AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಬೈ ಪೋಲ್ಸ್​: ಅಭ್ಯರ್ಥಿ ಆಯ್ಕೆ ಹೈಕಮಾಂಡ್​ಗೆ ಬಿಟ್ಟಿದ್ದು: ಡಿಕೆ ಶಿವಕುಮಾರ್

ಯಾರಿಗೆ ಟಿಕೆಟ್ ನೀಡಬೇಕು ಎಂದು ವರಿಷ್ಠರು ತೀರ್ಮಾನ ಮಾಡುತ್ತಾರೆ. ಅಂತಿಮ ಪಟ್ಟಿಯನ್ನು ನಾನು ಮಾಡುವುದಿಲ್ಲ. ಹೆಸರುಗಳನ್ನು ಶಿಫಾರಸು ಮಾಡುವುದಷ್ಟೇ ನನ್ನ ಕೆಲಸ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಬೈ ಪೋಲ್ಸ್​: ಅಭ್ಯರ್ಥಿ ಆಯ್ಕೆ ಹೈಕಮಾಂಡ್​ಗೆ ಬಿಟ್ಟಿದ್ದು: ಡಿಕೆ ಶಿವಕುಮಾರ್
ಕೆಪಿಸಿಸಿ ಸಭೆ
Skanda
| Edited By: |

Updated on: Jan 09, 2021 | 6:28 PM

Share

ಬೆಂಗಳೂರು: ಬೆಳಗಾವಿ, ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರಗಳ ಟಿಕೆಟ್​ ವಿಚಾರವಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರನ್ನೊಳಗೊಂಡ ಈ ಸಭೆಯ ಉಸ್ತುವಾರಿ ವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸಭೆಯ ನಂತರ ಮಾತನಾಡಿ, ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಜ್ಯದಿಂದ ಹೆಸರು ಶಿಫಾರಸು ಮಾಡಲಿದ್ದೇವೆ. ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಬೆಳಗಾವಿ, ಬಸವ ಕಲ್ಯಾಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಆ ಭಾಗದ ಮುಖಂಡರ ಸಭೆ ಕರೆದು, ಅವರ ಅಭಿಪ್ರಾಯ ಪಡೆದಿದ್ದೇವೆ. ಅನೇಕ ಸಲಹೆಗಳು ಬಂದಿದ್ದು, ನಾನು ಹುಬ್ಬಳ್ಳಿಗೆ ಹೋಗಿ ಬಂದ ಮೇಲೆ ಮಸ್ಕಿ ಸೇರಿದಂತೆ ಮೂರು ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ದೆಹಲಿಗೆ ಕಳುಹಿಸಿಕೊಡುತ್ತೇವೆ. ಯಾರಿಗೆ ಟಿಕೆಟ್ ನೀಡಬೇಕು ಎಂದು ವರಿಷ್ಠರು ತೀರ್ಮಾನ ಮಾಡುತ್ತಾರೆ. ಅಂತಿಮ ಪಟ್ಟಿಯನ್ನು ನಾನು ಮಾಡುವುದಿಲ್ಲ. ಹೆಸರುಗಳನ್ನು ಶಿಫಾರಸು ಮಾಡುವುದಷ್ಟೇ ನನ್ನ ಕೆಲಸ ಎಂದು ಸ್ಪಷ್ಟನೆ ನೀಡಿದರು.

ಸಭೆಯ ಮಧ್ಯೆ ಧಿಡೀರ್​ ಎದ್ದು ಹೋದ ನಾಯಕರು ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲು ಕೆಪಿಸಿಸಿ ಒಲವು ತೋರುತ್ತಿದೆಯಾದರೂ, ಈ ಬಗ್ಗೆ ಸ್ವತಃ ಸತೀಶ್ ಹಿಂದೇಟು ಹಾಕುತ್ತಿದ್ದಾರೆ. ಇನ್ನೊಂದೆಡೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ರೇಸ್​ನಲ್ಲಿದ್ದು ಟಿಕೆಟ್​ ಪಡೆಯಲು ಡಿ.ಕೆ.ಶಿವಕುಮಾರ್ ಲಾಬಿ ನಡೆಸುತ್ತಿದ್ದಾರೆ ಎಂಬ ಮಾಹಿತಿಯೂ ಹೊರಬಿದ್ದಿದೆ.

ಇತ್ತ ಬಸವಕಲ್ಯಾಣ ಕ್ಷೇತ್ರದಿಂದ ಮಾಜಿ ಶಾಸಕ ದಿವಂಗತ ನಾರಾಯಣ ರಾವ್ ಪತ್ನಿ ಮಲ್ಲಮ್ಮಗೆ ಟಿಕೆಟ್ ನೀಡಲು ಸಿದ್ದರಾಮಯ್ಯರಿಂದ ಹಿಡಿದು ಅನೇಕರಿಗೆ ಒಲವು ಇದೆಯಾದರೂ ಕೆಲವರು ಮಾತ್ರ ಈ ನಿರ್ಧಾರಕ್ಕೆ ಸಹಮತ ನೀಡುತ್ತಿಲ್ಲ. ಇದೇ ಕಾರಣದಿಂದ ಇಂದು ಸಭೆಯ ಮಧ್ಯದಲ್ಲಿಯೇ ಕೆಲ ನಾಯಕರು ಧಿಡೀರ್​ ಎಂದು ಎದ್ದು ಹೋಗಿದ್ದಾರೆ. ಆದರೆ, ಸಭೆಯಲ್ಲಿ ಈಶ್ವರ್ ಖಂಡ್ರೆ ಮಾತ್ರ ಕೊನೆವರೆಗೂ ಭಾಗಿಯಾಗಿದ್ದರು ಎಂಬುದು ಗಮನಾರ್ಹ.

ಭಾಷಣ ಮಾಡುವ ವಿಚಾರಕ್ಕೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ಕಾಂಗ್ರೆಸ್‌ನ ಮಾಜಿ ಸಚಿವರು: BSYಗೆ ಇರುಸು ಮುರುಸು