AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10.15ಕ್ಕೇ ಸಿದ್ದರಾಮಯ್ಯ ಬಜೆಟ್ ಮಂಡನೆ ಏಕೆ? ಬಿಜೆಪಿ ಶಾಸಕ ಸುರೇಶ್ ಕುಮಾರ್ ಕೊಟ್ಟರು ಅಚ್ಚರಿಯ ಕಾರಣ! ನಿಜವಿರಬಹುದೇ?

ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ರ ಕರ್ನಾಟಕ ಬಜೆಟ್ ಅನ್ನು ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ಮಂಡಿಸುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಇದಕ್ಕೆ ಕಾರಣ ಬಿಜೆಪಿ ಶಾಸಕ ಸುರೇಶ್ ಕುಮಾರ್ ಮಾಡಿರುವ ಫೇಸ್​ಬುಕ್ ಪೋಸ್ಟ್! ರಾಹುಕಾಲ ತಪ್ಪಿಸಲು ಈ ಸಮಯ ನಿಗದಿಪಡಿಸಲಾಗಿದೆ ಎಂದು ಫೇಸ್‌ಬುಕ್‌ನಲ್ಲಿ ಸುರೇಶ್ ಕುಮಾರ್ ಪೋಸ್ಟ್ ಮಾಡಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

10.15ಕ್ಕೇ ಸಿದ್ದರಾಮಯ್ಯ ಬಜೆಟ್ ಮಂಡನೆ ಏಕೆ? ಬಿಜೆಪಿ ಶಾಸಕ ಸುರೇಶ್ ಕುಮಾರ್ ಕೊಟ್ಟರು ಅಚ್ಚರಿಯ ಕಾರಣ! ನಿಜವಿರಬಹುದೇ?
ಜೆಪಿ ಶಾಸಕ ಸುರೇಶ್ ಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯImage Credit source: tv9
ಗಣಪತಿ ಶರ್ಮಾ
|

Updated on:Mar 06, 2026 | 10:33 AM

Share

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget) ಅನ್ನು ಮಾರ್ಚ್ 6 ರ ಬೆಳಗ್ಗೆ 10.15 ಗಂಟೆಗೇ ವಿಧಾನಸಭೆಯಲ್ಲಿ ಮಂಡಿಸುತ್ತಿರುವುದೇಕೆ ಎಂಬ ವಿಚಾರ ಈಗ ರಾಜ್ಯ ರಾಜಕೀಯದಲ್ಲಿ ಕುತೂಹಲ ಹುಟ್ಟಿಸಿದೆ. ಈ ವಿಚಾರವಾಗಿ ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅಚ್ಚರಿಯ ಕಾರಣವೊಂದನ್ನು ಉಲ್ಲೇಖಿಸಿ ಫೇಸ್​​ಬುಕ್​ನಲ್ಲಿ ಪೋಸ್ಟ್ ಮಾಡಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಸಾಮಾನ್ಯವಾಗಿ ಬಜೆಟ್ ಮಂಡನೆ 10 ಗಂಟೆ ಅಥವಾ 11 ಗಂಟೆಗೆ ಮಾಡುವುದು ಸಾಮಾನ್ಯ. ಆದರೆ ಈ ಬಾರಿ 10.15ಕ್ಕೆ ಬಜೆಟ್ ಮಂಡನೆ ನಿಗದಿಯಾಗಿದೆ. ಇದಕ್ಕೆ ಕಾರಣವೇನು ಎಂಬ ಕುತೂಹಲ ರಾಜಕೀಯ ವಲಯದಲ್ಲೂ ಮೂಡಿದೆ.

ಸುರೇಶ್​​ ಕುಮಾರ್ ಫೇಸ್​ಬುಕ್ ಪೋಸ್ಟ್​​ನಲ್ಲೇನಿದೆ?

ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ಶುಕ್ರವಾರ ಬೆಳಗ್ಗೆ 10.15 ಗಂಟೆಗೆ ವಿಧಾನಸಭೆಯಲ್ಲಿ ಈ ವರ್ಷದ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. 10.00 ಗಂಟೆ ಅಲ್ಲ, 10.30 ಗಂಟೆ ಅಲ್ಲ, 11.00 ಗಂಟೆ ಅಲ್ಲ. ಏಕೆ 10.15 ಗಂಟೆಗೆ ಎಂದು ಕುತೂಹಲದಿಂದ ವಿಚಾರಿಸಿದಾಗ ಗೊತ್ತಾಗಿದ್ದು ಈ ವಿಚಾರ. ಏಕೆಂದರೆ ಶುಕ್ರವಾರ, ಬೆಳಗ್ಗೆ 10. 30 ಗಂಟೆಯಿಂದ ರಾಹುಕಾಲ! ಬೆಳಗ್ಗೆ 7.30 ಗಂಟೆ ಯಿಂದ 9 ಗಂಟೆಯವರೆಗೂ ಗುಳಿಕಾಲ. #ಮೂಢನಂಬಿಕೆ ಎಂಬ ಹ್ಯಾಷ್​ಟ್ಯಾಗ್​ನೊಂದಿಗೆ ಸುರೇಶ್ ಕುಮಾರ್ ಪೋಸ್ಟ್ ಮಾಡಿದ್ದಾರೆ.

ಸುರೇಶ್​​ ಕುಮಾರ್ ಫೇಸ್​ಬುಕ್ ಪೋಸ್ಟ್

ರಾಹುಕಾಲ ಆರಂಭಕ್ಕೂ ಮೊದಲು ಬಜೆಟ್ ಮಂಡನೆ ಆರಂಭಿಸಬೇಕೆಂಬ ಕಾರಣಕ್ಕೆ 10.15 ಗಂಟೆಯನ್ನು ಆಯ್ಕೆ ಮಾಡಿರಬಹುದೇ ಎಂಬ ಅನುಮಾನವನ್ನು ಸುರೇಶ್ ಕುಮಾರ್ ವ್ಯಕ್ತಪಡಿಸಿದ್ದಾರೆ.

ಸುರೇಶ್ ಕುಮಾರ್ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಕೆಲವರು ಇದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದರೆ, ಮತ್ತೊಬ್ಬರು ಇದರಲ್ಲಿ ರಾಜಕೀಯ ಟೀಕೆ ಅಡಗಿದೆ ಎಂದು ಹೇಳಿದ್ದಾರೆ.

ಆದರೆ ಸರ್ಕಾರ ಈ ಬಗ್ಗೆ ಯಾವುದೇ ದೃಢೀಕರಣ ನೀಡಿಲ್ಲ. ಸಾಮಾನ್ಯವಾಗಿ ವಿಧಾನಸಭೆಯ ಕಾರ್ಯಚಟುವಟಿಕೆಗಳ ವೇಳಾಪಟ್ಟಿ, ವಿಧಾನಮಂಡಲದ ಪ್ರಕ್ರಿಯೆಗಳು ಹಾಗೂ ಆಡಳಿತಾತ್ಮಕ ಕಾರಣಗಳ ಆಧಾರದ ಮೇಲೆ ಸಮಯ ನಿಗದಿಯಾಗುವುದು ರೂಢಿಯಾಗಿದೆ.

ಒಟ್ಟಿನಲ್ಲಿ, 10.15 ಗಂಟೆಯ ಸಮಯದ ಹಿಂದೆ ನಿಜವಾಗಿಯೂ ಜ್ಯೋತಿಷ್ಯ ಕಾರಣವಿದೆಯೇ ಅಥವಾ ಇದು ಕೇವಲ ರಾಜಕೀಯ ವ್ಯಂಗ್ಯವೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:30 am, Fri, 6 March 26

Follow Us