Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಜೆಟ್: ಸಿಎಂ ಸಿದ್ದರಾಮಯ್ಯ ಬಳಿ 6 ಬೇಡಿಕೆಗಳನ್ನಿಟ್ಟ ಸ್ವಾಮೀಜಿಗಳ ನಿಯೋಗ

ಬಜೆಟ್ ಅಧಿವೇಶನ ಪ್ರಾರಂಭಕ್ಕೆ ದಿನಾಂಕ ನಿಗದಿಯಾಗಿದೆ. ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಆಯವ್ಯಯ ಮಂಡನೆಗೆ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ. ಮಂಡಿ ನೋವಿನ ನಡುವೆಯೂ ಬಜೆಟ್​ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ಸೋಮವಾರ ಸ್ವಾಮೀಜಿಗಳ ಜತೆ ಸಭೆ ನಡೆಸಿದ್ದು, ಈ ವೇಳೆ ಆರು ಬೇಡಿಕೆಗಳನ್ನಿಡಲಾಗಿದೆ. ಅವುಗಳು ಯಾವುವೆಂಬ ವಿವರ ಇಲ್ಲಿದೆ.

ಕರ್ನಾಟಕ ಬಜೆಟ್: ಸಿಎಂ ಸಿದ್ದರಾಮಯ್ಯ ಬಳಿ 6 ಬೇಡಿಕೆಗಳನ್ನಿಟ್ಟ ಸ್ವಾಮೀಜಿಗಳ ನಿಯೋಗ
ಸಿದ್ದರಾಮಯ್ಯ
Follow us
Anil Kalkere
| Updated By: Ganapathi Sharma

Updated on: Feb 25, 2025 | 7:34 AM

ಬೆಂಗಳೂರು, ಫೆಬ್ರವರಿ 25: ಸಿಎಂ ಸಿದ್ದರಾಮಯ್ಯ ಈ ಬಾರಿ 16ನೇ ಬಜೆಟ್ ಮಂಡಿಸಲಿದ್ದಾರೆ. ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಶುರುವಾಗಿದೆ. ಸತತ 2-3 ವಾರಗಳಿಂದ‌ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಗಳಲ್ಲಿ ವ್ಯಸ್ತರಾಗಿದ್ದಾರೆ. ವಿವಿಧ ಇಲಾಖೆಗಳ ಸಚಿವರು, ಅಧಿಕಾರಗಳ ಜೊತೆ ಸರಣಿ ಸಭೆ ನಡೆಸುತ್ತಿದ್ದಾರೆ. ವಿವಿಧ ಸಂಘ ಸಂಸ್ಥೆಗಳು, ವಿವಿಧ ಸಮುದಾಯಗಳ ಮಠಾಧೀಶರ ಜೊತೆಗೂ ಸೋಮವಾರ ಸಭೆ ನಡೆಸಿ ಸಮಾಲೋಚನೆ ನಡೆಸಿದ್ದಾರೆ‌. ಸಚಿವರಾದ ಎಂಬಿ ಪಾಟೀಲ್ ಹಾಗೂ ಈಶ್ವರ್ ಖಂಡ್ರೆ ಸೇರಿದಂತೆ ಲಿಂಗಾಯತ ಸಮುದಾಯದ ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದೆ. ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ, ಸಾಲು ಸಾಲು ಮನವಿಗಳನ್ನು ಸಲ್ಲಿಕೆ ಮಾಡಲಾಗಿದೆ.

ಬಸವಧರ್ಮ ಪೀಠ ಬಸವ ಕಲ್ಯಾಣದ ಸಿದ್ದರಾಮೇಶ್ವರ, ಅನುಭವ ಮಂಟಪದ ಶಿವಾನಂದ ಸ್ವಾಮೀಜಿ, ಹಿರೇಮಠ ಸಂಸ್ಥಾನದ ಬಸವಲಿಂಗ ದೇವರು, ಶ್ರೀ ಉರಿಲಿಂಗದ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಸೇರಿದಂತೆ ಹಲವರು ಸಿಎಂ ಜೊತೆಗಿನ ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಪ್ರಮುಖ 6 ಬೇಡಿಕೆಗಳನ್ನು ಸಿಎಂ ಮುಂದಿಡಲಾಗಿದೆ.

ಸ್ವಾಮೀಜಿಗಳ ಬೇಡಿಕೆಗಳೇನು?

  • ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಬೃಹತ್ ಬಸವ ಪುತ್ಥಳಿ ಪ್ರತಿಷ್ಠಾಪನೆ.
  • ಕರ್ನಾಟಕ ಕೇಂದ್ರ ಸ್ಥಾನ ಬೆಂಗಳೂರಿನಲ್ಲಿ 25 ಎಕರೆ ಪ್ರದೇಶದಲ್ಲಿ ಬೃಹತ್ ಶರಣ ದರ್ಶನ ಕೇಂದ್ರ (ಅಕ್ಷರಧಾಮ ಮಾದರಿಯಲ್ಲಿ) ಸ್ಥಾಪಿಸುವುದು.
  • ಅಲ್ಲಿ, ಉದ್ಯಾನವನ, ಗ್ರಂಥಾಲಯ, ಅತಿಥಿಕೇಂದ್ರ, ದಾಸೋಹ ಭವನ, ಸಭಾಂಗಣ ನಿರ್ಮಿಸುವುದು ಹಾಗೂ ಪ್ರವಾಸಿ ತಾಣವನ್ನಾಗಿಸುವುದು.
  • ಎಲ್ಲ ಶರಣರ ಜನ್ಮ ಸ್ಥಳ, ಐಕ್ಯಸ್ಥಳ ಹಾಗೂ ಇತರೆ ಸ್ಮಾರಕಗಳ ರಕ್ಷಣೆಗಾಗಿ ಪ್ರತ್ಯೇಕ ಶರಣ ಸ್ಮಾರಕ ರಕ್ಷಣೆ ಪ್ರಾಧಿಕಾರ ರಚಿಸುವುದು.
  • ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಸದ್ಬಳಕೆಯಾಗಲು ಅಲ್ಲಿಯೇ ವಚನ ವಿಶ್ವವಿದ್ಯಾಲಯ ಮತ್ತು ಸಂಶೋಧನ ಕೇಂದ್ರ ಆರಂಭಿಸುವುದು.
  • ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಸವಭವನ ನಿರ್ಮಿಸುವುದು.
  • ಆ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಸಬೇಕು.
  • ವಚನ ಸಾಹಿತ್ಯ ಸಂಗ್ರಹ, ಪ್ರಕಟಣೆ, ಮರು ಪ್ರಕಟಣೆ, ಹಸ್ತಪ್ರತಿಗಳ ದಾಖಲೀಕರಣ, ಶರಣ ಕ್ಷೇತ್ರಗಳ ಅಧ್ಯಯನ ಮತ್ತು ದಾಖಲೀಕರಣ, ವಿಚಾರ ಸಂಕಿರಣ, ಸಮ್ಮೇಳನಗಳು, ವಚನಾಧಾರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ಇತ್ಯಾದಿ ಚಟುವಟಿಕೆಗಳನ್ನು ನಡೆಸಲು ಶರಣ ಸಾಹಿತ್ಯ ಮತ್ತು ಸಂಸ್ಕೃತಿ ಪ್ರಸಾರಕ್ಕಾಗಿಯೇ ಇರುವ ಸಂಸ್ಥೆಗಳಿಗೆ ಅನುದಾನ ಒದಗಿಸುವುದು.
  • ಮೇಲಿನ ಎಲ್ಲ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರತಿ ವರ್ಷ 100 ಕೋಟಿ ರೂ.ನಂತೆ 5 ವರ್ಷಗಳಲ್ಲಿ 500 ಕೋಟಿ ರೂ. ಅನುದಾನವನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಹೆಸರಿನಲ್ಲಿ ಘೋಷಣೆ ಮಾಡಬೇಕು.

ಮಠಾಧೀಶರ ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ

ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ. ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೇ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ. ಪೂಜ್ಯರ ಬೇಡಿಕೆಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಜಾರಿಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ 16ನೇ ಬಜೆಟ್​​ಗೆ ಕೌಂಟ್ ಡೌನ್​: ರಾಜ್ಯದ ಇತಿಹಾಸದಲ್ಲೇ ಮೊದಲ ಬಿಗ್​ ಬಜೆಟ್

ರ್ಚ್ 7 ರಂದು ಬಜೆಟ್ ಮಂಡನೆ ಮಾಡಲಿರುವ ಸಿಎಂ ಸಿದ್ದರಾಮಯ್ಯ, ಸರಣಿ ಸಭೆಯಲ್ಲಿ ನಿರತರಾಗಿದ್ದಾರೆ. ಮಂಡಿ ನೋವಿನ ನಡುವೆಯೂ ಇಲಾಖಾವಾರು ಅಧಿಕಾರಿಗಳು, ಸಂಘ ಸಂಸ್ಥೆಗಳು ಹಾಗೂ ಸಮುದಾಯವಾರು ಸಭೆ ನಡೆಸಿ ಬೇಡಿಕೆ, ಮನವಿ ಸ್ವೀಕರಿಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು