Karnataka Budget 2025: ಕರ್ನಾಟಕ ಬಜೆಟ್: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಸಹಾಯ ಧನ ಹೆಚ್ಚಳ
ಇಂದು ಮಂಡನೆಯಾದ ಕರ್ನಾಟಕ ಬಜೆಟ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಬಂಪರ್ ಕೊಡುಗೆ ನೀಡಲಾಗಿದೆ. ಇಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ ಸಿಎಂ ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನ 1 ಸಾವಿರ ರೂ. ಹಾಗೂ ಸಹಾಯಕಿಯರ ಮಾಸಿಕ ಗೌರವಧನ 750 ರೂ,ಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.

ಬೆಂಗಳೂರು, ಮಾರ್ಚ್ 07: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮಾಸಿಕ ಗೌರವ ಧನವನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ ಸಿಎಂ ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನ 1 ಸಾವಿರ ರೂ. ಹಾಗೂ ಸಹಾಯಕಿಯರ ಮಾಸಿಕ ಗೌರವಧನ 750 ರೂ,ಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.
ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಒದಗಿಸಲು 175 ಕೋಟಿ ರೂ. ಹಂಚಿಕೆ ಮಾಡಲಾಗುವುದು. ಮಹಿಳಾ ಕೇಂದ್ರಿತ ಕಾರ್ಯಕ್ರಮಗಳಿಗೆ 94,094 ಕೋಟಿ ರೂ. ಹಂಚಿಕೆ ಮಾಡಲಾಗುವುದು, ಮಕ್ಕಳ ಕೇಂದ್ರಿತ ಕಾರ್ಯಕ್ರಮಗಳಿಗೆ 62,033 ಕೋಟಿ ರೂ, ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು. ಕರ್ನಾಟಕದಲ್ಲಿ ತಡೆಗಟ್ಟಬಹುದಾದ ತಾಯಂದಿರ ಮರಣವನ್ನು ಕಡಿಮೆ ಮಾಡಲು ಮಿಷನ್-ಮೋಡ್ ಕಾರ್ಯಕ್ರಮಕ್ಕಾಗಿ 320 ಕೋಟಿ ರೂ. ಹಂಚಿಕೆ ಮಾಡಲಾಗಿದೆ.
ಏಷ್ಯನ್ ಅಭಿವೃದ್ಧಿ ಬ್ಯಾಂಕಿನ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಅತಿಥಿ ಶಿಕ್ಷಕರ ಮಾಸಿಕ ಗೌರವಧನವನ್ನು 2,000 ರೂ. ಮತ್ತು ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡುವ ಅಡುಗೆಯವರ ಮಾಸಿಕ ಗೌರವಧನವನ್ನು 1,000 ರೂ.ಹೆಚ್ಚಿಸಲಾಗುವುದು.
ಮತ್ತಷ್ಟು ಓದಿ: Karnataka Budget 2025 Highlights: ಕರ್ನಾಟಕ ರಾಜ್ಯ ಬಜೆಟ್ನ ಮುಖ್ಯಾಂಶಗಳು
100 ಉನ್ನತ ಪ್ರಾಥಮಿಕ ಶಾಲೆಗಳು ಮತ್ತು 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೇರಿಸಲಾಗುವುದು. 70 ಕೋಟಿ ರೂ.ವೆಚ್ಚದಲ್ಲಿ 5,000 ಶಾಲೆಗಳಿಗೆ ಕಿಂಡರ್‌ಗಾರ್ಟನ್ ತರಗತಿಗಳನ್ನು ವಿಸ್ತರಿಸಲಾಗುವುದು ಎಂದರು. ರಾಜ್ಯದಲ್ಲಿ 16 ಹೊಸ ಕಾಲೇಜುಗಳ ಸ್ಥಾಪನೆ ಮಾಡಲಾಗುವುದು.
ಮಂಡ್ಯ ಕೃಷಿ ವಿಶ್ವವಿದ್ಯಾಲಯದಲ್ಲಿ 2025-26 ರಿಂದ ತರಗತಿಗಳು ಪ್ರಾರಂಭವಾಗಲಿವೆ, ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಗದಗ ಜಿಲ್ಲೆಯ ಡಂಬಳದಲ್ಲಿ ತೋಟಗಾರಿಕೆ ಕಾಲೇಜು ಆರಂಭವಾಗಿದೆ.ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಖಾಲಿ ಇರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ಎಂಜಿನಿಯರಿಂಗ್, ಪದವಿ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು 275 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ವಿಟಿಯುನ ಘಟಕ ಕಾಲೇಜು ಸ್ಥಾಪಿಸಲಾಗುವುದು ಎಂದರು.
ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ








