AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2026: ದಾಖಲೆಯ 17ನೇ ಬಜೆಟ್​ಗೆ ಸಿದ್ದರಾಮಯ್ಯ ಸಿದ್ಧ, ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

ಕರ್ನಾಟಕ ಬಜೆಟ್ 2026: ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಲು ಸಿದ್ಧರಾಗಿದ್ದಾರೆ. ಇದು ಅವರ 17ನೇ ಬಜೆಟ್ ಆಗಿದ್ದು, ರಾಜ್ಯದ ಇತಿಹಾಸದಲ್ಲೇ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸೃಷ್ಟಿಸಲಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ, ಅಭಿವೃದ್ಧಿ ದಿಕ್ಕು ನಿರ್ಧರಿಸುವ ಮಹತ್ವದ ಬಜೆಟ್ ಇದಾಗಲಿದೆ ಎಂದು ನಿರೀಕ್ಷಿಸಲಾಗಿದ್ದು, ಆಯವ್ಯಯ ಸಂಬಂಧಿತ ಮಹತ್ವದ ಮಾಹಿತಿ ಇಲ್ಲಿದೆ.

Karnataka Budget 2026: ದಾಖಲೆಯ 17ನೇ ಬಜೆಟ್​ಗೆ ಸಿದ್ದರಾಮಯ್ಯ ಸಿದ್ಧ, ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಸಿದ್ದರಾಮಯ್ಯImage Credit source: TV9 Network
ಗಣಪತಿ ಶರ್ಮಾ
|

Updated on:Mar 06, 2026 | 6:52 AM

Share

ಬೆಂಗಳೂರು, ಮಾರ್ಚ್ 5: ಕರ್ನಾಟಕದ ರಾಜಕೀಯ ಮತ್ತು ಆರ್ಥಿಕ ವಲಯದ ಗಮನ ಸೆಳೆದಿರುವ 2026–27ನೇ ಸಾಲಿನ ರಾಜ್ಯ ಬಜೆಟ್‌ (Karnataka Budget 2026) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾರ್ಚ್ 6 ರಂದು (ಶುಕ್ರವಾರ) ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. ಇದು ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ರಾಜ್ಯದ ಇತಿಹಾಸದಲ್ಲೇ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಅವರು ನಿರ್ಮಿಸಲಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾದ ದಾಖಲೆಗೆ ಜನವರಿಯಲ್ಲಿ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. 7 ವರ್ಷ 239 ದಿನಗಳ ಕಾಲ ಸಿಎಂ ಆಗಿದ್ದ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಹಿಂದಿಕ್ಕಿದ್ದಾರೆ. ಇದೀಗ ಬಜೆಟ್ ಮಂಡನೆಯಲ್ಲಿಯೂ ದಾಖಲೆ ನಿರ್ಮಿಸಲಿದ್ದಾರೆ.

ಬಜೆಟ್ ಮಂಡನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಇಲಾಖೆಗಳೊಂದಿಗೆ ಸಭೆ ನಡೆಸಿ ಆಯವ್ಯಯದ ಅಂತಿಮ ರೂಪುರೇಷೆಗಳನ್ನು ಸಿದ್ಧಪಡಿಸಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ ನೀಡುವುದರ ಜೊತೆಗೆ, ರಾಜ್ಯದ ಆರ್ಥಿಕ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೆಲವು ಯೋಜನೆಗಳಲ್ಲಿ ಬದಲಾವಣೆಗಳು ಆಗಬಹುದೇ ಎಂಬ ಕುತೂಹಲವೂ ಮೂಡಿದೆ.

ಮೂಲಸೌಕರ್ಯ ಅಭಿವೃದ್ಧಿ, ಶಿಕ್ಷಣ, ಕೃಷಿ, ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ, ರಾಜ್ಯದ ಜನತೆ ಮತ್ತು ವಿವಿಧ ವಲಯಗಳು ಈ ಬಜೆಟ್‌ ಮೇಲೆ ದೊಡ್ಡ ನಿರೀಕ್ಷೆ ಇಟ್ಟುಕೊಂಡಿವೆ.

ಕರ್ನಾಟಕ ಬಜೆಟ್ ಅಧಿವೇಶನ ವೇಳಾಪಟ್ಟಿ

ಕರ್ನಾಟಕ ಬಜೆಟ್ ಅಧಿವೇಶನವು ಮಾರ್ಚ್ 6ರಿಂದ ಮಾರ್ಚ್ 27ರವರೆಗೆ ನಡೆಯಲಿದ್ದು, ಒಟ್ಟು 14 ದಿನಗಳ ಕಾಲ ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಚರ್ಚೆಗಳು ನಡೆಯಲಿವೆ. ಬಜೆಟ್‌ ಮಂಡನೆಯ ಬಳಿಕ ವಿವಿಧ ಇಲಾಖೆಗಳ ಅನುದಾನಗಳ ಕುರಿತು ಚರ್ಚೆ ನಡೆಯಲಿದೆ.

ಕರ್ನಾಟಕದಲ್ಲಿ ಈವರೆಗೆ ಎಷ್ಟು ಬಜೆಟ್ ಮಂಡನೆಯಾಗಿದೆ?

ಮೂಲಗಳ ಪ್ರಕಾರ, ಕರ್ನಾಟಕದಲ್ಲಿ 1956 ರ ನಂತರ ಇದುವರೆಗೆ ಚುನಾವಣಾ ವರ್ಷಗಳ ಮಧ್ಯಂತರ ಬಜೆಟ್‌ಗಳನ್ನು ಹೊರತುಪಡಿಸಿ 70ಕ್ಕೂ ಹೆಚ್ಚು ವಾರ್ಷಿಕ ಬಜೆಟ್‌ಗಳು ಮಂಡಿಸಲ್ಪಟ್ಟಿವೆ. ರಾಜ್ಯದ ಆರ್ಥಿಕ ವ್ಯಾಪ್ತಿ ವರ್ಷದಿಂದ ವರ್ಷಕ್ಕೆ ವಿಸ್ತರಿಸಿಕೊಂಡಿದ್ದು, 2025–26ನೇ ಹಣಕಾಸು ವರ್ಷದಲ್ಲಿ ಬಜೆಟ್ ಗಾತ್ರ ಮೊದಲ ಬಾರಿಗೆ 4 ಲಕ್ಷ ಕೋಟಿ ರೂ. ಗಡಿ ದಾಟಿತ್ತು.

ಅತಿಹೆಚ್ಚು ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು

ಕರ್ನಾಟಕದ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳ ಪಟ್ಟಿ ಹೀಗಿದೆ;

  • ಸಿದ್ದರಾಮಯ್ಯ – 17 (ಮಾರ್ಚ್ 6ರ ಬಜೆಟ್ ಮಂಡನೆ ನಂತರ)
  • ರಾಮಕೃಷ್ಣ ಹೆಗಡೆ – 13
  • ಬಿಎಸ್ ಯಡಿಯೂರಪ್ಪ – 8

ಇದನ್ನೂ ಓದಿ: ಸಿದ್ದರಾಮಯ್ಯ ದಾಖಲೆ ಬಜೆಟ್ ಎಷ್ಟು ಗಂಟೆಗೆ? ಲೈವ್ ನೋಡುವುದ್ಹೇಗೆ?

ಒಟ್ಟಾರೆಯಾಗಿ, ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ರಾಜ್ಯದ ಆರ್ಥಿಕ ಸ್ಥಿತಿ, ಅಭಿವೃದ್ಧಿ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳ ದಿಕ್ಕನ್ನು ನಿರ್ಧರಿಸುವ ಮಹತ್ವದ ಆಯವ್ಯಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ, ಸದ್ಯ ಎಲ್ಲರ ಚಿತ್ತ ಬಜೆಟ್​​ನತ್ತ ನೆಟ್ಟಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:45 am, Thu, 5 March 26

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು