Karnataka Budget Session 2023 Highlights: ವಿಧಾನಮಂಡಲ ಅಧಿವೇಶನ ಸೋಮವಾರಕ್ಕೆ ಮೂಂದೂಡಿಕೆ
Karnataka Assembly Session 2023 News Live Updates: ಫೆಬ್ರುವರಿ 17ರಂದು ರಾಜ್ಯ ಬಜೆಟ್ ಮಂಡನೆಯಾಗಲಿದ್ದು, 24ರವರೆಗೂ ಅಧಿವೇಶನ ನಡೆಯಲಿದೆ. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನಸಭೆಯಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.
ಇಂದಿನಿಂದ (ಫೆ.10) ಪ್ರಾರಂಭವಾಗುವ ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನ ಮಹತ್ವ ಪಡೆದುಕೊಂಡಿದೆ. ಆಡಳಿತಾರೂಢ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಇದು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲಿದ್ದು, ಬಿಜೆಪಿ ರಾಜ್ಯದ ಜನರಿಗೆ ಯಾವ ಗಿಫ್ಟ್ ಕೊಡಲಿದೆ ಎಂದು ಕಾದುನೋಡಬೇಕಿದೆ. ಈ ಮೂಲಕ ಒಂದಿಷ್ಟು ಮತಗಳನ್ನು ಸೆಳೆಯುವ ಸಾಧ್ಯತೆ ಇದೆ. ಫೆಬ್ರುವರಿ 17ರಂದು ಬಜೆಟ್ ಮಂಡನೆಯಾಗಲಿದ್ದು (Karnataka Budget Session), 24ರವರೆಗೂ ಅಧಿವೇಶನ ನಡೆಯಲಿದೆ. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ವಿಧಾನಸಭೆಯಲ್ಲಿ ಜಂಟಿ ಅಧಿವೇಶನ (Join Session) ಉದ್ದೇಶಿಸಿ ಮಾತನಾಡಲಿದ್ದಾರೆ. ಅಧಿವೇಶನ ಆರಂಭದ ಮೊದಲ ವಾರ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಮತ್ತು ವಂದನಾ ನಿರ್ಣಯ ನಡೆಯಲಿದೆ. ಆ ಬಳಿಕ ಬಜೆಟ್ ಮಂಡನೆ, ಹಾಗು ನಂತರ 4 ದಿನಗಳ ಕಾಲ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.
LIVE NEWS & UPDATES
-
Karnataka Budget Session 2023 Live: ವಿಧಾನಪರಿಷತ್ ಕಲಾಪ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ
ವಿಧಾನಪರಿಷತ್ ಸಭಾಪತಿ ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ.
-
Karnataka Budget Session 2023 Live: ವಿಧಾನಸಭೆ ಕಲಾಪ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ
ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ.
-
Karnataka Budget Session 2023 Live: ವಿಧಾನಸಭೆಯಲ್ಲಿ ಗಣ್ಯರಿಗೆ ಸಂತಾಪ
ವಿಧಾನಸಭೆ ಕಲಾಪ ಆರಂಭವಾಗಿದ್ದು, ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗಿದೆ. ಡಾ. ಹೆಗ್ಗಪ್ಪ ದೇಶಪ್ಪ ಲಮಾಣಿ, ಪೆರಿಟಿ ತಿಮ್ಮಪ್ಪ ಹೆಗಡೆ, ಶಿವಾನಂದ್ ಅಂಬಡಗಟ್ಟಿ, ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ, ಡಾ. ಎಂಕೆ ಪಾಂಡುರಾಂಗ ಶೆಟ್ಟಿ, ವಾಣಿ ಜಯರಾಂ, ಬಿ.ಕೆ.ಎಸ್ ವರ್ಮಾ ಅವರಿಗೆ ಸಂತಾಪ ಸೂಚಿಲಾಗಿದೆ.
Karnataka Budget Session 2023 Live: ವಿಧಾನಪರಿಷತ್ನಲ್ಲಿ ಅಗಲಿದ ಗಣ್ಯರಿಗೆ ಸಂತಾಪ
ವಿಧಾನಪರಿಷತ್ ಕಲಾಪ ಪ್ರಾರಂಭವಾಗಿದ್ದು, ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗಿದೆ. ಡಾ.ಎಚ್ ಡಿ ಲಮಾಣಿ, ಹಿರಿಯ ಸಂಶೋಧಕ ಸಾಹಿತಿ ಡಾ.ಚಂದ್ರಶೇಖರ ಸಾರಾ ಅಬೂಬಕ್ಕರ್, ಡಾ.ಪಾಂಡುರಂಗ ಶೆಟ್ಟಿ, ಚಂದ್ರಶೇಖರ ಕೆದ್ಲಾಯ, ಕೆವಿ ತಿರುಮಲೇಶ್, ವಾಣಿ ಜಯರಾಂ, ಬಿ.ಕೆ ಎಸ್ ವರ್ಮ, ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಸಂತಾಪ ಸೂಚಿಲಾಗಿದೆ
Karnataka Budget Session 2023 Live: ರಾಜ್ಯಪಾಲರ ಭಾಷಣಕ್ಕೆ ವಿಪಕ್ಷ ವಿಪಕ್ಷದ ಹಲವು ನಾಯಕರು ಗೈರು
ಬೆಂಗಳೂರು: ಬಜೆಟ್ ಅಧಿವೇಶನದ ರಾಜ್ಯಪಾಲರ ಭಾಷಣಕ್ಕೆ ವಿಪಕ್ಷದ ಹಲವು ನಾಯಕರು ಗೈರಾಗಿದ್ದರು. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷ ಉಪ ನಾಯಕ ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಹಾಜರಿರಲಿಲ್ಲ. ಉಪ ನಾಯಕ ಯು.ಟಿ ಖಾದರ್ ಹಾಗೂ ಜೆಡಿಎಸ್ನ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಭಾಗಿಯಾಗಿದ್ದರು.
Karnataka Budget Session 2023 Live: ಗೋವುಗಳ ಪೋಷಣೆಗಾಗಿ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ
ಗೋವುಗಳ ರಕ್ಷಣೆಗಾಗಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. ಗೋವುಗಳ ಪೋಷಣೆಗಾಗಿ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತರಲಾಗಿದೆ. 1000 ಗೋ ಶಾಲೆಗಳಗಳನ್ನು ನಿರ್ಮಿಸಲಾಗಿದೆ. ಈ ಮೂಲಕ ದೇಶದಲ್ಲಿ ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ.
Karnataka Budget Session 2023 Live: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಆರಂಭ
ಆಡಳಿತಾರೂಢ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಇದಾಗಿದ್ದು, ವಿಧಾನಮಂಡಲದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಆರಂಭಿಸಿದ್ದಾರೆ.
Karnataka Budget Session 2023 Live: ರಾಜ್ಯಪಾಲರಿಗೆ ರೆಡ್ ಕಾರ್ಪೆಟ್ ಸ್ವಾಗತ; ಸಿಎಂ, ಸ್ಪೀಕರ್ ಆಗಮನ
ಬೆಂಗಳೂರು: ಅಧಿವೇಶನದ ಮೊದಲ ದಿನ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಸ್ವಾಗತಕ್ಕೆ ವಿಧಾನಸೌಧ ಸಿದ್ಧವಾಗಿದೆ. ರಾಜ್ಯಪಾಲರು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೂಲಕ ಪ್ರವೇಶಿಸಲಿದ್ದು, ಸ್ವಾಗತಕ್ಕೆ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ರೆಡ್ ಕಾರ್ಪೆಟ್ ಹಾಕಲಾಗಿದೆ. ಅಶ್ವರೂಢ ಬೆಂಗಾವಲು ಪಡೆ, ವಾದ್ಯವೃಂದ ಸಿದ್ಧವಾಗಿದೆ. ರಾಜ್ಯಪಾಲರ ಸ್ವಾಗತಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಜೆ.ಸಿ.ಮಾಧುಸ್ವಾಮಿ ಆಗಮಿಸಿದ್ದಾರೆ.
Karnataka Budget Session 2023 Live: ಹುಟ್ಟಿ-ಬೆಳೆದ ಊರು ಹುಬ್ಬಳ್ಳಿಗೆ ಸಿಎಂ ಬೊಮ್ಮಾಯಿ ನೀಡುತ್ತಾರಾ ವಿಶೇಷ ಪ್ಯಾಕೇಜ್
ಚುನಾವಣೆ ಹತ್ತಿರದಲ್ಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಜೆಟ್ ಮೇಲೆ ಹೆಚ್ಚಿನ ನಿರೀಕ್ಷೆ ಇದೆ. ಹಿನ್ನೆಲೆ 2023-24ನೇ ಸಾಲಿನ ಬಜೆಟ್‌ನಲ್ಲಿ ಅವರು ಹುಟ್ಟಿ-ಬೆಳೆದ ಊರು ವರ್ಷದ ಹೊಸ್ತಿಲಲ್ಲಿ ಮಂಡಿಸುತ್ತಿರುವ ಬಗ್ಗೆ ಹುಬ್ಬಳ್ಳಿ-ಧಾರವಾಡಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುತ್ತಾರೆ ಎಂಬುವುದು ವಾಣಿಜ್ಯ ನಗರಿ ಮಂದಿಯ ಆಶಯ. ಜಿಲ್ಲೆಯ ಕೈಗಾರಿಕೋದ್ಯಮಿಗಳಲ್ಲಿ ಬಹಳಷ್ಟು ನಿರೀಕ್ಷೆಗಳಿವೆ.
Karnataka Budget Session 2023 Live: ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ಹಣಕಾಸಿನ ನೆರವು: ಭರವಸೆ ನೀಡಿದ್ದ ಸಿಎಂ ಬೊಮ್ಮಾಯಿ
ಖಾದಿ ಮತ್ತು ಗ್ರಾಮೋದ್ಯೋಗದಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದ್ದು, ಇದಕ್ಕೆ ಮತ್ತಷ್ಟು ಒತ್ತು ನೀಡಲು ಬಜೆಟ್‌ನಲ್ಲಿ ವಿಶೇಷ ಹಣಕಾಸಿನ ನೆರವು ನೀಡಲಾಗುವುದು ಎಂದು ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು, ಇದು ನೆರವೇರುತ್ತಾ ಕಾದು ನೋಡಬೇಕಿದೆ.
Karnataka Budget Session 2023 Live: ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ ಭರ್ಜರಿ ಘೋಷಣೆ ಸಾಧ್ಯತೆ
ಕೇವಲ ರಾಜ್ಯ ವಿಧಾನಸಭಾ ಚುನಾವಣೆ ದೃಷ್ಟಿಯಲ್ಲಿ ಮಾತ್ರವಲ್ಲದೇ ಬಿಬಿಎಂಪಿ ಚುನಾವಣೆ ಸಹ ಮುಂದೆ (BBMP Elections) ಬರುತ್ತಿದೆ ಮತ್ತು ಬಸವರಾಜ ಬೊಮ್ಮಾಯಿಯವರ ಬಳಿಯಲ್ಲೇ ಬೆಂಗಳೂರು ನಗರಾಭಿವೃದ್ಧಿ ಖಾತೆ ಇದೆ. ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ 198 ರಿಂದ 243ಕ್ಕೆ ಏರಿಕೆ ಆಗಿವೆ. ಹೊಸದಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರಿರುವ ಹಳ್ಳಿಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ಕೊಡಲೇಬೇಕಾಗಿದೆ. ಆದುದರಿಂದ ರಾಜಧಾನಿ ಬೆಂಗಳೂರಿಗೆ ಬಜೆಟ್‌ನಲ್ಲಿ ಹೆಚ್ಚಿನ ಹಣ ನೀಡುವ ನಿರೀಕ್ಷೆ ಇದೆ.
Karnataka Budget Session 2023 Live: ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ
ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ವಿಧಾನಸೌಧದಿಂದ 2 ಕಿಮೀ ಸುತ್ತಲಿನ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ. ಈ ಪ್ರದೇಶದಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ಮೆರವಣಿಗೆ, ಪ್ರತಿಭಟನೆ, ಸಭೆಗಳನ್ನು ಆಯೋಜಿಸುವಂತಿಲ್ಲ. ಯಾವುದೇ ಪ್ರತಿಕೃತಿಗಳ ದಹನ ಮಾಡುವುದಾಗಲೀ, ಪ್ರದರ್ಶನ ಮಾಡುವುದಾಗಲೀ ನಿಷೇಧ ಇದೆ ಎಂದು ಬೆಂಗಳೂರುನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
Published On - Feb 10,2023 9:07 AM