ಹಾನಗಲ್, ಸಿಂದಗಿ ಉಪಚುನಾವಣೆ ಅಂತಿಮ ಫಲಿತಾಂಶ: ಯಾರಿಗೆ ಎಷ್ಟು ಅಂತರದ ಗೆಲುವು? ಇಲ್ಲಿದೆ ವಿವರ

Hangal Sindagi Byelection Results: ಹಾನಗಲ್​ನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಗೆಲುವಿನ ನಗೆ ಬೀರಿದ್ದಾರೆ.

ಹಾನಗಲ್, ಸಿಂದಗಿ ಉಪಚುನಾವಣೆ ಅಂತಿಮ ಫಲಿತಾಂಶ: ಯಾರಿಗೆ ಎಷ್ಟು ಅಂತರದ ಗೆಲುವು? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on: Nov 02, 2021 | 4:49 PM

ಬೆಂಗಳೂರು: ಕರ್ನಾಟಕದ ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಮತಎಣಿಕೆ ಪ್ರಕ್ರಿಯೆ ಇಂದು (ನವೆಂಬರ್ 2) ನಡೆದಿದೆ. ಹಾವೇರಿಯ ಹಾನಗಲ್ ಹಾಗೂ ವಿಜಯಪುರ ಜಿಲ್ಲೆಯ ಸಿಂದಗಿ ಎರಡು ಕ್ಷೇತ್ರಗಳ ಫಲಿತಾಂಶ ಇದೀಗ ಹೊರಬಿದ್ದಿದೆ. ಪೈಪೋಟಿಗೆ ಬಿದ್ದು ಭರ್ಜರಿ ಪ್ರಚಾರ ನಡೆಸಿದ್ದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಇಂದು ಮತದಾರರ ನಿರ್ಧಾರವನ್ನು ಪಡೆದುಕೊಂಡಿದ್ದಾರೆ. ಅದರಂತೆ, ಹಾನಗಲ್​ನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಗೆಲುವಿನ ನಗೆ ಬೀರಿದ್ದಾರೆ.

ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಗೆಲುವು ಲಭಿಸಿದೆ. ಬಿಜೆಪಿಯ ರಮೇಶ ಭೂಸನೂರ 31,185 ಮತಗಳ ಅಂತರದಿಂದ ವಿಜಯ ದಾಖಲಿಸಿಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರಗೆ 93,865 ಮತ ಲಭಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿಗೆ 62,680 ಮತ ಲಭ್ಯವಾಗಿದೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಕೇವಲ 4,353 ಮತಗಳಿಗೆ ತೃಪ್ತಿಯಾಗಬೇಕಾಗಿ ಬಂದಿದೆ. ನೋಟಾಗೆ 1,031 ಮತಗಳ ಚಲಾವಣೆ ಆಗಿದೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾಡಲಾಗಿದೆ.

ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಶ್ರೀನಿವಾಸ ಮಾನೆಗೆ ಜಯ ಲಭಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಗೆ 7,373 ಮತಗಳ ಅಂತರದಿಂದ ಗೆಲುವು ಸಿಕ್ಕಿದೆ. ಕಾಂಗ್ರೆಸ್ ಅಭ್ಯರ್ಥಿ ಮಾನೆಗೆ 87,490 ಮತಗಳು ಲಭಿಸಿವೆ. ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ 80,117 ಮತಗಳನ್ನು ಪಡೆದುಕೊಂಡಿದ್ದಾರೆ. ಜೆಡಿಎಸ್​ ಅಭ್ಯರ್ಥಿ ನಿಯಾಜ್ ಶೇಖ್​ಗೆ ಕೇವಲ 927 ಮತಗಳು ಸಿಕ್ಕಿವೆ. ನೋಟಾಗೆ 529 ಮತಗಳ ಚಲಾವಣೆ ಆಗಿದೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Hangal Byelection 2021: ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆಗೆ ಕಾರಣಗಳು ಏನೇನು?

ಇದನ್ನೂ ಓದಿ: ಸಂಘಟನೆ, ಸಿದ್ಧಾಂತ, ನೇತೃತ್ವ ಮೂರೂ ಸರಿ ಇಲ್ಲದಿದ್ದಾಗ ಆಗಬೇಕಾಗಿದ್ದೆ ಆಗಿದೆ: ಜೆಡಿಎಸ್ ಸೋಲಿನ ಬಗ್ಗೆ ಸಿಟಿ ರವಿ ಪ್ರತಿಕ್ರಿಯೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್