Karnataka Budget 2025: ಅಬಕಾರಿ ಇಲಾಖೆಗೆ ಬಜೆಟ್ನಲ್ಲಿ ಸಿದ್ದರಾಮಯ್ಯ ಹೊಸ ಟಾರ್ಗೆಟ್! ಮದ್ಯಪ್ರಿಯರಿಗೆ ಕಾದಿದ್ಯಾ ಬಿಗ್ ಶಾಕ್
ಈ ವರ್ಷ ಅಬಕಾರಿ ಇಲಾಖೆಯಿಂದ 40 ಸಾವಿರ ಕೋಟಿ ರೂ. ರಾಜಸ್ವದ ಗುರಿ ಹೊಂದಿರುವುದಾಗಿ ರಾಜ್ಯ ಸರ್ಕಾರ ಬಜೆಟ್ನಲ್ಲಿ ಘೋಷಿಸಿದೆ. ಇದರರ್ಥ ಮದ್ಯದ ಬೆಲೆಯನ್ನು ಮತ್ತೆ ಏರಿಸುವ ಸುಳಿವು ಇದಾಗಿರಬಹುದು ಎನ್ನಲಾಗಿದೆ. ಪ್ರೀಮಿಯಂ ಮದ್ಯದ ಬೆಲೆಗಳನ್ನು ಬೇರೆ ರಾಜ್ಯಗಳಲ್ಲಿ ವಿಧಿಸುತ್ತಿರುವ ಬೆಲೆಗಳಿಗೆ ಅನುಗುಣವಾಗಿ ಕರ್ನಾಟಕದಲ್ಲೂ ದರ ಏರಿಕೆ ಮಾಡಲು ಸರ್ಕಾರ ಅಬಕಾರಿ ಸ್ಲ್ಯಾಬ್ಗಳನ್ನು ಪರಿಷ್ಕರಣೆ ಮಾಡುವುದಾಗಿ ಹೇಳಿದೆ.

ಬೆಂಗಳೂರು, ಮಾರ್ಚ್ 07: ಈ ವರ್ಷ ಅಬಕಾರಿ ಇಲಾಖೆಯಿಂದ 40 ಸಾವಿರ ಕೋಟಿ ರೂ. ರಾಜಸ್ವದ ಗುರಿ ಹೊಂದಿರುವುದಾಗಿ ರಾಜ್ಯ ಸರ್ಕಾರ ಬಜೆಟ್ನಲ್ಲಿ ಘೋಷಿಸಿದೆ. ಇದರರ್ಥ ಮದ್ಯದ ಬೆಲೆಯನ್ನು ಮತ್ತೆ ಏರಿಸುವ ಸುಳಿವು ಇದಾಗಿರಬಹುದು ಎನ್ನಲಾಗಿದೆ. ಪ್ರೀಮಿಯಂ ಮದ್ಯದ ಬೆಲೆಗಳನ್ನು ಬೇರೆ ರಾಜ್ಯಗಳಲ್ಲಿ ವಿಧಿಸುತ್ತಿರುವ ಬೆಲೆಗಳಿಗೆ ಅನುಗುಣವಾಗಿ ಕರ್ನಾಟಕದಲ್ಲೂ ದರ ಏರಿಕೆ ಮಾಡಲು ಸರ್ಕಾರ ಅಬಕಾರಿ ಸ್ಲ್ಯಾಬ್ಗಳನ್ನು ಪರಿಷ್ಕರಣೆ ಮಾಡುವುದಾಗಿ ಹೇಳಿದೆ.
ಮದ್ಯ ಮಾರಾಟವನ್ನು ಹೆಚ್ಚಿಸಲು ಖಾಲಿ ಇರುವ ಅಥವಾ ಲಭ್ಯವಿರುವ ಪರವಾನಗಿಗಳನ್ನು ಪಾರದರ್ಶಕ ಎಲೆಕ್ಟ್ರಾನಿಕ್ ಹರಾಜಿನ ಮೂಲಕ ಹಂಚಿಕೆ ಮಾಡಲು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಇದರಿಂದ ಹೆಚ್ಚುವರಿ ಆದಾಯವನ್ನು ಸಂಗ್ರಹಣೆ ಗುರಿ ಹೊಂದಲಾಗಿದೆ.
ಅಬಕಾರಿ ಇಲಾಖೆಯ ಎಲ್ಲಾ ಸೇವೆಗಳಿಗೆ ಸರ್ಕಾರವು ತಂತ್ರಾಂಶವನ್ನು ಸಿದ್ಧಪಡಿಸಿ ಆನ್‌ಲೈನ್ ಪ್ರಕ್ರಿಯೆಯನ್ನು ಅಭಿವೃದ್ಧಿಪಡಿಸಿದೆ. ಇದು ಆಡಳಿತದಲ್ಲಿ ದಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು ಸಾರ್ವಜನಿಕ ಸೇವೆಯನ್ನು ಮತ್ತಷ್ಟು ಸುಧಾರಿಸಲು ಸಹಕಾರಿಯಾಗಲಿದೆ.
ಮತ್ತಷ್ಟು ಓದಿ: Karnataka Budget 2025: ಬೆಂಗಳೂರು ನಗರದ ಅಭಿವೃದ್ಧಿಗೆ ಬಜೆಟ್ನಲ್ಲಿ ನೀಡಲಾದ ಹಣ ಮತ್ತು ಘೋಷಣೆಗಳು
2024-25ರ ಪರಿಷ್ಕೃತ ಅಂದಾಜಿನಲ್ಲಿ ಅಬಕಾರಿ ತೆರಿಗೆಯಿಂದ ಒಟ್ಟು 36,500 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದೆ. 2025-26ನೇ ಸಾಲಿಗೆ 40,000 ಕೋಟಿ ರೂ.ಗಳ ಸಂಗ್ರಹಣಾ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಲಾಗಿದೆ. 2025-26ರಲ್ಲಿಯೂ ಅಬಕಾರಿ ಸುಂಕವನ್ನು ಪರಿಷ್ಕರಿಸುವ ಮೂಲಕ ಅಬಕಾರಿ ಸ್ಲ್ಯಾಬ್ ಗಳನ್ನು ತರ್ಕಬದ್ಧಗೊಳಿಸುವ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನಷ್ಟು ಕರ್ನಾಟಕ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ