
ಬೆಂಗಳೂರು, ಫೆಬ್ರುವರಿ 16: ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ನಲ್ಲಿ ಹಿಂದುಳಿದ ವರ್ಗಗಳು ಮತ್ತು ಪರಿಶಿಷ್ಟ ಜಾತಿ ಹಾಗು ಪಂಗಡಗಳಿಗೆ (Scheduled Caste and Scheduled Tribes) ಇತಿಮಿತಿಯಲ್ಲೇ ಒಂದಷ್ಟು ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿದ್ದಾರೆ. ಕ್ರೈಸ್ ಯೋಜನೆ ಅಡಿಯಲ್ಲಿ 20 ಜಿಲ್ಲೆಗಳಲ್ಲಿ ಹೊಸ ವಸತಿ ಶಾಲೆಗಳನ್ನು (residential schools) ಸ್ಥಾಪಿಸಲಾಗುತ್ತಿದೆ. 29 ವಸತಿ ಸಂಕೀರ್ಣಗಳ ನಿರ್ಮಾಣವಾಗಲಿದೆ. ವಸತಿ ಶಾಲೆ ಮತ್ತು ವಿದ್ಯಾರ್ಥಿ ನಿಲಯಗಳ (hostels) ಸ್ಥಾಪನೆಗೆ 2,710 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಹಿಂದುಳಿದವರು, ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಈ ಬಜೆಟ್ನಲ್ಲಿ ಏನೇನು ಸಿಕ್ಕಿದೆ ಎಂಬ ವಿವರ ಇಲ್ಲಿದೆ…
ಇದನ್ನೂ ಓದಿ: ಕರ್ನಾಟಕ ಬಜೆಟ್ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮೀಸಲಿಟ್ಟಿದ್ದೇನು, ಇಲ್ಲಿದೆ ಮಾಹಿತಿ
ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ