
ಬೆಂಗಳೂರು: ಡಿಸೆಂಬರ್ 5ರಂದು ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.
ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲುಗೆ ಮೊದಲ ಸ್ಥಾನವಿದೆ. 2ನೇ ಸ್ಥಾನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದ್ದು, ಕೇಂದ್ರ ಸಚಿವ ಸದಾನಂದಗೌಡ 3ನೇ ಸ್ಥಾನದಲ್ಲಿದ್ದಾರೆ. 4ನೇ ಸ್ಟಾರ್ ಪ್ರಚಾರಕರಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ 5ನೇ ಸ್ಥಾನದಲ್ಲಿ ಬಿ.ಎಲ್.ಸಂತೋಷ್ ಇದ್ದಾರೆ.
ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಸಚಿವ ಜಗದೀಶ್ ಶೆಟ್ಟರ್, ಡಿಸಿಎಂಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಸೇರಿದಂತೆ ಸಚಿವರು, ಸಂಸದರಿಗೆ ಸ್ಟಾರ್ ಕ್ಯಾಂಪೇನರ್ ಸ್ಥಾನವಿದೆ.