
ಬೆಂಗಳೂರು, (ಮಾರ್ಚ್ 06): ಸಿಎಂ ಸಿದ್ದರಾಮಯ್ಯನವರು (Siddaramaiah) 2026-27ನೇ ಸಾಲಿನ ರಾಜ್ಯದ ಆಯವ್ಯಯ ಮಂಡಿಸಿದ್ದಾರೆ (Karnataka Budget 2026). ಈ ಬಾರಿ ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂಪಾಯಿ. ಇದರೊಂದಿಗೆ 2025ನೇ ಸಾಲಿನ ಕರ್ನಾಟಕ ಬಜೆಟ್ ಗಿಂತ ಈ ಬಾರಿ 40 ಸಾವಿರ ಕೋಟಿ ರೂ. ಹೆಚ್ಚಳವಾಗಿದೆ. ರೈತರು, ಧಮನಿತರು, ಕಾರ್ಮಿಕ ಪರ ಬಜೆಟ್ ಇದಾಗಿದೆ ಎಂದು ಸಿದ್ದರಾಮಯ್ಯನವರು 3 ಗಂಟೆ 5 ನಿಮಿಷ ಮಂಡಿಸಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ 40 ಸಾವಿರ ಕೋಟಿ ರೂ. ತೆರಿಗೆ ಹೆಚ್ಚಳವಾಗಿದ್ದು, 2026-2027ನೇ ಸಾಲಿನಲ್ಲಿ 3.15 ಲಕ್ಷ ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಲಾಗಿದೆ. ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಂತಹ ಹೆಚ್ಚಿನ ಬಂಡವಾಳ ಆಕರ್ಷಣೆ, ನಗರಾಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಇನ್ನು ನಾವು ಬೆಂಕಿಯನ್ನು ಬೆಳಕಾಗಿಸಿ ಮುಂದಿನ ಹೆಜ್ಜೆ ಇರಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ನಿರರ್ಗಳವಾಗಿ 3 ಗಂಟೆ 5 ನಿಮಿಷ ಗಂಟೆಗಳ ಕಾಲ ಬಜೆಟ್ ಭಾಷಣ ಮಾಡಿದರು. ನೀರೂ ಕುಡಿಯದೆ, ನಿಂತಲ್ಲಿಂದ ಕದಲದೆ, ನಿರಂತರವಾಗಿ ಬಜೆಟ್ ಮಂಡಿಸಿದರು. ಅವರಿಗೆ ಕಾಲು ನೋವು ಇರುವ ಕಾರಣ ಬಜೆಟ್ ಮಧ್ಯೆ ಕೆಲವರು ಕುಳಿತುಕೊಂಡು ಓದಿ ಎಂದು ಸಲಹೆ ನೀಡಿದರು. ಆದ್ರೆ, ಸಿದ್ದರಾಮಯ್ಯ ಸಾಧ್ಯವಾದಷ್ಟು ನಿಂತುಕೊಂಡೇ ಓದುತ್ತೇನೆ. ಕಷ್ಟವಾದಗ ಕುಳಿತುಕೊಳ್ಳುತ್ತೇನೆಂದು ಎದ್ದು ನಿಂತುಕೊಂಡೇ ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸಿದರು. ಬಳಿಕ ಸಂಪುಟ ಸಹೋದ್ಯೋಗಿಗಳ ಜೊತೆ ಫೋಟೋ ತೆಗೆಸಿಕೊಂಡರು. ಬಜೆಟ್ ಮೇಲಿನ ಚರ್ಚೆಯನ್ನು ಸೋಮವಾರಕ್ಕೆ ನಿಗದಿಪಡಿಸಲಾಯಿತು.
ಇದನ್ನೂ ಓದಿ: Karnataka Budget 2026: ಬಜೆಟ್‌ನಲ್ಲಿ ಇಲಾಖಾವಾರು ಹಣ ಹಂಚಿಕೆ: ಯಾವ ಕ್ಷೇತ್ರಕ್ಕೆ ಎಷ್ಟು ಪಾಲು?
ಹೀಗೆ ಹತ್ತು ಹಲವು ಘೋಷಣೆಗಳೊಂದಿಗೆ ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ ಹಾಗೂ ನವ ಕರ್ನಾಟಕದ ನಿರ್ಮಾಣ” ಎಂಬ ದೂರದೃಷ್ಟಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2026-27ನೇ ಸಾಲಿನ ರಾಜ್ಯ ಆಯವ್ಯಯವನ್ನು ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಜನಸಾಮಾನ್ಯರ ನಿರೀಕ್ಷೆಯಂತೆ ವಸತಿ, ಕೃಷಿ, ನೀರಾವರಿ ಮತ್ತು ಮಹಿಳಾ ಸಬಲೀಕರಣಕ್ಕೆ ವಿಶೇಷ ಒತ್ತು ನೀಡಲಾಗಿದ್ದು, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಹಲವಾರು ಬಂಪರ್ ಕೊಡುಗೆಗಳನ್ನು ಘೋಷಿಸಲಾಗಿದೆ.
Published On - 3:24 pm, Fri, 6 March 26