Karnataka Budget 2021 Highlights: ಮಹಿಳಾ ಸರ್ಕಾರಿ ನೌಕರರಿಗೆ 6 ತಿಂಗಳು ಮಕ್ಕಳ ಆರೈಕೆ ರಜೆ; ಬಜೆಟ್ನಲ್ಲಿ ಮಹಿಳೆಯರಿಗಿದೆ ಹಲವು ಕೊಡುಗೆಗಳು
Karnataka Budget 2021 Highlights in Kannada: ಮಹಿಳಾ ದಿನಾಚರಣೆ ಹಿನ್ನೆಲೆ ವಿಶೇಷವಾದ ಯೋಜನೆಗಳನ್ನು ಘೋಷಿಸಿರುವ ಯಡಿಯೂರಪ್ಪ ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ ನೀಡುವುದಾಗಿ ಹೇಳಿದ್ದಾರೆ.
ಬೆಂಗಳೂರು: ವಿಧಾನಸಭೆಯಲ್ಲಿ ಇಂದು 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ವಿಶೇಷ ಯೋಜನೆಗಳನ್ನು ಘೋಷಿಸಿದ್ದಾರೆ. ಮಹಿಳಾ ಸರ್ಕಾರಿ ನೌಕರರಿಗೆ ಆರು ತಿಂಗಳ ಮಕ್ಕಳ ಆರೈಕೆ ರಜೆ ಸಿಗಲಿದೆ. ಸೇರ್ಫ ಸಿಟಿ ಯೋಜನೆಯಡಿ ಬೆಂಗಳೂರು ನಗರದ ಸಾರ್ವಜನಿಕ ಸ್ಥಳಗಳಲ್ಲಿ 7,500 ಕ್ಯಾಮೆರಾ ಅಳವಡಿಸಲಾಗುವುದು. ತಂತ್ರಜ್ಞಾನ ಆಧರಿತ ಇ-ಬೀಟ್ ಮೂಲಕ ರಾತ್ರಿ ಗಸ್ತು ಹೆಚ್ಚಿಸಲಾಗುವುದು ಎಂದು ಯಡಿಯೂರಪ್ಪ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.
ಈ ಬಾರಿಯೂ ವಲಯವಾರು ವಿಂಗಡಿಸಿ ಬಜೆಟ್ ಮಂಡನೆಯಾಗಿದ್ದು 5 ವಲಯಗಳಾಗಿ ವಿಂಗಡಿಸಲಾಗಿದೆ. ವಲಯ 1- ಕೃಷಿ ಮತ್ತು ಪೂರಕ ಚಟುವಟಿಕೆ, ವಲಯ 2 – ಆರ್ಥಿಕಾಭಿವೃದ್ಧಿ, ವಲಯ 3 – ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ, ವಲಯ 4 – ಬೆಂಗಳೂರು ಸಮಗ್ರ ಅಭಿವೃದ್ಧಿ, ವಲಯ 5 – ಸಂಸ್ಕೃತಿ, ಪರಂಪರೆ, ನೈಸರ್ಗಿಕ ಸಂಪನ್ಮೂಲ ಈ ರೀತಿಯಾಗಿ ವಲಯವಾರು ವಿಂಗಡಣೆ ಮಾಡಲಾಗಿದೆ.
ಮಹಿಳೆಯರಿಗಾಗಿ 37,188 ಕೋಟಿ ರೂ ಅನುದಾನ ಮಹಿಳೆಯರಿಗಾಗಿ 37,188 ಕೋಟಿ ರೂ ಅನುದಾನ ಘೋಷಿಸಲಾಗಿದೆ. ಮಹಿಳಾ ದಿನಾಚರಣೆ ಹಿನ್ನೆಲೆ ವಿಶೇಷವಾದ ಯೋಜನೆಗಳನ್ನು ಘೋಷಿಸಿರುವ ಯಡಿಯೂರಪ್ಪ ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ ನೀಡುವುದಾಗಿ ಹೇಳಿದ್ದಾರೆ. ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ ಆನ್‌ಲೈನ್ ಮಾರುಕಟ್ಟೆ ಸೌಲಭ್ಯ ಒದಗಿಸಲಾಗುವುದು. ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲು ಶೇ.4ರ ಬಡ್ಡಿ ದರದಲ್ಲಿ ಸಾಲ ನೀಡಲಿದ್ದು, 2 ಕೋಟಿ ರೂಪಾಯಿವರೆಗೂ ಸಾಲದ ಮೊತ್ತ ಇರಲಿದೆ. ಜಿಲ್ಲಾ ಕೇಂದ್ರಗಳಲ್ಲಿ 2 ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
ವನಿತಾ ಸಂಗಾತಿ ಹೆಸರಿನಲ್ಲಿ ಮಹಿಳೆಯರಿಗೆ ಬಸ್ ಪಾಸ್ ಬಿಎಂಟಿಸಿ ಬಸ್‌ಗಳಲ್ಲಿ ಗಾರ್ಮೆಂಟ್ ಉದ್ಯಮದ ಮಹಿಳಾ ನೌಕರರಿಗೆ ವನಿತಾ ಸಂಗಾತಿ ಹೆಸರಿನಲ್ಲಿ ಮಹಿಳೆಯರಿಗೆ ಬಸ್ ಪಾಸ್ ನೀಡಲಾಗುವುದು. ಮಹಿಳೆಯರ ಸುರಕ್ಷೆಗಾಗಿ ನಿರ್ಭಯಾ ಯೋಜನೆಯಡಿ ಬೆಂಗಳೂರಿನಲ್ಲಿ 7,500 ಸಿಸಿ ಕ್ಯಾಮರಾಗಳ ಅಳವಡಿಸಲಾಗುವುದು. ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲು Elevate women entrepreneurship ಯೋಜನೆ ಘೋಷಣೆ.
ಮಹಿಳಾ ಸ್ವಸಹಾಯ ಸಂಘಗಳ ಉತ್ಪಾದನೆಗಳಿಗೆ ಮಾರುಕಟ್ಟೆ ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿಯಲ್ಲಿ ಮಾರುಕಟ್ಟೆ ಸೌಲಭ್ಯ ಒದಗಿಸಲಾಗುವುದು. ಉತ್ಪನ್ನಗಳ ಮಾರಾಟಕ್ಕೆ 1 ವಾರಗಳ ಬೃಹತ್ ಮಾರಾಟ ಮೇಳ ನಡೆಯಲಿದೆ.ಗ್ರಾಮೀಣ ಯುವತಿಯರ ಸಬಲೀಕರಣಕ್ಕೆ ಮೃಧು ಕೌಶಲ್ಯ ಮತ್ತು ಸಂವಹನ ಕೌಶಲ್ಯ ತರಬೇತಿ ನೀಡಲಾಗುವುದು.
Karnataka Budget 2021 Live: CM Yediyurappa Begins Budget Speech Amid Ruckus By Congress
Video Link ► https://t.co/G4GY4emJgH#Budget2021 #KarnatakaBudget #KarnatakaBudgetLive #Congress #Ruckus #Yediyurappa #BudgetSpeech #VidhanaSoudha #TV9Kannada #KannadaNews pic.twitter.com/zRcyX7g0RG
— TV9 Kannada (@tv9kannada) March 8, 2021
ಬಜೆಟ್ ಭಾಷಣದ ಮುಖ್ಯಾಂಶಗಳು ಬಜೆಟ್ ಮಂಡನೆಗೆ ಮುನ್ನ ಭಾಷಣ ಮಾಡಿದ ಸಿಎಂ ಯಡಿಯೂರಪ್ಪ ಕೊರೊನಾ ಸಂಕಷ್ಟದ ನಡುವೆಯೂ ಸರ್ಕಾರ ಕೆಲಸ ಮಾಡಿದೆ. ಆರೋಗ್ಯ, ಮೂಲಸೌಕರ್ಯಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದೆ. ವೈದ್ಯರು, ಪೊಲೀಸರು, ಕಂದಾಯ, ನಗರಾಭಿವೃದ್ಧಿ ಸಿಬ್ಬಂದಿ ಕೊರೊನಾ ಸಂಕಷ್ಟದಲ್ಲಿ ಹಗಲಿರಳು ಕೆಲಸ ಮಾಡಿದ್ದಾರೆ. ಕೊರೊನಾ ಸಂಕಷ್ಟವನ್ನು ನಾವು ಒಂದು ಕ್ಷಣ ಮರೆಯುವಂತಿಲ್ಲ. ಕೊರೊನಾ ಸಂಕಷ್ಟ ಒಂದು ದುಸ್ವಪ್ನ ಎಂದು ಹೇಳಿದ್ದಾರೆ.
1.19 ಕೋಟಿ ಆರ್‌ಟಿಪಿಸಿಆರ್ ಟೆಸ್ಟ್ ಮಾಡಿಸಲಾಗಿದೆ. ಕೊರೊನಾಗೆ ಉಚಿತ ಚಿಕಿತ್ಸೆಯನ್ನು ನೀಡಲಾಗಿದೆ-ಸಿಎಂ ಕಾರ್ಮಿಕರಿಗೆ ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ. ಕೊರೊನಾ ಲಸಿಕೆ ಅಭಿಯಾನದಲ್ಲಿ ರಾಷ್ಟ್ರಮಟ್ಟದಲ್ಲಿ ಗಮನ ನಮ್ಮ ರಾಜ್ಯ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಇದಕ್ಕೆ ಪ್ರಧಾನಿ ಮೋದಿ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ ಯಡಿಯೂರಪ್ಪ.
ಇದನ್ನೂ ಓದಿ: Karnataka Budget 2021 LIVE: ಕರ್ನಾಟಕ ಬಜೆಟ್ 2021-22; ಬೆಂಗಳೂರು ಸಮಗ್ರ ಅಭಿವೃದ್ಧಿಗೆ 7795 ಕೋಟಿ ರೂಪಾಯಿ
Published On - 12:52 pm, Mon, 8 March 21