ಕರ್ನಾಟಕದ 3 ಕ್ಷೇತ್ರಗಳ ಉಪಚುನಾವಣೆ: ಇಂದು ಮತದಾನ, ಮತಯಂತ್ರ ಸೇರಲಿದೆ ಅಭ್ಯರ್ಥಿಗಳ ಭವಿಷ್ಯ

ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಇಂದು ನಡೆಯುತ್ತಿದೆ. ಅಭ್ಯರ್ಥಿಗಳ ವಿವರ, ಕ್ಷೇತ್ರವಾರು ಜಾತಿ ಲೆಕ್ಕಾಚಾರ ಹಾಗೂ ಇತರ ಸಮಗ್ರ ಮಾಹಿತಿ ಇಲ್ಲಿದೆ. ಇಂದು ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದ 3 ಕ್ಷೇತ್ರಗಳ ಉಪಚುನಾವಣೆ: ಇಂದು ಮತದಾನ, ಮತಯಂತ್ರ ಸೇರಲಿದೆ ಅಭ್ಯರ್ಥಿಗಳ ಭವಿಷ್ಯ
ಸಾಂದರ್ಭಿಕ ಚಿತ್ರ
Follow us
ಗಣಪತಿ ಶರ್ಮ
|

Updated on: Nov 13, 2024 | 6:43 AM

ಬೆಂಗಳೂರು, ನವೆಂಬರ್ 13: ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇವತ್ತು ಉಪಚುನಾವಣೆ ಮತದಾನ ನಡೆಯಲಿದೆ. ಮತದಾರ ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಲಿದ್ದಾನೆ. ಈ ಪೈಕಿ ಚನ್ನಪಟ್ಟಣ ಕ್ಷೇತ್ರ ವಿವಿಧ ಕಾರಣಗಳಿಂದ ಹೆಚ್ಚು ಸದ್ದು ಮಾಡಿದೆ. ಯಾವ ಕ್ಷೇತ್ರದಲ್ಲಿ ಹೇಗಿದೆ ಸ್ಥಿತಿ ಎಂಬ ಚಿತ್ರಣ ಇಲ್ಲಿದೆ.

ಚನ್ನಪಟ್ಟಣದಲ್ಲಿ ನಿಖಿಲ್ Vs ಯೋಗೇಶ್ವರ್

ಮೂರು ಕ್ಷೇತ್ರಗಳ ಪೈಕಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರ ಹೆಚ್ಚು ಸದ್ದು ಮಾಡುತ್ತಿದೆ. ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳಾದ ಬಿಜೆಪಿ-ಜೆಡಿಎಸ್​ಗೆ ಚನ್ನಪಟ್ಟಣ ಪ್ರತಿಷ್ಠೆಯಾಗಿ ಮಾರ್ಪಟ್ಟಿದೆ. ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ, ಕಾಂಗ್ರೆಸ್‌ನಿಂದ ಸಿಪಿ ಯೋಗೇಶ್ವರ್‌ ಹಾಗೂ 32 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಚನ್ನಪಟ್ಟಣದಲ್ಲಿ ಒಟ್ಟು 2,32,949 ಮತದಾರರಿದ್ದು, ಈ ಪೈಕಿ 1,12,324 ಪುರುಷ ಮತದಾರರು, 1,20,617 ಮಹಿಳಾ ಮತದಾರರಿದ್ದಾರೆ. 8,338 ಯುವ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಒಟ್ಟು 276 ಮತಗಟ್ಟೆಗಳನ್ನ ಸ್ಥಾಪನೆ ಮಾಡಲಾಗಿದೆ. ನಗರ ಪ್ರದೇಶದಲ್ಲಿ 62, ಗ್ರಾಮೀಣ ಪ್ರದೇಶದಲ್ಲಿ 214 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ. 119 ಮತಗಟ್ಟೆಗಳನ್ನ ಸೂಕ್ಷ್ಮ ಮತಗಟ್ಟೆಗಳು ಎಂದು ನಿರ್ಧರಿಸಲಾಗಿದೆ. 8 ವಿಶೇಷ ಮತಗಟ್ಟೆ, 5 ಸಖಿ ಮತಗಟ್ಟೆ, ವಿಶೇಷ ಚೇತನರಿಗಾಗಿ 1 ಮತಗಟ್ಟೆ, 1 ಯುವ ಮತಗಟ್ಟೆ, 1 ಸಾಂಪ್ರದಾಯಿಕ ಮತಗಟ್ಟೆ ತೆರೆಯಲಾಗಿದೆ. 54 ಕ್ಲಸ್ಟರ್ ಮತಗಟ್ಟೆಗಳಿಗೆ ಎಎಸ್ಐ ದರ್ಜೆಯ ಅಧಿಕಾರಿಗಳ ನೇಮಕ ಮಾಡಲಾಗಿದೆ. 8 ಪ್ಯಾರಾಮಿಲಿಟರಿ ಪಡೆ, ಪಿಆರ್​ಒ, ಎಪಿಆರ್​ಒ ಸೇರಿದಂತೆ 1252 ಭದ್ರತಾ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

ಚನ್ನಪಟ್ಟಣ ರಣಕಣದಲ್ಲಿ ಜಾತಿವಾರು ಲೆಕ್ಕಾಚಾರ

ಚನ್ನಪಟ್ಟಣದಲ್ಲಿ ಒಕ್ಕಲಿಗ ಮತಗಳ ಪ್ರಾಬಲ್ಯವಿದೆ. 1.05 ಲಕ್ಷದಷ್ಟಿರುವ ಒಕ್ಕಲಿಗ ಮತಗಳೇ ನಿರ್ಣಾಯಕವಾಗಿದೆ. 40 ಸಾವಿರ ಪರಿಶಿಷ್ಟ ಪಂಗಡ, 32 ಸಾವಿರ ಮುಸ್ಲಿಂ, 21 ಸಾವಿರ ಹಿಂದುಳಿದ ವರ್ಗ, 8 ಸಾವಿರ ಕುರುಬ, 10 ಸಾವಿರಕ್ಕೂ ಹೆಚ್ಚು ಇತರೆ ಮತಗಳಿವೆ.

ಶಿಗ್ಗಾಂವಿಯಲ್ಲಿ ಭರತ್ Vs ಯಾಸೀರ್ ಖಾನ್ ಪಠಾಣ್

ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್‌ ಬೊಮ್ಮಾಯಿ ಕಣದಲ್ಲಿದರೆ, ಕಾಂಗ್ರೆಸ್‌ನಿಂದ ಯಾಸೀರ್‌ ಖಾನ್‌ ಪಠಾಣ್ ಸೇರಿ ಅಂತಿಮ ಕಣದಲ್ಲಿರುವ 8 ಅಭ್ಯರ್ಥಿಗಳಿದ್ದಾರೆ. ಇಲ್ಲೂ ಎರಡು ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ.

ಶಿಗ್ಗಾಂವಿಯಲ್ಲಿ ಒಟ್ಟು 2,37,525 ಮತದಾರರಿದ್ದಾರೆ. ಈ ಪೈಕಿ ಪುರುಷರು 1,21,443 ಹಾಗೂ ಮಹಿಳೆಯರು 1,16,76 ಮತಗಳಿವೆ. ಒಟ್ಟು 241 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಈ ಪೈಕಿ 92 ಮತಗಟ್ಟೆಗಳು ಸೂಕ್ಷ್ಮವೆಂದು ಗುರ್ತಿಸಲಾಗಿದೆ. ಓರ್ವ ಎಎಸ್​ಪಿ, ನಾಲ್ವರು ಡಿವೈಎಸ್​ಪಿ, 12 ಸಿಪಿಐ, 24 ಪಿಎಸ್ಐ, 68 ಎಎಸ್ಐ ಸೇರಿ 716 ಸಿಬ್ಬಂದಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಶಿಗ್ಗಾಂವಿಯಲ್ಲಿ ಜಾತಿವಾರು ಲೆಕ್ಕಾಚಾರ

ಲಿಂಗಾಯತ ಮತಗಳೇ ನಿರ್ಣಾಯಕವಾಗಿವೆ. ಲಿಂಗಾಯತ 85 ಸಾವಿರ, ಮುಸ್ಲಿಂ 58 ಸಾವಿರ, ಕುರುಬ 27 ಸಾವಿರ, ಎಸ್​ಸಿ, ಎಸ್​ಟಿ 52 ಸಾವಿರ, ಇತರೆ 15 ಸಾವಿರ ಮತಗಳಿವೆ.

ಸಂಡೂರಿನಲ್ಲಿ ಅನ್ನಪೂರ್ಣ Vs ಬಂಗಾರು ಹನುಮಂತು

ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಹಾಗೂ ಬಿಜೆಪಿಯ ಬಂಗಾರು ಹನುಮಂತು ನಡುವೆ ನೇರಾ ಹಣಾಹಣಿ ನಡೆದಿದೆ. ಒಟ್ಟಾರೆ 7 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ.

ಸಂಡೂರಿನಲ್ಲಿ ಒಟ್ಟು 2,36,100 ಮತದಾರರಿದ್ದು, ಈ ಪೈಕಿ 1,18,282 ಮಹಿಳಾ ಮತದಾರರು, 1,17,789 ಪುರುಷ ಮತದಾರರಿದ್ದಾರೆ. ಒಟ್ಟು 253 ಮತಗಟ್ಟೆ ಸ್ಥಾಪನೆ ಮಾಡಲಾಗಿದ್ದು, 55 ಸೂಕ್ಷ್ಮ ಮತಗಟ್ಟೆಗಳಿವೆ. ಚುನಾವಣಾ ಕರ್ತವ್ಯಕ್ಕಾಗಿ ಒಟ್ಟು 1,215 ಸಿಬ್ಬಂದಿ, ಮೂವರು ಡಿವೈಎಸ್​​ಪಿ, 6 ಸಿಪಿಐ, 14 ಪಿಎಸ್ಐ, 22 ಎಎಸ್ಐ, 193 ಹೆಡ್​ಕಾನ್ಸ್​ಟೇಬಲ್, 14 ಕೆಎಸ್​ಆರ್​ಪಿ ತುಕಡಿ ಸೇರಿ 1500ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

ಸಂಡೂರಿನಲ್ಲಿ ಜಾತಿ ಲೆಕ್ಕಾಚಾರ

ಸಂಡೂರು ಎಸ್​ಟಿ ಮೀಸಲು ಕ್ಷೇತ್ರವಾಗಿದೆ. ಎಸ್​ಟಿ ಮತಗಳೇ ನಿರ್ಣಾಯಕ ಮತಗಳಾಗಿವೆ. ಎಸ್​ಟಿ 68 ಸಾವಿರ, ಎಸ್​ಸಿ 40 ಸಾವಿರ, ಲಿಂಗಾಯಿತ 38 ಸಾವಿರ, ಕುರುಬ ಮತಗಳು 34 ಸಾವಿರ, ಮುಸ್ಲಿಂ ಮತಗಳು 20 ಸಾವಿರ, ಇತರೆ 40 ಸಾವಿರ ಮತಗಳಿವೆ.

ಇದನ್ನೂ ಓದಿ: ಮತದಾನಕ್ಕೂ ಮುನ್ನವೇ ಶಿಗ್ಗಾಂವಿ ಕೈ ಅಭ್ಯರ್ಥಿ ಯಾಸೀರ್ ಪಠಾಣ್​ಗೆ ಶಾಕ್ ಕೊಟ್ಟ ಬಿಜೆಪಿ

ಒಟ್ಟಾರೆ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಮತೋತ್ಸವ ನಡೆಯಲಿದೆ. ನವೆಂಬರ್‌ 23 ಕ್ಕೆ ಫಲಿತಾಂಶ ಹೊರ ಬೀಳಲಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹ ರೀತಿ ಬರ್ತೀನಿ; ಚೈತ್ರಾ ಕುಂದಾಪುರ
ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹ ರೀತಿ ಬರ್ತೀನಿ; ಚೈತ್ರಾ ಕುಂದಾಪುರ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಶುಭವಾಗಲಿದೆ
Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಶುಭವಾಗಲಿದೆ
ಕೆಲಸಕ್ಕೆ ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ!
ಕೆಲಸಕ್ಕೆ ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ!
ಪೋಷಕರೇ ಎಚ್ಚರ! ಆಟವಾಡುವಾಗ ಗೇಟ್ ಬಿದ್ದು ಒಂದೂವರೆ ವರ್ಷದ ಮಗು ಸಾವು
ಪೋಷಕರೇ ಎಚ್ಚರ! ಆಟವಾಡುವಾಗ ಗೇಟ್ ಬಿದ್ದು ಒಂದೂವರೆ ವರ್ಷದ ಮಗು ಸಾವು
ಭಕ್ತನಂತೆ ದೇವಸ್ಥಾನಕ್ಕೆ ಬಂದು ದೇವರ ವಿಗ್ರಹವನ್ನೇ ಕದ್ದ ಖತರ್ನಾಕ್ ಕಳ್ಳ
ಭಕ್ತನಂತೆ ದೇವಸ್ಥಾನಕ್ಕೆ ಬಂದು ದೇವರ ವಿಗ್ರಹವನ್ನೇ ಕದ್ದ ಖತರ್ನಾಕ್ ಕಳ್ಳ
ಥಾರ್​ ಖರೀದಿಸಿದ ಖುಷಿಗೆ ಮಹೀಂದ್ರಾ ಶೋರೂಂನಲ್ಲಿ ಗುಂಡು ಹಾರಿಸಿದ ಯುವಕ!
ಥಾರ್​ ಖರೀದಿಸಿದ ಖುಷಿಗೆ ಮಹೀಂದ್ರಾ ಶೋರೂಂನಲ್ಲಿ ಗುಂಡು ಹಾರಿಸಿದ ಯುವಕ!