AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಬಸ್​​ಗಳ ಟಿಕೆಟ್​ ದರ ಹೆಚ್ಚಳಕ್ಕೆ ಪ್ರಯಾಣಿಕರ ಆಕ್ರೋಶ: ಕಂಡಕ್ಟರ್​​​ನೊಂದಿಗೆ ಜಗಳ

ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ BMTC, KSRTC, NWRTC, KKRTC ಬಸ್ ಟಿಕೆಟ್ ದರವನ್ನು ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಬಡವರಿಗೆ ಹೊರೆಯಾಗಲಿದೆ ಎನ್ನುತ್ತಿದ್ದಾರೆ. ಮತ್ತೊಂದೆಡೆ ಟಿಕೆಟ್ ದರ ಹೆಚ್ಚಳ ಕಂಡಕ್ಟರ್ ಮತ್ತು ಪ್ರಯಾಣಿಕರ ಮಧ್ಯೆ ಜಗಳಕ್ಕೂ ಕಾರಣವಾಗಿದೆ.

ಸಾರಿಗೆ ಬಸ್​​ಗಳ ಟಿಕೆಟ್​ ದರ ಹೆಚ್ಚಳಕ್ಕೆ ಪ್ರಯಾಣಿಕರ ಆಕ್ರೋಶ: ಕಂಡಕ್ಟರ್​​​ನೊಂದಿಗೆ ಜಗಳ
ಬಸ್ ಟಿಕೆಟ್ ದರ ಹೆಚ್ಚಳ
ಗಂಗಾಧರ​ ಬ. ಸಾಬೋಜಿ
|

Updated on:Nov 05, 2026 | 11:29 AM

Share

ಬೆಂಗಳೂರು, ನವೆಂಬರ್​​ 05: ಹಾಲು, ಮೊಸರಿನ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಟಿಕೆಟ್‌ ದರ ಹೆಚ್ಚಳ ಮಾಡಲಾಗಿದೆ. ಹೀಗಾಗಿ ಜನರು ಸಾರಿಗೆ ಬಸ್ ಹತ್ತುವ ಮುನ್ನ ಯೋಚಿಸುವಂತಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಇದೀಗ ಕರ್ನಾಟಕದಾದ್ಯಂತ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಕೆಲವರು ಬಸ್​ ಕಂಡಕ್ಟರ್​​ ಜೊತೆಗೆ ಜಗಳ ಕೂಡ ಮಾಡಿದ್ದಾರೆ.

ರಾಜ್ಯದ 4 ಸಾರಿಗೆ ನಿಗಮಗಳ ಪ್ರಯಾಣದರವನ್ನು ರಾಜ್ಯ ಸರ್ಕಾರ ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಿದೆ. BMTC ದರ ಶೇ.35ರಷ್ಟು, KSRTC ದರ ಶೇ.23ರಷ್ಟು, NWRTC ಹಾಗೂ KKRTC ಎಕ್ಸ್​ಪ್ರೆಸ್ ಬಸ್​ಗಳ ಟಿಕೆಟ್ ದರವನ್ನ ಸ್ಟೇಜ್ ಆಧಾರದಲ್ಲಿ ಶೇ.23 ರಷ್ಟು ಹೆಚ್ಚಳ ಮಾಡಲಾಗಿದೆ. ಆ ಮೂಲಕ ಗಾಯದ ಮೇಲೆ ಮತ್ತಷ್ಟು ಉಪ್ಪು ಸುರಿದಿದೆ. ನಿನ್ನೆ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಿದೆ.

ಇದನ್ನೂ ಓದಿ: ಬಸ್​ ಟಿಕೆಟ್​​ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿಯಿಂದ ಬಸ್​​ ಪಾಸ್​​ ದರವೂ ಹೆಚ್ಚಳ: ಇಲ್ಲಿದೆ ಸಂಪೂರ್ಣ ಮಾಹಿತಿ

ಇನ್ನು ಸರ್ಕಾರಿ ಬಸ್ ಪ್ರಯಾಣ ದರ ಏರಿಕೆ ವಿಚಾರವಾಗಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ವಿರೋಧ ವ್ಯಕ್ತವಾಗಿದೆ. ದರ ಏರಿಕೆ ಬಹಳ ಹೆಚ್ಚಾಗಿದೆ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಿಢೀರನೇ ಪ್ರಯಾಣ ದರ ಏರಿಕೆ ಮಾಡಿದ್ದು ತಪ್ಪು, ಬಡವರಿಗೆ ಹೊರೆಯಾಗುತ್ತಿದ್ದು, ದರ ಏರಿಕೆಗೆ ಕಡಿವಾಣ ಹಾಕಬೇಕು ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.

ಸರ್ಕಾರಕ್ಕೆ ಸಾರ್ವಜನಿಕರು ಪಾಠ ಕಲಿಸುತ್ತಾರೆ ಎಂದ ಪ್ರಯಾಣಿಕ

ಈ ಬಗ್ಗೆ ಟಿವಿ9ಗೆ ಶಿವಮೊಗ್ಗದಲ್ಲಿ ಪ್ರಯಾಣಿಕರೊಬ್ಬರು ಪ್ರತಿಕ್ರಿಯಿಸಿದ್ದು, ‘ಗ್ಯಾರೆಂಟಿಗಳನ್ನು ಕೊಡಲು ನಾವು ಹೇಳಿಲ್ಲ. ಗ್ಯಾರೆಂಟಿಗಳನ್ನು ಕೊಟ್ಟು ನಮ್ಮ ಜೀವ ಹಿಂಡುತ್ತಿದ್ದಾರೆ. ಪತ್ನಿಗೆ ಉಚಿತ ಕೊಟ್ಟು ಪತಿಯ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ದೀಪಾವಳಿಯ ಗಿಫ್ಟ್​ ಇತ್ತೀಚಿಗೆ ಹಾಲಿನ ದರ ಹೆಚ್ಚಿಗೆ ಮಾಡಿತ್ತು. ಈಗ ಬಸ್ ಪ್ರಯಾಣಿಕರ ಟಿಕೆಟ್ ದರ ಏರಿಕೆ ಮಾಡಿದೆ. ಇದು ಎಲ್ಲರಿಗೂ ಬೇಸರದ ಸಂಗತಿ. ನಾವು ಒಂದು ಜಿಲ್ಲೆಯಿಂದ ಮತ್ತೊಂದು ತಾಲೂಕಿಗೆ ಕೆಲಸಕ್ಕೆ ಹೋಗಲು ಪರದಾಡುವಂತೆ ಪರಿಸ್ಥಿತಿ ಉಂಟಾಗಿದೆ. ಇದೇ ರೀತಿ ಆದರೆ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಸಾರ್ವಜನಿಕರು ಪಾಠ ಕಲಿಸುತ್ತಾರೆ’ ಎಂದಿದ್ದಾರೆ.

ವಿಜಯಪುರಲ್ಲೂ ಬಸ್ ಏರಿಕೆಗೆ ವಿರೋಧ

ವಿಜಯಪುರದಲ್ಲಿ ಕೂಡ ಬಸ್ ಏರಿಕೆಗೆ ವಿರೋಧ ವ್ಯಕ್ತವಾಗಿದ್ದು, ‘ಸರ್ಕಾರ ಉಚಿತ ಭಾಗ್ಯ ಕೊಟ್ಟು ಜನರಿಗೆ ತೊಂದರೆಯಾಗುತ್ತಿದೆ. ಮಹಿಳೆಯರಿಗೆ ಉಚಿತ ಮಾಡಿ ಪುರುಷರಿಗೆ ದರ ಏರಿಕೆ ಮಾಡಿದಂತಾಗಿದೆ. ಮಹಿಳೆಯರು, ಪುರುಷರನ್ನು ಸಮಾನಾಗಿ ಕಾಣಬೇಕು. ಉಚಿತ ಭಾಗ್ಯಗಳಿಂದಲೇ ಎಲ್ಲ ದರ ಏರಿಕೆಯಾಗುತ್ತಿದೆ. ಬರಗಾಲದಲ್ಲಿ ದರ ಏರಿಕೆ ಬರೆ ಹಾಕಲಾಗುತ್ತಿದೆ. ಹೀಗಾಗಿ ದರ ಏರಿಕೆಯನ್ನು ನಿಯಂತ್ರಣ ಮಾಡಬೇಕೆಂದು ಸಿಎಂ ಡಿಕೆ ಶಿವಕುಮಾರ್​ಗೆ ಜನರು ಮನವಿ ಮಾಡಿದ್ದಾರೆ’.

ಕಂಡಕ್ಟರ್​ ಜೊತೆ ಪ್ರಯಾಣಿಕರು ಜಗಳ

ಇನ್ನು ಹುಬ್ಬಳ್ಳಿಯಲ್ಲಿ ಟಿಕೆಟ್ ಹೆಚ್ಚಳ ಹಿನ್ನೆಲೆ ಕಂಡಕ್ಟರ್​ ಜೊತೆ ಪ್ರಯಾಣಿಕರು ಜಗಳ ಮಾಡುತ್ತಿದ್ದಾರಂತೆ. ಪ್ರಯಾಣಿಕರನ್ನು ಸಮಾಧಾನ ಮಾಡಲು ಕಂಡಕ್ಟರ್​ಗಳು ಹರಸಾಹಸ ಪಡುವಂತಾಗಿದೆ. ದಾವಣಗೆರೆಯಲ್ಲೂ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಪುರುಷರ ಕೈಯಿಂದ ಹಣ ಕಸಿದು ಮಹಿಳೆಯರಿಗೆ ಕೊಡಲಾಗುತ್ತಿದೆ. ಗ್ಯಾರಂಟಿ ಹೆಸರಿನಲ್ಲಿ ಸಾರ್ವಜನಿಕರ ಸುಲಿಗೆ ಮಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:26 am, Thu, 5 November 26

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ರಾಮಾಯಣ’ ಸಿನಿಮಾನ ಸಂಭ್ರಮಿಸಿದ ಫ್ಯಾನ್ಸ್; ಯಶ್ ನಟನೆಗೆ ಫುಲ್ ಮಾರ್ಕ್ಸ್
‘ರಾಮಾಯಣ’ ಸಿನಿಮಾನ ಸಂಭ್ರಮಿಸಿದ ಫ್ಯಾನ್ಸ್; ಯಶ್ ನಟನೆಗೆ ಫುಲ್ ಮಾರ್ಕ್ಸ್
ಸೌಂದರ್ಯಾ-ಧನುಷ್​​ಗೆ ಓಪನ್ ಆಯ್ತು ಬಿಗ್ ಬಾಸ್ ಮುಖ್ಯದ್ವಾರ
ಸೌಂದರ್ಯಾ-ಧನುಷ್​​ಗೆ ಓಪನ್ ಆಯ್ತು ಬಿಗ್ ಬಾಸ್ ಮುಖ್ಯದ್ವಾರ
ಶಾಲಾ ಕಟ್ಟಡದಲ್ಲಿ ಭಾರೀ ಪ್ರಮಾಣದ ಪಟಾಕಿ ಅಕ್ರಮ ದಾಸ್ತಾನು, ಜಪ್ತಿ
ಶಾಲಾ ಕಟ್ಟಡದಲ್ಲಿ ಭಾರೀ ಪ್ರಮಾಣದ ಪಟಾಕಿ ಅಕ್ರಮ ದಾಸ್ತಾನು, ಜಪ್ತಿ
ಈ ರಾಶಿಯವರ ಆದಾಯ ವೃದ್ಧಿ ಮತ್ತು ಜವಾಬ್ದಾರಿಗಳು ಹೆಚ್ಚಾಗಲಿ
ಈ ರಾಶಿಯವರ ಆದಾಯ ವೃದ್ಧಿ ಮತ್ತು ಜವಾಬ್ದಾರಿಗಳು ಹೆಚ್ಚಾಗಲಿ
ಮಳೆಯಬ್ಬರಕ್ಕೆ ಕೆರೆಯಂತಾದ ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳು
ಮಳೆಯಬ್ಬರಕ್ಕೆ ಕೆರೆಯಂತಾದ ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳು
ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು, ಮಗು ಬಚಾವ್
ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು, ಮಗು ಬಚಾವ್
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ
ಹಾಸನಾಂಬೆ ಜಾತ್ರಾಮಹೋತ್ಸವ: ರಾತ್ರಿ 12ರಿಂದ ದೇವರ ದರ್ಶನಕ್ಕೆ ಅವಕಾಶವಿಲ್ಲ
ಹಾಸನಾಂಬೆ ಜಾತ್ರಾಮಹೋತ್ಸವ: ರಾತ್ರಿ 12ರಿಂದ ದೇವರ ದರ್ಶನಕ್ಕೆ ಅವಕಾಶವಿಲ್ಲ
ಸಿನಿಮಾ ಹಾಕಿ ಎಂದ ತಾಂಡವ್​​, ಐಡಿಯಾ ಕೊಟ್ಟ ಪ್ರಶಾಂತ್: ವಿಡಿಯೋ
ಸಿನಿಮಾ ಹಾಕಿ ಎಂದ ತಾಂಡವ್​​, ಐಡಿಯಾ ಕೊಟ್ಟ ಪ್ರಶಾಂತ್: ವಿಡಿಯೋ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ