Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2025 Highlights: ಕರ್ನಾಟಕ ರಾಜ್ಯ ಬಜೆಟ್​ನ ಮುಖ್ಯಾಂಶಗಳು

Karnataka Budget 2025 Highlights in Kannada: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆ 16ನೇ ಬಾರಿಗೆ ಬಜೆಟ್​ ಮಂಡಿಸುತ್ತಿದ್ದಾರೆ. ಬಜೆಟ್​ ಗಾತ್ರ 4 ಲಕ್ಷ ಕೋಟಿ ರೂಪಾಯಿ ದಾಟಿದೆ. 2025-26ನೇ ಸಾಲಿನ ಕರ್ನಾಟಕ ಬಜೆಟ್​ ಗ್ಯಾರಂಟಿಗೆ ಹಣಕಾಸು ಪರಿಸ್ಥಿತಿ ಸರಿದೂಗಿಸಲು ವಿಶೇಷ ಆದ್ಯತೆ ನೀಡುವ ಜೊತೆಗೆ ಹಲವು ಮಹತ್ವ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. 2025-26ನೇ ಸಾಲಿನ ಬಜೆಟ್​ ಮುಖ್ಯಾಂಶಗಳು ಇಲ್ಲಿವೆ.

Karnataka Budget 2025 Highlights: ಕರ್ನಾಟಕ ರಾಜ್ಯ ಬಜೆಟ್​ನ ಮುಖ್ಯಾಂಶಗಳು
ಸಿಎಂ ಸಿದ್ದರಾಮಯ್ಯ
Follow us
ವಿವೇಕ ಬಿರಾದಾರ
|

Updated on:Mar 07, 2025 | 1:17 PM

ಬೆಂಗಳೂರು, ಮಾರ್ಚ್​ 07: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು 2025-26ನೇ ಸಾಲಿನ ಬಜೆಟ್​ ಮಂಡಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಗ್ಯಾರೆಂಟಿ ಹೊರತಾಗಿಯೂ ಬಜೆಜ್​ನಲ್ಲಿ ಘೋಷಣೆಗಳನ್ನು ಮಾಡಿದ್ದಾರೆ. ಬಜೆಟ್​ನಲ್ಲಿ ಪ್ರಮುಖ ಅಂಶಗಳು ಇಲ್ಲಿವೆ.

ಬಜೆಟ್​ನ ಮುಖ್ಯಾಂಶಗಳು

  • ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯನ್ನು 6 ದಿನಕ್ಕೆ ವಿಸ್ತರಿಸಲಾಗುವುದು. ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲಿಡಲಾಗಿದ್ದು, ಅಜೀಂ ಪ್ರೇಮ್​ಜಿ ಸಹಯೋಗದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
  • ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ ಮಾಡಲಾಗಿದೆ. 60 ಸಾವಿರ ರೂ.ನಿಂದ 72 ಸಾವಿರಕ್ಕೆ ತಸ್ತೀಕ್ ಮೊತ್ತ ಏರಿಸಲಾಗುವುದು. ಕರ್ನಾಟಕ ದೇವಾಲಯ ವಸತಿ ಕೋಶ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ದೇವಾಲಯಗಳ ಛತ್ರಗಳಲ್ಲಿ ರೂಮ್​ ಬುಕಿಂಗ್​ಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
  • ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮದಡಿ 5 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.
  • ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್​​​ ಸಿಂಗ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದರು.
  • ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಿಸಿದ್ದಾರೆ.  ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ ೧ ೨ಎ ಜತೆ ೨ಬಿ (ಮುಸ್ಲಿಂ) ಗೆ ಶೇಕಡಾ ೨೦ ರಷ್ಟು ಮೀಸಲಾತಿ ಘೋಷಿಸಿದ್ದಾರೆ.
  • ರಾಜ್ಯದಲ್ಲಿ ಜಲಸಾರಿಗೆ ಕ್ಷೇತ್ರದಲ್ಲಿ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರೂಸ್​, ವಾಟರ್​​ ಮೆಟ್ರೋ ಮತ್ತು ಕೋಸ್ಟಲ್​ ಬರ್ತ್​​ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಉತ್ತರ ಕನ್ನಡ ಜಿಲ್ಲೆ ಮಂಕಿ ಗ್ರಾಮದಲ್ಲಿ ಬಂದರು ನಿರ್ಮಾಣ ಮಾಡಲಾಗುವುದು. ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ ಅನುಭವನ ಕೇಂದ್ರ ತೆರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
  • ರೇಷ್ಮೆ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ನೀಡಿಲು ಸರ್ಕಾರ ನಿರ್ಧರಿಸಿದೆ.  ರೇಷ್ಮೆ ಅಭಿವೃದ್ಧಿ ಯೋಜನೆಗೆ 55 ಕೋಟಿ ರೂ. ಅನುದಾನ ನೀಡಲಾಗುವುದು. ಮಧ್ಯಮವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ, 120 ಕೊನೆಗಳ ಸ್ವಯಂಚಾಲಿತ ರೀಲಿಂಗ್‌ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲಾಗುವುದು. ರಾಮನಗರ, ಶಿಡ್ಲಘಟ್ಟ ಹೈಟೆಕ್‌ ರೇಷ್ಮೆಗೂಡಿನ ಮಾರುಕಟ್ಟೆಯ ಎರಡನೇ ಹಂತದ ಕಾಮಗಾರಿ ಅನುಷ್ಠಾನಕ್ಕೆ 250 ಕೋಟಿ ರೂ. ಮೀಸಲು ಇಡಲಾಗುವುದು. ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
  • ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ. ಮೀಸಲು
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ.
  • ಅತ್ಯಂತ ಹಿಂದುಳಿದ 46 ಅಲೆಮಾರಿ ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ಡಿ.ದೇವರಾಜ ಅರಸು ವಸತಿ ಶಾಲೆಗಳ ಪ್ರಾರಂಭ.
  •  ಇಂಜಿನಿಯರಿಂಗ್‌ ಮತ್ತು ಮೆಡಿಕಲ್‌ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಪ್ರಾರಂಭಿಸಲು 15 ಕೋಟಿ ರೂ. ಮೀಸಲು.
  • ವಿದ್ಯಾರ್ಥಿನಿಲಯಗಳ ಕಟ್ಟಡಗಳ ರಿಪೇರಿ/ದುರಸ್ತಿ ಮಾಡಲು 25 ಕೋಟಿ ರೂ.
  •  IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ಎರಡು ಸುಸಜ್ಜಿತ ವಸತಿ ನಿಲಯ ನಿರ್ಮಾಣ.
  • ಬೆಂಗಳೂರು ನಗರದಲ್ಲಿ ಹೊಸದಾಗಿ 9,000 ​ ಚಾಲಿತ ಬಸ್​ಗಳನ್ನು ರಸ್ತೆಗೆ ಇಳಿಸಲಾಗುವುದು. ​ಪಿಎಂ ಇ-ಡ್ರೈವ್​ ಯೋಜನೆಯಡಿ 14,750 ಹೊಸ ಬಸ್​ ಖರೀದಿಗೆ ನಿರ್ಧರಿಸಲಾಗಿದೆ. 14,750 ಬಸ್​ಗಳ ಪೈಕಿ 9 ಸಾವಿರ ಬಸ್​ ಬಿಎಂಟಿಸಿಗೆ ಸೇರ್ಪಡೆಗೆ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.
  • ಇ-ಜಮಾಬಂದಿ ತಂತ್ರಾಂಶ ಅಭಿವೃದ್ಧಿಪಡಿಸಿ ಪ್ರಸ್ತುತ ಸಾಲಿನಿಂದ ಜಾರಿ ಮಾಡಲಾಗುವುದು. ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ಖಾತೆ ಮಾಡಲು ಇ-ಪೌತಿ ಆಂದೋಲನ ಆರಂಭಿಸಲಾಗುವುದು. ಹೊಸದಾಗಿ ರಚನೆಯಾದ ತಾಲ್ಲೂಕುಗಳ ಪೈಕಿ 21 ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಂತ್ರಿ ಸಿದ್ದರಾಮಯ್ಯ ಹೇಳಿದರು.
  • ಪ್ರಾಜೆಕ್ಟ್ ಮೆಜೆಸ್ಟಿಕ್ ಯೋಜನೆ ನಿಲ್ದಾಣ ಉನ್ನತೀಕರಣಯಡಿ ಖಾಸಗಿ ಸಹಭಾಗಿತ್ವದಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಉನ್ನತೀಕರಣ ಮಾಡಲಾಗುವುದು. ಬೆಂಗಳೂರು ಸೇಫ್ ಸಿಟಿ ಯೋಜನೆಯಡಿ ಖಾಸಗಿ ಸಹಭಾಗಿತ್ವದಲ್ಲಿ ಮೆಜೆಸ್ಟಿಕ್‌ ಬಸ್ ನಿಲ್ದಾಣದಲ್ಲಿ ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ನಿರ್ಮಿಸಲು ಉದ್ದೇಶ ಹೊಂದಲಾಗಿದೆ. ಈ ಸಾಲಿನಲ್ಲಿ 42 ಸ್ವಯಂಚಾಲಿತ ಪರೀಕ್ಷಾ ಪಥಗಳ ನಿರ್ಮಾಣ ಪೂರ್ಣ. 2025-26ನೇ ಸಾಲಿನಲ್ಲಿ 3 ಕಡೆಗಳಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥಗಳ ನಿರ್ಮಾಣ ಮಾಡಲಾಗಿದೆ. ಐದು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿನ ದಾಖಲೆಗಳ ಡಿಜಿಟಲೀಕರಣಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ಹೇಳಿದರು.
  • ರಾಜ್ಯದ ಆಯ್ದ 10 ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನ ನೀಡಲಾಗುವುದು.  ಪ್ರವಾಸಿ ಮಿತ್ರರ ಸಂಖ್ಯೆ 1,000 ಕ್ಕೆ  ಹೆಚ್ಚಳ ಹಾಗೂ 24X7 ಪ್ರವಾಸಿ ಸಹಾಯವಾಣಿ ತೆರೆಯಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಪ್ರವಾಸಿ ತಾಣಗಳ ಸಮಗ್ರ ಮಾಹಿತಿ ಸಂಗ್ರಹಿಸಲು ONE- TAC Digital Grid ಬಳಕೆ ಮಾಡಲಾಗುವುದು. ಐತಿಹಾಸಿಕ ಲಕ್ಕುಂಡಿಯಲ್ಲಿನ ಪಾರಂಪರಿಕ ದೇವಾಲಯಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಮೈಸೂರು ನಗರದ ಹಳೆ ಜಿಲ್ಲಾಧಿಕಾರಿಗಳ ಕಛೇರಿ (ಅಠಾರ ಕಛೇರಿ) ಕಟ್ಟಡವನ್ನು ರಾಜ್ಯ ಮಟ್ಟದ ವಸ್ತುಸಂಗ್ರಹಾಲಯವಾಗಿ ಪರಿವರ್ತನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • ಪತ್ರಕರ್ತರ ಮಾಸಾಶನ 15 ಸಾವಿರ ರೂ.ಗೆ ಹಾಗೂ ಕುಟುಂಬ ಮಾಸಾಶನ 7,500 ರೂ.ಗೆ ಹೆಚ್ಚಳ ಮಾಡಲಾಗಿದೆ.
  • ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ ಒಟಿಟಿ ವೇದಿಕೆ ಸೃಜಿಸಲು ಕ್ರಮ ಕೈಗೊಳ್ಳಲಾಗುವುದು. ಮುಂದಿನ 3 ವರ್ಷಗಳ ಅವಧಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆ  ಮಾಡಲಾಗುವುದು. ಎಲ್ಲಾ ವಿಧದ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರ 200 ರೂ.ಗೆ ಮಿತಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು.
  • ಮಾನ್ಯತೆ ಹೊಂದಿರುವ ಪತ್ರಕರ್ತರು ಹಾಗೂ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ಅನುಷ್ಠಾನ ಮಾಡಲಾಗುವುದು.

ಕರ್ನಾಟಕ ಬಜೆಟ್ ಲೈವ್​ ಅಪ್​ಡೇಟ್​​ಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:17 am, Fri, 7 March 25

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು