Karnataka Budget 2025: ಕರ್ನಾಟಕ : ಉಚಿತ ಗ್ಯಾರಂಟಿಗಳಿಗೆ ಸಿದ್ದರಾಮಯ್ಯ ಬಜೆಟ್ನಲ್ಲಿ 51 ಸಾವಿರ ಕೋಟಿ ರೂ. ಮೀಸಲು
ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಬಜೆಟ್ನಲ್ಲಿ 51 ಸಾವಿರ ಕೋಟಿ ರೂ. ಮೀಸಲಿಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಹಣಕಾಸು ವರ್ಷದಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ 51,034 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು. ಜತೆಗೆ ಕರ್ನಾಟಕದ ಬಜೆಟ್ ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಯ 6 ಅಂಶಗಳ ಮೇಲೆ ಕೇಂದ್ರೀಕರಿಸಲಿದೆ ಎಂದು ತಮ್ಮ ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ .

ಬೆಂಗಳೂರು, ಮಾರ್ಚ್ 07: ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಬಜೆಟ್ನಲ್ಲಿ 51 ಸಾವಿರ ಕೋಟಿ ರೂ. ಮೀಸಲಿಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಹಣಕಾಸು ವರ್ಷದಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ 51,034 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು. ಜತೆಗೆ ಕರ್ನಾಟಕದ ಬಜೆಟ್ ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಯ 6 ಅಂಶಗಳ ಮೇಲೆ ಕೇಂದ್ರೀಕರಿಸಲಿದೆ ಎಂದು ತಮ್ಮ ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ .
ಈ ವರ್ಷದ ಆಯವ್ಯಯದಲ್ಲಿ ಪ್ರಮುಖವಾಗಿ ಆರು8 ಅಭಿವೃದ್ಧಿಯ ಆಯಾಮಗಳನ್ನು ಗುರುತಿಸಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಅವುಗಳಲ್ಲಿ ಮೊದಲನೆಯದು ಕಲ್ಯಾಣ ಕಾರ್ಯಕ್ರಮಗಳ ಆಯವ್ಯಯ: ಗ್ಯಾರಂಟಿ ಯೋಜನೆಗಳ ಜತೆಗೆ ಇರುವ ಇತರೆ ಜನಪರ ಕಾರ್ಯಕ್ರಮಗಳಿಗೂ ನಮ್ಮ ಸರ್ಕಾರ ಒತ್ತು ನೀಡಿದೆ. ಪರಿಶೀಷ್ಟ ಜಾತಿ, ಪರಿಶಿಷ್ಟ ಪಂಗಡ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಮಹಿಳೆಯರು, ರೈತರು, ಶ್ರಮಿಕರು ಸೇರಿದಂತೆ ವಿವಿಧ ವರ್ಗಗಳ ಅಭ್ಯುದಯಕ್ಕೆ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಿದೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಆಯವ್ಯಯ: ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿ ಪರಸ್ಪರ ಪೂರಕವಾಗಿ ದುಡಿಯುವ ಕ್ಷೇತ್ರಗಳು, ಇವುಗಳ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಹಲವು ಯೋಜನೆಗಳನ್ನು ರೂಪಿಸುತ್ತಿದೆ. ರೈತರು, ಮೀನುಗಾರರು ಮುಂತಾದವರ ಆದಾಯ ಹೆಚ್ಚಿಸುವ ಈ ಯೋಜನೆಗಳು ಭವಿಷ್ಯದ ಕರ್ನಾಟಕ ಅಭಿವೃದ್ಧಿಗೆ ಮಹತ್ವದ ಕೊಡುಗೆಗಳನ್ನು ನೀಡಲಿದೆ ಎಂದರು.
ಮತ್ತಷ್ಟು ಓದಿ: Karnataka Budget 2025 Highlights: ಕರ್ನಾಟಕ ರಾಜ್ಯ ಬಜೆಟ್ನ ಮುಖ್ಯಾಂಶಗಳು ಅಭಿವೃದ್ಧಿ ಕೇಂದ್ರದಿತ ಆಯವ್ಯಯ: ಸರ್ಕಾರ ರಾಜ್ಯದ ಅಮೂಲಾಗ್ರ ಆರ್ಥಿಕ ಬೆಳವಣಿಗೆ ಹೆಚ್ಚಿಸುವಲ್ಲಿ ಮೂಲಸೌಕರ್ಯ ಕ್ಷೇತ್ರದ ನಿರ್ಣಾಯಕ ಪಾತ್ರವನ್ನು ಗುರುತಿಸಿ, ಈ ಬಾರಿ ಬಂಡವಾಳದ ಮೇಲಿನ ವೆಚ್ಚಗಳಿಗೆ ಗಣನೀಯವಾದ ಅನುದಾನ ಒದಗಿಸಿದೆ. ಬಂಡವಾಳ ಲೆಕ್ಕದಲ್ಲಿ ಶೇ.43.3ರಷ್ಟು ಹೆಚ್ಚಳವಾಗಿರುವುದು ಅಭಿವೃದ್ಧಿ ಕೇಂದ್ರಿತ ಆಯವ್ಯಯ ಎನ್ನುವುದಕ್ಕೆ ಸಾಕ್ಷಿಯಾಗಿದೆ. ನಗರಾಭಿವೃದ್ಧಿಗೆ ಆಧ್ಯತೆ: ವೇಗವಾಗಿ ಬೆಳಯುತ್ತಿರುವ ರಾಜ್ಯದ ನಗರಗಳಲ್ಲಿ ನಾಗರಿಕರಿಗೆ ಸಮಪರ್ಕಕ ಮೂಲ ಸೌಕರ್ಯ ಹಾಗೂ ಗುಣಮಟ್ಟದ ಸೇವೆಗಳನ್ನು ಒದಗಿಸಲು ನಗರಾಭಿವೃದ್ಧಿ ಯೋಜನೆಗಳನ್ನು ರೂಪಿಸಲಾಗಿದೆ. ಸೇವಾಪೂರೈಕೆ ಹಾಗೂ ಸಂಚಾರ ಸುವ್ಯವಸ್ಥೆಗಾಗಿ ಬ್ರ್ಯಾಂಡ್ ಬೆಂಗಳೂರು ಎಂಬ ಪರಿಕಲ್ಪನೆಯಲ್ಲಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಹೂಡಿಕೆ ಮತ್ತು ಉದ್ಯೋಗ ಸೃಜನೆ: ಅತಿ ಹೆಚ್ಚು ಉದ್ಯೋಗ ಸೃಜನೆಯಾಗಿರುವ ಎಂಎಸ್ಎಂಇ , ಪ್ರವಾಸೋದ್ಯಮ, ಐಟಿಬಿಟಿ ವಲಯಗಳಲ್ಲಿ ಹೊಸ ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ಆಡಳಿತ ಸುಧಾರಣೆ: ಆಡಳಿತದಲ್ಲಿ ಪಾದರ್ಶಕತೆ ಹೆಚ್ಚಿಸಲು ಹಾಗೂ ಭ್ರಷ್ಟಾಚಾರವನ್ನು ನಿಗ್ರಹಿಸಲು ತಂತ್ರಜ್ಞಾನ ಸಮಪರ್ಕಕವಾಗಿ ಬಳಸಿಕೊಳ್ಳಲಾಗುತ್ತಿದೆ.
ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:30 am, Fri, 7 March 25