2024ರ ಫೆಬ್ರವರಿಯಲ್ಲಿ ವಿಧಾನಮಂಡಲ ಜಂಟಿ ಮತ್ತು ಬಜೆಟ್ ಅಧಿವೇಶನ: HK ಪಾಟೀಲ್
Karnataka budget session: ವಿಧಾನಮಂಡಲ ಜಂಟಿ ಮತ್ತು ಬಜೆಟ್ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. 2024ರ ಫೆಬ್ರವರಿಯಲ್ಲಿ ವಿಧಾನಮಂಡಲ ಜಂಟಿ ಮತ್ತು ಬಜೆಟ್ ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು, (ಡಿಸೆಂಬರ್ 21): ರಾಜ್ಯ ವಿಧಾನಮಂಡಲ ಜಂಟಿ ಮತ್ತು ಬಜೆಟ್ ಅಧಿವೇಶನದ ಮುಹೂರ್ತ ಫಿಕ್ಸ್ ಆಗಿದೆ. ಇಂದು (ಡಿಸೆಂಬರ್ 21) ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್, 2024ರ ಫೆಬ್ರವರಿಯಲ್ಲಿ ವಿಧಾನಮಂಡಲ ಜಂಟಿ ಮತ್ತು ಬಜೆಟ್ ಅಧಿವೇಶನ (Karnataka budget session) ನಡೆಯಲಿದೆ ಎಂದು ಮಾಹಿತಿ ನೀಡಿದರು.