KSRTC Bus Ticket Price: ಇಂದು ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಳ

ಕೆಎಸ್​ಆರ್​ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ ಟಿಕೆಟ್ ದರಗಳು ಶೇಕಡಾ 15ರಷ್ಟು ಏರಿಕೆಯಾಗಲಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ಟಿಕೆಟ್ ದರ ಜಾರಿಗೆ ಬರಲಿದೆ. ಸಿಬ್ಬಂದಿ ವೇತನ, ಇಂಧನ ಮತ್ತು ನಿರ್ವಹಣಾ ವೆಚ್ಚದ ಹೆಚ್ಚಳವನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

KSRTC Bus Ticket Price: ಇಂದು ಮಧ್ಯರಾತ್ರಿಯಿಂದಲೇ ಬಸ್ ಪ್ರಯಾಣ ದರ ಹೆಚ್ಚಳ
ಬಸ್ ಟಿಕೆಟ್ ದರ ಹೆಚ್ಚಿಸಿ ಅಧಿಕೃತ ಆದೇಶ
Follow us
Kiran Surya
| Updated By: Ganapathi Sharma

Updated on:Jan 04, 2025 | 3:16 PM

ಬೆಂಗಳೂರು, ಜನವರಿ 4: ಕೆಎಸ್​ಆರ್​ಟಿಸಿ ಹಾಗೂ ಇತರ ಮೂರು ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಏರಿಕೆ ಇಂದು ಮಧ್ಯರಾತ್ರಿಯಿಂದಲೇ ಅನ್ವಯವಾಗಲಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರ ಶನಿವಾರ ಮಾಧ್ಯಾಹ್ನ ಅಧಿಕೃತ ಆದೇಶ ಹೊರಡಿಸಿದೆ. ಕೆಎಸ್​ಆರ್​​ಟಿಸಿ, ಬಿಎಂಟಿಸಿ, ಎನ್​ಡಬ್ಲ್ಯುಕೆಆರ್​ಟಿಸಿ ಹಾಗೂ ಕೆಕೆಆರ್​ಟಿಸಿ ಬಸ್ ಟಿಕೆಟ್ ದರ ಶೇ 15ರಷ್ಟು ಹೆಚ್ಚಳವಾಗಲಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2015ರಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳಲ್ಲಿ 2020ರಲ್ಲಿ ಪ್ರಯಾಣದ ದರ ಪರಿಷ್ಕರಣೆ ಮಾಡಲಾಗಿರುತ್ತದೆ. ಪ್ರಯಾಣ ದರ ಪರಿಷ್ಕರಣೆಗಾಗಿ ನಿಗಮದ ಸಿಬ್ಬಂದಿ ವೇತನ ವೆಚ್ಚ, ಇಂಧನ ವೆಚ್ಚ ಹಾಗೂ ನಿರ್ವಹಣಾ ವೆಚ್ಚವನ್ನು ಪರಿಗಣಿಸಲಾಗುತ್ತಿದೆ. ಪ್ರಸ್ತುತ 9.56 ಕೋಟಿ ರೂ. ಮೊತ್ತವನ್ನು ಹೆಚ್ಚುವರಿಯಾಗಿ ವೆಚ್ಚ ಮಾಡುತ್ತಿದ್ದು, ಸಿಬ್ಬಂದಿ ವೆಚ್ಚ ಸೇರಿ ವಾರ್ಷಿಕವಾಗಿ 3650.00 ಕೋಟಿ ರೂ. ನಿಗಮಕ್ಕೆ ಹೊರೆಯಾಗುತ್ತಿದೆ. ಆದ್ದರಿಂದ, ಶೇ 15ರಷ್ಟು ಪ್ರಯಾಣದ ದರ ಹೆಚ್ಚಳ ಮಾಡಲು ಸಭೆಯು ನಿರ್ಣಯಿಸಿ, ಅದರಂತೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಇವರು ಕರ್ನಾಟಕ ರಾಜ್ಯದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕ.ರಾ.ರ.ಸಾ.ನಿಗಮ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬೆಂ.ಮ.ಸಾ.ಸಂಸ್ಥೆ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾ.ಕ.ರ.ಸಾ.ಸಂಸ್ಥೆ) ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳಲ್ಲಿ (ಕ.ಕ.ರ.ಸಾ.ನಿಗಮ) ಸುಮಾರು 25337 ಬಸ್‌ಗಳಿಂದ ಪ್ರತಿದಿನ ಸುಮಾರು 23038 ಟ್ರಿಪ್​ಗಳನ್ನು ಕಾರ್ಯಾಚರಿಸಲಾಗುತ್ತಿದೆ. ಅದರಂತೆ, ಪ್ರತಿದಿನ ಸರಾಸರಿ 116.18ಲಕ್ಷ ಪ್ರಯಾಣಿಕರು ನಾಲ್ಕು ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಪ್ರಯಾಣಿಸುತ್ತಿರುತ್ತಾರೆ. ಶಕ್ತಿ ಯೋಜನೆಯ ಅನುಷ್ಠಾನದ ನಂತರ ರಾಜ್ಯದಲ್ಲಿ ಸುಮಾರು 64 ಲಕ್ಷ ಮಹಿಳಾ ಪ್ರಯಾಣಿಕರು ಆಯ್ದ ಟ್ರಿಪ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ನಾಲ್ಕು ನಿಗಮಗಳು ಸುಮಾರು 1,01,648 ಸಿಬ್ಬಂದಿಗಳನ್ನು ಹೊಂದಿದ್ದು, ಆಯಾ ನಿಗಮಗಳು ಸದರಿ ಸಿಬ್ಬಂದಿಗಳ ಸಂಬಳ ಮತ್ತು ಎಲ್ಲಾ ಭತ್ಯೆಗಳನ್ನು ನಿಗಮಗಳ ಆದಾಯದ ಮೂಲಕ ಮಾತ್ರ ವಾವತಿಸುತ್ತಿವೆ. ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ 2024-25ನೇ ಆರ್ಥಿಕ ವರ್ಷದ 1ನೇ ಏಪ್ರಿಲ್‌ನಿಂದ 30ನೇ ನವೆಂಬರ್‌ವರೆಗೆ ಒಟ್ಟು ಆದಾಯ ರೂ.8418.46 ಕೋಟಿಗಳಾಗಿದ್ದು, ನಾಲ್ಕು ಸಾರಿಗೆ ಸಂಸ್ಥೆಗಳು ಒಟ್ಟು 9511.41 ಕೋಟಿ ರೂ.ಗಳ ವೆಚ್ಚವನ್ನು ಮಾಡಿರುತ್ತವೆ. ಪ್ರಸ್ತುತ 2024-25ನೇ ಆರ್ಥಿಕ ವರ್ಷದಲ್ಲಿ (ನವೆಂಬರ್‌ವರೆಗೆ) ನಿಮ್ಮಳ ಕೊರತೆಯು 1092.95 ಕೋಟಿ ರೂ.ಗಳಷ್ಟಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಜತೆಗೆ ಇನ್ನಿತರ ಅಂಶಗಳನ್ನೂ ನಮೂದಿಸಲಾಗಿದೆ.

ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳು ಆರ್ಥಿಕವಾಗಿ ಮುನ್ನಡೆಯಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿಯ ಸುಧಾರಣೆಗೆ ಹಾಗೂ ಹಮ್ಮಿಕೊಳ್ಳಲಾಗಿರುವ ಯೋಜನೆಗಳನ್ನು ಜಾರಿಗೊಳಿಸಲು ಪ್ರಯಾಣಿಕ ಬಸ್ ದರಗಳನ್ನು ಶೇಕಡ 33ರಷ್ಟು ಹೆಚ್ಚಿಸಲು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಶೇಕಡ 42ರಷ್ಟು ಹೆಚ್ಚಿಸಲು ಅನುಮೋದನೆ ದೊರಕಿಸಿಕೊಡುವಂತೆ ಕೋರಿರುತ್ತಾರೆ. ಪ್ರಸ್ತಾವನೆಯನ್ನು ಪರಿಶೀಲಿಸಿ, ಸರ್ಕಾರವು ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ ಪ್ರಯಾಣ ದರವನ್ನು ಶೇಕಡ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಆಡಳಿತಾತ್ಮಕ ಅನುಮೋದನ ನೀಡಿ ಆದೇಶಿಸಿದೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಜ.5ರಿಂದಲೇ KSRTC, BMTC ಟಿಕೆಟ್ ದರ ಹೆಚ್ಚಳ ಜಾರಿ: ನಿಮ್ಮ ಊರಿಗೆ ಎಷ್ಟು ರೇಟ್ ?

ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಬಸ್ ಟಿಕೆಟ್ ದರ ಹೆಚ್ಚಳ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿತ್ತು. ಸಾರ್ವಜನಿಕರಿಂದ ಹಾಗೂ ಪ್ರತಿಪಕ್ಷಗಳಿಂದ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:02 pm, Sat, 4 January 25

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ