2023 ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಬೊಮ್ಮಾಯಿ
ಮುಂದಿನ ಹಣಕಾಸು ವರ್ಷದ ರಾಜ್ಯ ಬಜೆಟ್ನ್ನು 2023 ಫೆಬ್ರವರಿಯಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿ: ಮುಂದಿನ ಹಣಕಾಸು ವರ್ಷದ ರಾಜ್ಯ ಬಜೆಟ್ನ್ನು (Budget) 2023 ಫೆಬ್ರವರಿಯಲ್ಲಿ (Faubrey) ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಬೆಳಗಾವಿಯ ಚಳಿಗಾಲದ ಅಧಿವೇಶನ ಮುಗಿದ ನಂತರ, ಜನವರಿಯಲ್ಲಿ ಬಜೆಟ್‌ಗೆ ಸಿದ್ಧತೆಗಳನ್ನು ಮಾಡಲು ಎಲ್ಲಾ ಇಲಾಖೆಗಳು ಮತ್ತು ಕೆಲವು ಮಂಡಳಿಗಳು ಮತ್ತು ನಿಗಮಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಶಿಗ್ಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಫೆಬ್ರವರಿಯಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ. ಈ ಸಂಬಂಧ ಹಣಕಾಸು ಇಲಾಖೆ ಜೊತೆ ಸಭೆ ನಡೆಸುತ್ತೇನೆ. ಈ ಬಜೆಟ್ ಅಧಿವೇಶನವು ಪ್ರಸ್ತುತ ವಿಧಾನಸಭೆಯ ಕೊನೆಯ ಅಧಿವೇಶನವಾಗಿದ್ದು, ನಂತರ ವಿಧಾನಸಭಾ ಚುನಾವಣೆಗಳು ನಡೆಯಲಿವೆ ಎಂದರು.
ಹಾವೇರಿಯಲ್ಲಿ 100 ಕೋಟಿ ವೆಚ್ಚದಲ್ಲಿ ಮೆಗಾ ಡೇರಿ
ಹಾವೇರಿಯಲ್ಲಿ 100 ಕೋಟಿ ವೆಚ್ಚದಲ್ಲಿ ಮೆಗಾ ಡೇರಿ ಮಾಡಿದ್ದೇನೆ. ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದೇನೆ. 30 ವರ್ಷಗಳಿಂದ ಯಾರೂ ಮಾಡಿರಲಿಲ್ಲ, ನಾನು ಮಾಡಿದ್ದೇನೆ. ಇದನ್ನ ಮಾಡಬೇಡಿ, ಜೇನುಗೂಡಿಗೆ ಕಲ್ಲು ಹೊಡೆದಂತೆ ಅಂತಿದ್ದರು. ಆದರೆ ನಾನು SC, ST ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದೇನೆ. ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿ ಯಶಸ್ವಿಯಾಗ್ತೇನೆ. ಜನಪ್ರಿಯರಾದರೆ ಸಾಲದು, ಜನಪರವಾಗಿರಬೇಕು. ನಮ್ಮ ಕಾಲದಲ್ಲಿ ಮಾಡಲಿಲ್ಲ ಎಂದು ಕೆಲವರಿಗೆ ತೊಂದರೆಯಾಗುತ್ತೆ. ಟೀಕೆ ಟಿಪ್ಪಣಿಯನ್ನೇ ನಾನು ಮೆಟ್ಟಿಲು ಮಾಡಿಕೊಳ್ಳುತ್ತೇನೆ ಎಂದು ಸವಣೂರು ತಾಲೂಕಿನ ಹುರುಳಿಕುಪ್ಪಿ ಗ್ರಾಮದಲ್ಲಿ ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:26 pm, Sat, 24 December 22




