AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget Session: ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ, 16ಕ್ಕೆ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನ ಇಂದು ಆರಂಭವಾಗುತ್ತಿದ್ದು, ವಿವಿಧ ವಿಷಯಗಳು ಚರ್ಚೆಗೆ ಬರಲಿವೆ. ಇದೇ 16ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಾಗಿವೆ. ಮತ್ತೊಂದೆಡೆ ಬಿಜೆಪಿ ಹಾಗೂ ಕಾಂಗ್ರೆಸ್ ಆರೋಪ, ಪ್ರತ್ಯಾರೋಪಗಳಿಗೂ ಸದನ ಸಾಕ್ಷಿಯಾಗಲಿದೆ.

Karnataka Budget Session: ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ, 16ಕ್ಕೆ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ
ವಿಧಾನಸೌಧ
Follow us
Anil Kalkere
| Updated By: Ganapathi Sharma

Updated on: Feb 12, 2024 | 6:50 AM

ಬೆಂಗಳೂರು, ಫೆಬ್ರವರಿ 12: ವಿಧಾನಮಂಡಲ ಬಜೆಟ್ ಅಧಿವೇಶನ (Budget Session) ಇಂದಿನಿಂದ (ಸೋಮವಾರ) ಆರಂಭವಾಗುತ್ತಿದೆ. ಫೆಬ್ರವರಿ 23ರವರೆಗೂ ಅಧಿವೇಶನ ನಡೆಯಲಿದೆ. ಆರೋಪ ಪ್ರತ್ಯಾರೋಪಕ್ಕೆ ಆಡಳಿತ ಮತ್ತು ಪ್ರತಿಪಕ್ಷಗಳು ಸಜ್ಜಾಗಿವೆ. ಬಜೆಟ್ (Karnataka Budget) ಅಧಿವೇಶನ ಆಗಿರುವುದರಿಂದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಜನರ ನಿರೀಕ್ಷೆಯೂ ಹೆಚ್ಚಿದೆ. ಇತ್ತೀಚಿಗಷ್ಟೆ ಕೇಂದ್ರದ ಬಜೆಟ್ ಮಂಡನೆಯಾಗಿದೆ. ಅನುದಾನ ತಾರತಮ್ಯ ವಿಚಾರಕ್ಕೆ ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ್ದರು. ಕೇಂದ್ರ ಸರ್ಕಾರ ರಾಜ್ಯದ ತೆರಿಗೆ ಪಾಲು ನೀಡಿಲ್ಲ ಎಂದು ಕೈ ನಾಯಕರು ದಿಲ್ಲಿಯಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದರು. ತೆರಿಗೆ ವಿಚಾರಕ್ಕೆ ವಾಗ್ಯುದ್ಧ ಮುಂದುವರಿದಿರುವ ಬೆನ್ನಲ್ಲೇ ರಾಜ್ಯದಲ್ಲಿ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಇದರೊಂದಿಗೆ ಮತ್ತೊಂದು ಸುತ್ತಿನ ಸಮರಕ್ಕೆ ವೇದಿಕೆ ಸಜ್ಜಾಗಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಹೊಸ ಸರ್ಕಾರ ಬಂದಾಗಿನಿಂದ ಇಲ್ಲಿಯವರೆಗೆ ಆಗಿರುವ ಪ್ರಗತಿ, ಗ್ಯಾರಂಟಿ ಅನುಷ್ಠಾನ ಹಾಗೂ ಮುನ್ನೋಟವನ್ನು ನೀಡಲಿದ್ದಾರೆ.

ಮಂಗಳವಾರದಿಂದ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಆರಂಭವಾಗಲಿದೆ. ಭಾಷಣದ ಚೌಕಟ್ಟು ಹೊರತಾಗಿ ಹಲವು ವಿಷಯಗಳು ಪ್ರಸ್ತಾಪವಾಗುವ ಸಾಧ್ಯತೆ ಇದೆ. ಆಡಳಿತ, ವಿಪಕ್ಷಗಳ ಆರೋಪ, ಪ್ರತ್ಯಾರೋಪಕ್ಕೆ ಸದನ ಸಾಕ್ಷಿಯಾಗಲಿದೆ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಹತ್ತಾರು ವಿಷಯ ಇಟ್ಟುಕೊಂಡ ಪ್ರತಿಪಕ್ಷಗಳು ಮುಗಿಬೀಳಲು ಸಜ್ಜಾಗಿವೆ.

ಪ್ರತಿಪಕ್ಷಗಳ ಬತ್ತಳಿಕೆಯಲ್ಲಿರುವ ಅಸ್ತ್ರಗಳೇನು?

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪವನ್ನು ಬಿಜೆಪಿ ಪ್ರಮುಖ ಅಸ್ತ್ರಮಾಡಿಕೊಳ್ಳುವ ಸಾಧ್ಯತೆಯಿದೆ. ಈ ಹಿಂದೆ ಕಾಂಗ್ರೆಸ್ ಪರವಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಈಗ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಆರೋಪ ಮಾಡಿದ್ದಾರೆ. ಇನ್ನು ಮಂಡ್ಯದ ಹನುಮ ಧ್ವಜ ಪ್ರಕರಣ, ಹಾನಗಲ್ ಅತ್ಯಾಚಾರ ಕೇಸ್ ಸೇರಿ ವಿವಿಧ ಪ್ರಕರಣಗಳನ್ನು ನಿಭಾಯಿಸುವಲ್ಲಿ ಸರ್ಕಾರದ ವೈಫಲ್ಯವನ್ನೂ ಬಿಜೆಪಿ ಪ್ರಸ್ತಾಪಿಸುವ ಸಾಧ್ಯತೆ ಇದೆ. ಮೂಲಸೌಕರ್ಯ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕೊರತೆ. ಗ್ಯಾರಂಟಿ ಯೋಜನೆಗಳ ಅಸಮರ್ಪಕ ಅನುಷ್ಠಾನ, ರಾಜ್ಯದ ಆರ್ಥಿಕ ಪರಿಸ್ಥಿತಿ-ಕೇಂದ್ರದ ತೆರಿಗೆ ಹಂಚಿಕೆ ವಿಚಾರ ಚರ್ಚೆಯಾಗುವ ಸಾಧ್ಯತೆಯಿದ್ದು, ಅನುದಾನ ಕುರಿತು ಪರಸ್ಪರ ದಾಖಲೆ ಬಿಡುಗಡೆ ನಿರೀಕ್ಷೆಯಿದೆ.

ಸಮರ್ಪಕವಾಗಿ ಬರ ಪರಿಹಾರ ಬಿಡುಗಡೆ ಆಗದೇ ಇರುವುದು. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರ & ಕುಡಿಯುವ ನೀರಿನ ಸಮಸ್ಯೆ. ಲ್ಯಾಪ್‌ಟಾಪ್‌ ಖರೀದಿ ಅಕ್ರಮ, ಗ್ರಂಥಾಲಯ ಇಲಾಖೆ ಕರ್ಮಕಾಂಡ. ಕೆಪಿಎಸ್‌ಸಿ ಅಧ್ಯಕ್ಷರು, ಕಾರ್ಯದರ್ಶಿ ನಡುವಿನ ಕಿತ್ತಾಟ. ತಡೆಯಾಗಿರುವ ನೇಮಕ ಪ್ರಕ್ರಿಯೆ ಮತ್ತು ಪರಿಣಾಮಗಳು. ಮುಸ್ಲಿಮರ ತುಷ್ಟೀಕರಣ, ವಿಪಕ್ಷ ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊರತೆ ವಿಚಾರ ಮುಂದಿಟ್ಟು ಬಿಜೆಪಿ ಸಿಡಿದೇಳುವ ಸಾಧ್ಯತೆಯಿದೆ.

ಕಾಂಗ್ರೆಸ್ ಅಸ್ತ್ರಗಳೇನು?

ಕೇಂದ್ರದಿಂದ ಆಗುತ್ತಿರುವ ತೆರಿಗೆ ಹಂಚಿಕೆಯ ತಾರತಮ್ಯ. ಬರ ನಿರ್ವಹಣೆಗೆ ಬಿಡುಗಡೆಯಾಗದ ಕೇಂದ್ರದ ಅನುದಾನ. ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆಗಿರುವ ಅನುಕೂಲ. ಹಿಂದಿನ ಬಿಜೆಪಿ ಅವಧಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆ. ಪಿಎಸ್‌ಐ ಪರೀಕ್ಷೆ ಅಕ್ರಮದ ತನಿಖಾ ಆಯೋಗದ ವರದಿ ಸಲ್ಲಿಕೆಯಾಗಿರುವುದನ್ನು ಪ್ರಸ್ತಾಪಿಸಲಿದ್ದಾರೆ. ಮಂಡ್ಯದಲ್ಲಿ ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಕೆ ಮಾಡಿದ ಬಿಜೆಪಿ ನಾಯಕರ ಹೇಳಿಕೆ ಖಂಡಿಸುವುದು, ಬಿಜೆಪಿ ಅವಧಿಯಲ್ಲಿ ಕಿಯೋನಿಕ್ಸ್‌ನಲ್ಲಿನ ಅಕ್ರಮಗಳನ್ನು ಮುಂದಿಟ್ಟು ವಿಪಕ್ಷವನ್ನು ಕಟ್ಟಿಹಾಕಲು ಕಾಂಗ್ರೆಸ್ ನಾಯಕರು ಮುಂದಾಗಬಹುದು.

ಜಾತಿ ಗಣತಿ ಗುದ್ದಾಟಕ್ಕೆ ಸಿಗುತ್ತಾ ಮುಕ್ತಿ?

ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಈ ಹಿಂದಿನ ಅಧ್ಯಕ್ಷರ ಅವಧಿಯಲ್ಲಿ ಸಂಗ್ರಹಿಸಿದ್ದ ಅಂಕಿ, ಅಂಶಗಳನ್ನು ಆಧಾರವಾಗಿಟ್ಟುಕೊಂಡು ಜಾತಿ ಗಣತಿ ವರದಿ ಸಿದ್ಧಪಡಿಸಿಕೊಂಡಿದೆ. ವರದಿ ಮಂಡನೆಗೆ ಸರ್ಕಾರದ ಕಡೆಯಿಂದ ಸೂಚನೆ ನಿರೀಕ್ಷಿಸುತ್ತಿದ್ದು, ವಿಧಾನ ಮಂಡಲ ಅಧಿವೇಶನ ಕೊನೆಯ ಹಂತದಲ್ಲಿ ವರದಿ ಸ್ವೀಕಾರ ಪ್ರಕ್ರಿಯೆ ನಡೆಯಬಹುದು ಎಂಬ ಚರ್ಚೆ ಕಾಂಗ್ರೆಸ್‌ನಲ್ಲಿದೆ.

ಇದನ್ನೂ ಓದಿ: ಬಿವೈ ವಿಜಯೇಂದ್ರ ಜೊತೆ ರಾಜಿಯಾಗುವ ಪ್ರಶ್ನೆಯೇ ಇಲ್ಲ: ಶಾಸಕ ಯತ್ನಾಳ್ ವಾಗ್ದಾಳಿ

ಬಿಜೆಪಿ ಜತೆ ಜೆಡಿಎಸ್ ಸಹಜವಾಗಿ ತನ್ನ ಅಸ್ತಿತ್ವವನ್ನು ತೋರ್ಪಡಿಸಲು ಒಂದಷ್ಟು ಹೋರಾಟ ನಡೆಸುವ ಉದ್ದೇಶ ಹೊಂದಿದೆ. ಒಟ್ಟಾರೆ ಇಂದಿನಿಂದ ನಡೆಯುವ ಬಜೆಟ್ ಅಧಿವೇಶನ ಆಡಳಿತ-ವಿಪಕ್ಷಗಳ ಜಟಾಪಟಿಗೆ ಸಾಕ್ಷಿಯಾಗುವುದು ಖಚಿತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್