದ 2024-25ನೇ ಸಾಲಿನ ಒಟ್ಟು 3.71 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ (Karnataka Budget 2024) ಮಂಡಿಸಿದರು. ಕೃಷಿ, ಮೂಲಸೌಕರ್ಯ, ಆರೋಗ್ಯ, ಪ್ರವಾಸೋದ್ಯಮ ಸೇರಿ ವಿವಿಧ ವಲಯಗಳಿಗೆ ಅನುದಾನ ಹಂಚಿಕೆ ಮಾಡಲಾಗಿದೆ. ಈ ಬಜೆಟ್‌ನಲ್ಲಿ ಕೆಲ ಹೊಸ-ಹೊಸ ಘೋಷಣೆಗಳನ್ನು ಮಾಡಿದ್ದಾರೆ. ಇನ್ನು ಯಾವ ಜಿಲ್ಲೆಗೆ ಏನು ಕೊಟ್ಟಿದ್ದಾರೆ ಎನ್ನುವುದನ್ನು ನೋಡಿದರೆ ಈ ಬಾರಿಯ ಬಜೆಟ್‌ನಲ್ಲಿ ಸಿದ್ದರಾಮಯ್ಯ ತಮ್ಮ ತವರು ಮೈಸೂರಿಗೆ ಅನುದಾನಗಳ ಮಹಾಪೂರವನ್ನೇ ಹರಿಸಿದ್ದಾರೆ. ಹಾಗಾದ್ರೆ ಇನ್ನುಳಿದ ಜಿಲ್ಲೆಗಳಿಗೆ ಏನೆಲ್ಲಾ ಕೊಟ್ಟಿದ್ದಾರೆ ಎನ್ನುವ ವಿವರ ಈ ಕೆಳಗಿನಂತಿದೆ.
ಬೆಂಗಳೂರಿಗೆ ಸಿಕ್ಕಿದ್ದೇನು?
- ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ.
- ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳಿಗೆ 150 ಕೋಟಿ ರೂ.
- ಬೆಂಗಳೂರಿನಲ್ಲಿ ಮುಂದಿನ ಎರಡು ವರ್ಷಗಳಲ್ಲಿ HUB and Spoke ಮಾದರಿಯಲ್ಲಿ 430 ಪ್ರಯೋಗಾಲಯಗಳ ಸ್ಥಾಹನೆಗೆ 20 ಕೋಟಿ ರೂ. ಅನುದಾನ.
- ಬೆ೦ಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸಾ ಸೌಲಭ್ಯ.
- ಬೆ೦ಗಳೂರು ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ Knowledge Health Care, Innovation and Research City (KHIR) ಅನ್ನು ಅಭಿವೃದ್ಧಿಗೆ ಕ್ರಮ. 40,000 ಕೋಟಿ ರೂ.ಗಳ ಹೂಡಿಕೆ ಹಾಗೂ 80,000 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ.
- ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ 70 ಎಕರೆ ಪ್ರದೇಶದಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾ ನಗರ (Sports City)ಸ್ಥಾಪನೆ ಹಾಗೂ ನಾಲ್ಕು ಅತ್ಯಾಧುನಿಕ ಕ್ರೀಡ ಸಂಕೀರ್ಣಗಳ ನಿರ್ಮಾಣ.
- ಬೆ೦ಗಳೂರಿನ ಪೊಲೀಸ್ ಸುಲಿವನ್ ಮೈದಾನದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಆಸ್ಟ್ರೋ ಟರ್ಫ್ ಹಾಕಿ ಅಂಕಣ ನಿರ್ಮಾಣ.
- 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆ೦ಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣ ಖರೀದಿಗೆ 21 ಕೋಟಿ ರೂ. ಅನುದಾನ.
- ಬೆ೦ಗಳೂರು ಗ್ರಾಮಾ೦ತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ.
ಕರಾವಳಿ ದಕ್ಷಿಣ ಕನ್ನಡಕ್ಕೆ ಕೊಟ್ಟಿದ್ದೇನು?
- ಮ೦ಗಳೂರು ಬಂದರಿನಿಂದ ಬೆ೦ಗಳೂರುವರೆಗೆ ಹಾಗೂ ಬೀದರ್‌ನಿಂದ ಬೆ೦ಗಳೂರು ನಡುವೆ ಆರ್ಥಿಕ ಅಭಿವೃದ್ಧಿ ಕಾರಿಡಾರ್ ನಿರ್ಮಾಣಕ್ಕೆ ಕ್ರಮ.
- ಹಳೆ ಮಂಗಳೂರು, ಕಾರವಾರ ಮತ್ತು ರಾಜ್ಯದ 11 ಕಿರು ಬಂದರುಗಳಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕ್ರಮ.
- ಹಳೇ ಮಂಗಳೂರು ಬಂದರಿನಲ್ಲಿ 350 ಮೀ. ಉದ್ದದ ಕೋಸ್ಟಲ್ ಬರ್ತ್ ನಿರ್ಮಾಣ ಕಾಮಗಾರಿ 2024-25ನೇ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮ.
- ಮಂಗಳೂರಿನ ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ಜಲಮೆಟ್ರೋ ಸೇವೆಗಳನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿ ತಯಾರಿಸಲು ಕ್ರಮ ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಲು ಕ್ರಮ.
- ಮಂಗಳೂರಿನಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪನೆ.
- ಪುತ್ತೂರಿನಲ್ಲಿ ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ.
- ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಹಣ.
ಮಲೆನಾಡು ಹೆಬ್ಬಾಗಿಲು ಶಿವಮೊಗ್ಗ ದೊರಕ್ಕಿದ್ದೇನು?
- ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆ೦ಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಆಹಾರ ಪಾರ್ಕ್ ಸ್ಥಾಪನೆ.
- ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಕೂರಿಟ ಕಾರಾಗೃಹ ನಿರ್ಮಾಣ.
ಕಾಫಿನಾಡು ಚಿಕ್ಕಮಗಳೂರು
- ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ.
ವಿಜಯಪುರ
- ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆ.
- ವಿಜಯಪುರದ ಇಟ್ಟಂಗಿಹಾಳದಲ್ಲಿ ಫುಡ್ಪಾರ್ಕ್ ನಿರ್ಮಾಣ.
ರಾಯಚೂರು
- ಒಟ್ಟು 130 ಕೋಟಿ ರೂ. ವೆಚ್ಚದಲ್ಲಿ 7 ಶೀತಲಗೃಹ ನಿರ್ಮಾಣ.
- ರಾಯಚೂರು ಹಾಗೂ ರಾಣೆಬೆನ್ನೂರಿನಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಪ್ರಾರಂಭ.
- ಮಸ್ಕಿ ತಾಲೂಕಿನಲ್ಲಿ 998 ಕೋಟಿ ವೆಚ್ಚದಲ್ಲಿ ನೀರಾವರಿ ಸೌಲಭ್ಯ
- ಹ್ಯೂಮನ್ ಮಿಲ್ಕ್ ಬ್ಯಾಂಕ್ ಸ್ಥಾಪನೆ
ಕೊಪ್ಪಳ
- ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆಯ 15,600 ಕೋಟಿ ರೂ. ಮೊತ್ತದ ವಿವರವಾದ ಯೋಜನಾ ವರದಿ ಸಿದ್ಧ ಯೋಜನೆಯ ಅನುಷ್ಠಾನ ಸಂಬಂಧ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚನೆ ಪ್ರಾರಂಭ.
- ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ.
- ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ
- ಯಲಬುರ್ಗಾ-ಕುಕನೂರು ತಾಲ್ಲೂಕಿನಲ್ಲಿ 970 ಕೋಟಿ ರೂ. ವೆಚ್ಚದಲ್ಲಿ 38 ಕೆರೆಗಳನ್ನು ತುಂಬಿಸುವ ಯೋಜನೆ
ಮಂಡ್ಯ
- ಕೆ.ಆರ್.ಎಸ್‌ನ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಣ.
- ಮಂಡ್ಯದ ಮೈಶುಗರ್ ಕಾರ್ಲಾನೆಯ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣ.
ಧಾರವಾಡ
- ಧಾರವಾಡದಲ್ಲಿರುವ ವಾಲ್ಮಿ ಸಂಸ್ಥೆಯನ್ನು Centre of Excellence in Water Management ಆಗಿ ಉನ್ನತೀಕರಿಸಲು ಕ್ರಮ.
- ಧಾರವಾಡ ಜಿಲ್ಲೆಯಲ್ಲಿ ಬೆಣ್ಣೆಹಳ್ಳದಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ತಡೆಗೋಡೆ ನಿರ್ಮಾಣ.
ಕಲಬುರಗಿ
- ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಬೆಣ್ಣೆತೊರಾ ಜಲಾಶಯಕ್ಕೆ ಭೀಮಾ ಮತ್ತು ಕಾಗಿಣಾ ನದಿಗಳಿಂದ ನೀರು ತುಂಬಿಸುವ 365 ಕೋಟ ರೂ. ಮೊತ್ತದ ಯೋಜನೆ ಜಾರಿ.
- ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕ ಸ್ಥಾಪನೆ.
- ಕಲಬುರಗಿಯ ಕೆ.ಜಿ.ಟಿ.ಟಿ.ಐ.ನಲ್ಲಿ 16 ಕೋಟಿ ರೂ. ವೆಚ್ಚದಲ್ಲಿ ಸಿ.ಎನ್.ಸಿ (Computer Numerical Control) ಯಂತ್ರವನ್ನು ಕೇಂದ್ರೀಕರಿಸುವ ಮೊದಲ ಶ್ರೇಷ್ಟತಾ ಕೇಂದ್ರ ಸ್ಥಾಪನೆ.
- ಕಲಬುರಗಿ, ಶಿವಮೊಗ್ಗ. ಹುಬ್ಬಳ್ಳಿ ಮತ್ತು ತುಮಕೂರಿನಲ್ಲಿ ಒಟ್ಟಾರೆ 12 ಕೋಟಿ ರೂ. ವೆಚ್ಚದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಕೌಶಲ್ಯ ಮತ್ತು ನಾವೀನ್ಯತಾ ಕೇಂದ್ರ ಸ್ಥಾಪನೆ.
- ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆಗೆ ಕ್ರಮ.
- ತಳಕಲ್ನಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆ.
ಸಿಎಂ ತವರು ಜಿಲ್ಲೆ ಮೈಸೂರು
- ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಣ.
- ಮೈಸೂರು ವೈದ್ಯಕೀಯ ಮಹಾವಿದ್ಯಾಲಯ ಶತಮಾನೋತ್ಸವದ ಸವಿನೆನಪಿಗಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡ ನಿರ್ಮಾಣಕ್ಕೆ ಕ್ರಮ.
- 1600 ಕೋಟಿ ರೂ. ವೆಚ್ಚದಲ್ಲಿ ಮೈಸೂರು ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆ; ವಿಜಯಪುರ ಹಾಗೂ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು, ರಾಯಚೂರು ಹಾಗೂ ಕಾರವಾರ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕ್ರಮ.
- ಮೈಸೂರು, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ವಿಭಾಗಗಳಲ್ಲಿ ನೂತನ ಜವಳಿ ಪಾರ್ಕ್‌ಗಳ ಪ್ರಾರಂಭ; 10,000 ಉದ್ಯೋಗ ಸೃಷ್ಟಿ ಬಳ್ಳಾರಿಯಲ್ಲಿ ಜೀನ್ಸ್ ಅಪಾರೆಲ್ ಪಾರ್ಕ್ ಹಾಗೂ ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಅಭಿವೃದ್ಧಿಗೆ ಕ್ರಮ.
- ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಖಾದಿ ಚಟುವಟಕೆ ಪ್ರೋತ್ಸಾಹಕ್ಕೆ ಕ್ರಮ.
- 116 ಕೋಟಿ ವೆಚ್ಚದಲ್ಲಿ ಮಹಾರಾಣಿ ಕಲಾ & ವಾಣಿಜ್ಯ ಕಾಲೇಜು ಕಟ್ಟಡ ನಿರ್ಮಾಣ.
- ಕೆ.ಆರ್.ಆಸ್ಪತ್ರೆ ಆವರಣದಲ್ಲಿ ಹೊರರೋಗಿ ಕಟ್ಟಡ ನಿರ್ಮಾಣ.
- ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಾಲೆಗಳ ಅಭಿವೃದ್ಧಿ.
- ವರುಣಾದಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆ.
ಕೊಡಗು
- ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Viral Research & Diagnostic Laboratory (VRDL)ಅನ್ನು ಸ್ಥಾಪಿಸಲಾಗುವುದು.
- ವಿರಾಜಪೇಟೆಯಲ್ಲಿ 12 ಕೋಟ ರೂ. ವೆಚ್ಚದಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ನಿರ್ಮಾಣ.
ಬಳ್ಳಾರಿ
- ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿ ಸ್ಥಾಪನೆ.
- ಬಳ್ಳಾರಿ, ಕಲಬುರಗಿ, ತಳಕಲ್ ಮತ್ತು ಮೈಸೂರಿನ ವರುಣಾದಲ್ಲಿ 350 ಕೋಟಿ ವೆಚ್ಚದಲ್ಲಿ ಜಿ.ಟಿ.ಟಿ.ಸಿ. ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆ.
- ಬಳ್ಳಾರಿ, ಚಿತ್ರದುರ್ಗ, ರೋಣದಲ್ಲಿ ಒಟ್ಟು 150 ಕೋಟಿ ರೂ. ವೆಚ್ಚದಲ್ಲಿ ಹೊಸ ಜಿ.ಟಿ.ಟಿ.ಸಿಗಳ ಪ್ರಾರಂಭ.
ಬೆಳಗಾವಿ
- ಬೆಳಗಾವಿ ನಗರ ಪರಿಮಿತಿಯಲ್ಲಿ 450 ಕೋಟ ರೂ. ವೆಚ್ಚದಲ್ಲಿ 4.50 ಕಿ.ಮೀ ಉದ್ದದ ಮೇಲ್ಲೇತುವೆ (Elevated Corridor)ನಿರ್ಮಾಣಕ್ಕೆ ಕ್ರಮ.
ಉತ್ತರ ಕನ್ನಡ
- ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ ಹೊಸ ಆಳಸಮುದ್ರ ಸರ್ವಋತು ಬಂದರು, ಪಾವಿನಕುರ್ವೆಯಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಎರಡನೇ ಬೃಹತ್ ಬಂದರಿನ ಅಭಿವೃದ್ಧಿಗೆ ಕ್ರಮ.
- ಕಾರವಾರ, ಮಲ್ಪೆ ಮತ್ತು ಹಳೇ ಮಂಗಳೂರು ಬಂದರುಗಳಲ್ಲಿ ನಾಲ್ಕು ಬರ್ತ್‌ಗಳ ಅಭಿವೃದ್ಧಿ.
ಬೀದರ್
- ಬೀದರ್ ಹಾಗೂ ವಿಜಯಪುರದಲ್ಲಿ ಕರೇಜ್ ಎಂದು ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯ ಪುನಶ್ಚೇತನಕ್ಕೆ 15 ಕೋಟಿ ರೂ. ನೆರವು.
- ಬೀದರ್ ಜಿಲ್ಲೆಯ ಹೊನ್ನಿಕೇರಿ ಮೀಸಲು ಅರಣ್ಯ ಮತ್ತು ಇತರೆ ಜೀವವೈವಿಧ್ಯ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮ ಮತ್ತು ಸ೦ರಕ್ಷಣಾತ್ಮಕ ಕಾರ್ಯಕ್ರಮಗಳಿಗೆ 15 ಕೋಟ ರೂ. ಅನುದಾನ.
- ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹೊಸ ಜಿಲ್ಲಾಡಳಿತ ಕಛೇರಿ ಹಾಗೂ ಅಗತ್ಯವಿರುವ ತಾಲ್ಲೂಕುಗಳಲ್ಲಿ ತಾಲ್ಲೂಕಾ ಆಡಳಿತ ಕಚೇರಿ ನಿರ್ಮಾಣ.