AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akka Cafe: ಕರ್ನಾಟಕ ಬಜೆಟ್: ಅಕ್ಕ ಕ್ಯಾಂಟೀನ್, ಅಕ್ಕ ಸಹಕಾರಿ ಸಂಘಗಳ ಸ್ಥಾಪನೆ

Karnataka Budget 2025-26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 4.09 ಲಕ್ಷ ಕೋಟಿ ರೂ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಗೃಹ ಲಕ್ಷ್ಮೀ ಮತ್ತು ಗೃಹಜ್ಯೋತಿ ಯೋಜನೆಗಳಿಗೆ 28,608 ಕೋಟಿ ರೂ ಹಾಗೂ 10,100 ಕೋಟಿ ರೂ ನೀಡಿದ್ದಾರೆ. ರಾಜ್ಯಾದ್ಯಂತ ಅಕ್ಕ ಕೆಫೆ ಮತ್ತು ಅಕ್ಕ ಸಹಕಾರಿ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ. ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಅಕ್ಕ ಕೆಫೆ ಸ್ಥಾಪನೆಯಾಗಲಿದೆ.

Akka Cafe: ಕರ್ನಾಟಕ ಬಜೆಟ್: ಅಕ್ಕ ಕ್ಯಾಂಟೀನ್, ಅಕ್ಕ ಸಹಕಾರಿ ಸಂಘಗಳ ಸ್ಥಾಪನೆ
ಮಹಿಳೆಯರ ಸಾಂದರ್ಭಿಕ ಚಿತ್ರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 07, 2025 | 11:23 AM

Share

ಬೆಂಗಳೂರು, ಮಾರ್ಚ್ 7: ಸಿದ್ದರಾಮಯ್ಯ ತಮ್ಮ 16ನೆ ಬಜೆಟ್​​ನಲ್ಲಿ ಮಹಿಳೆಯರ ಸಬಲೀಕರಣಕ್ಕೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ ಹಣವನ್ನು 2025-26ರ ಸಾಲಿನ ವರ್ಷಕ್ಕೆ ಮೀಸಲಿರಿಸಲಾಗಿದೆ. ಇದೇ ವೇಳೆ ಮಹಿಳಾ ಸಬಲೀಕರಣಕ್ಕೆ ಬಜೆಟ್​​ನಲ್ಲಿ ಇನ್ನೂ ಕೆಲ ಯೋಜನೆಗಳನ್ನು ಘೋಷಿಸಲಾಗಿದೆ. ಇದರಲ್ಲಿ ಅಕ್ಕ ಕೋ ಆಪರೇಟಿವ್ ಸೊಸೈಟಿ, ಅಕ್ಕ ಕ್ಯಾಂಟೀನ್​​ಗಳನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಅಕ್ಕ ಕೆಫೆ ಕ್ಯಾಂಟೀನ್​ಗಳನ್ನು ತೆರೆಯಲಾಗುವುದು ಎಂದು ಸಿದ್ದರಾಮ್ಯ ಹೇಳಿದ್ದಾರೆ.

ಇದನ್ನೂ ಓದಿ: Karnataka Budget 2025 Highlights: ಕರ್ನಾಟಕ ರಾಜ್ಯ ಬಜೆಟ್​ನ ಮುಖ್ಯಾಂಶಗಳು

ಹಾಗೆಯೆ, ರಾಜ್ಯವ್ಯಾಪಿ ಅಕ್ಕ ಕೋ ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸಲಾಗುವ ಯೋಜನೆಯನ್ನು ಘೋಷಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಅಕ್ಕ ಸಹಕಾರಿ ಸಂಘಗಳ ಅಡಿ ತರಲು ಯೋಜಿಸಲಾಗಿದೆ. ರಾಜ್ಯದ ವಿವಿಧೆಡೆ 16 ಹೊಸ ಮಹಿಳಾ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್​​ನಲ್ಲಿ ಘೋಷಿಲಾಗಿದೆ.

ರಾಜ್ಯ ಸರ್ಕಾರದ 2025-26ನೇ ಸಾಲಿನ ಬಜೆಟ್​ನ ಗಾತ್ರ 4 ಲಕ್ಷ ಕೋಟಿ ರೂಗಿಂತ ತುಸು ಹೆಚ್ಚಿನದ್ದಾಗಿದೆ. 2024-25ರ ಬಜೆಟ್ 3,71,383 ಕೋಟಿ ರೂ ಗಾತ್ರದ್ದಾಗಿತ್ತು. ಈ ಬಾರಿ ಅದು 4,09,549 ಕೋಟಿ ರೂನಷ್ಟಿದೆ. ಕಳೆದ ಬಾರಿಗಿಂತ ಈ ಬಾರಿಯ ಬಜೆಟ್ ಗಾತ್ರ 38,166 ಕೋಟಿ ರೂನಷ್ಟು ಹೆಚ್ಚಳವಾಗಿದೆ.

ಇದನ್ನೂ ಓದಿ: ​ಎಸ್​ಸಿ, ಎಸ್​ಟಿ ಸಮುದಾಯಕ್ಕೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್: 2 ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಗುತ್ತಿಗೆ ಮೀಸಲಾತಿ

ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ ಮೀಸಲಿರಿಸಲಾಗಿದೆ. ಗೃಹಜ್ಯೋತಿ ಯೋಜನೆಗೆ 10,100 ಕೋಟಿ ರೂ ನೀಡಲಾಗುತ್ತಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಇವೆರಡು ಯೋಜನೆಗಳು ಮುಖ್ಯವಾಗಿದ್ದು ಹೆಚ್ಚಿನ ಅನುದಾನ ಬೇಡುತ್ತವೆ. ಬಜೆಟ್​ನಲ್ಲಿ ಸಿದ್ದರಾಮಯ್ಯ ಈ ಯೋಜನೆಗಳಿಗೆ ಅನುದಾನ ನೀಡಲು ಯಶಸ್ವಿಯಾಗಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ