Karnataka ByElection 2021: ಕರ್ನಾಟಕ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್ ; ಏಪ್ರಿಲ್ 17ರಂದು ನಡೆಯಲಿದೆ ಚುನಾವಣೆ

Karnataka Bypoll 2021 Date: ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಏಪ್ರಿಲ್ 17 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ.

Karnataka ByElection 2021: ಕರ್ನಾಟಕ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್ ; ಏಪ್ರಿಲ್ 17ರಂದು ನಡೆಯಲಿದೆ ಚುನಾವಣೆ
ಚುನಾವಣೆ (ಪ್ರಾತಿನಿಧಿಕ ಚಿತ್ರ)
Follow us
guruganesh bhat
|

Updated on:Mar 16, 2021 | 6:05 PM

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಏಪ್ರಿಲ್ 17 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಮಾರ್ಚ್ 31 ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ 2 ಚುನಾವಣಾ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿತ್ತು. ಕೊರೊನಾ ಸೋಂಕಿಗೆ ತುತ್ತಾಗಿದ್ದ 65 ವರ್ಷದ ಸುರೇಶ್ ಅಂಗಡಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ 10 ದಿನಗಳ ಕಾಲ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆದಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಕಾರಣ  ವೆಂಟಿಲೇಟರ್ ತೆಗೆದು ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದರು.

ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳು ಜಗದೀಶ್ ಶೆಟ್ಟರ್, ಶ್ರದ್ಧಾ ಶೆಟ್ಟರ್(ಸುರೇಶ್ ಅಂಗಡಿ ಪುತ್ರಿ), ಡಾ.ಗಿರೀಶ್ ಸೋನವಾಲ್ಕರ್, ಮಹಾಂತೇಶ್ ಕವಟಗಿಮಠ್, ಪ್ರಮೋದ್ ಮುತಾಲಿಕ್, ಮಾಜಿ ಸಂಸದ ರಮೇಶ್ ಕತ್ತಿ, ಡಾ.ರವಿ ಪಾಟೀಲ್, ರಮೇಶ್ ದೇಶಪಾಂಡೆ, ವಕೀಲ ಎಂ.ಬಿ.ಜಿರಲಿ, ಉದ್ಯಮಿ ಮಹಾಂತೇಶ್ ವಕ್ಕುಂದ, ಉಜ್ವಲಾ ಬಡವನಾಚೆ, ದೀಪಾ ಕುಡಚಿ ಅವರಲ್ಲಿ ಓರ್ವರಿಗೆ ಟಿಕೆಟ್ ದೊರೆಯುವ ಸಾಧ್ಯತೆಗಳಿವೆ.

ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌, ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ, ಚನ್ನರಾಜ ಹಟ್ಟಿಹೊಳಿ (ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ), ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಟಿಕೆಟ್ ಘೋಷಿಸುವ ಸಂಭಾವ್ಯತೆಗಳಿವೆ.

LAKSHMI HEBBALKAR LEAD

ಲಕ್ಷ್ಮೀ ಹೆಬ್ಬಾಳ್ಕರ್

ಬಸವಕಲ್ಯಾಣದ ಕಾಂಗ್ರೆಸ್​ ಶಾಸಕ ಬಿ. ನಾರಾಯಣ ರಾವ್​ ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ನಿಧನರಾಗಿದ್ದರು.  ಅವರ ನಿಧನದಿಂದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ತೆರವಾಗಿತ್ತು.

ಕಾಂಗ್ರೆಸ್​ನಿಂದ ಬಿ.ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ, ಧರಂಸಿಂಗ್ ಅವರ ಮಗ ವಿಜಯ್​ಸಿಂಗ್, ಇವರಿಬ್ಬರಲ್ಲಿ ಒಬ್ಬರನ್ನು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆಗಳಿವೆ.

ಬಿಜೆಪಿಯಿಂದ ಶರಣು ಸಲಗಾರ್, ಮಾಜಿ ಶಾಸಕ ಮಲ್ಲಿಕಾರ್ಜುನ್ ಖೂಬಾ,  ಬಸವಕಲ್ಯಾಣ ತಾಲೂಕಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ  ಹಾಲಿ ಜಿಲ್ಲಾ ಪಂಚಾಯತ್ ಸದಸ್ಯ ಗುಂಡೂರೆಡ್ಡಿ, ಭಾರತೀಯ ಆಹಾರ ನಿಗಮದ ಸದಸ್ಯ ಉಮೇಶ್ ಬಿರಬಿಟ್ಟೆ, ಪ್ರದೀಪ್  ವಾತಡೆ ಅವರಲ್ಲಿ ಓರ್ವರಿಗೆ ಟಿಕೆಟ್ ದೊರೆಯುವ ಲಕ್ಷಣಗಳಿವೆ.

ಮಸ್ಕಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರತಾಪಗೌಡ ಪಾಟೀಲ್ ಬಿಜೆಪಿ ಸೇರಿದ್ದರು. ನಂತರದ ಬೆಳವಣಿಗೆಗಳಲ್ಲಿ ವಿಧಾನಸಭಾ ಸ್ಪೀಕರ್ ರಮೇಶಕುಮಾರ್, ಪ್ರತಾಪಗೌಡ ಪಾಟೀಲರನ್ನು ಅನರ್ಹಗೊಳಿಸಿದ್ದರು. ಹೀಗಾಗಿ ಮಸ್ಕಿ ವಿಧಾನಸಭಾ  ಕ್ಷೇತ್ರ ತೆರವಾಗಿತ್ತು.  ಸದ್ಯ ಬಿಜೆಪಿ ಪಕ್ಷದಿಂದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಅಭ್ಯರ್ಥಿ ಬಹುತೇಕ ಖಚಿತ ಘೋಷಣೆಯಷ್ಟೆ ಬಾಕಿ ಇದೆ. ಕಾಂಗ್ರೆಸ್ ಪಕ್ಷದಿಂದ ಬಸಣಗೌಡ ತುರವಿಹಾಳ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

PRATAPGOUDA PATIL

ಪ್ರತಾಪ್​ಗೌಡ ಪಾಟೀಲ್

ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ ಎಮ್.​ಸಿ. ಮನಗೂಳಿ ಅವರ ನಿಧನದಿಂದ  ಶಾಸಕ ಸ್ಥಾನ ತೆರವಾಗಿದ್ದರೂ ಚುನಾವಣಾ ಆಯೋಗ ಉಪ ಚುನಾವಣೆಯನ್ನು ಘೋಷಿಸಿಲ್ಲ.

ಉಪ ಚುನಾವಣೆ ಘೋಷಣೆಯಾದ ಈ ಹೊತ್ತಲ್ಲಿ  ರಾಜ್ಯದಲ್ಲಿ ಸಿಡಿ ರಾಜಕೀಯದ ಧ್ವನಿ ಜೋರಾಗಿದೆ. ಕಾಂಗ್ರೆಸ್​ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಂಗಡಿಗರು ಸಿಡಿ ವಿಷಯ ಇಟ್ಟುಕೊಂಡು ಬಿಜೆಪಿಯ ಅಭ್ಯರ್ಥಿಗಳನ್ನು ಮಣಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವುದು ಈಗಾಗಲೇ ಖಚಿತವಾಗಿದೆ. ಆದರೆ ಬಿಜೆಪಿ  ಸಿಡಿ ರಾಜಕೀಯ ಮಾಡಲು ಅವಕಾಶ ನೀಡದೇ, ಕಮಲದ ಧ್ವಜ ಹಾರಿಸುವ ಸಿದ್ಧತೆಯಲ್ಲಿದೆ.  ಈ ಕಾರಣಗಳಿಂದ ಬೆಳಗಾವಿ ಲೋಕಸಭಾ ಉಪ ಚುನಾವಣೆ ಕಣ ಅತ್ಯಂತ ರೋಚಕ ಘಟ್ಟದತ್ತ ಮುಖಮಾಡುವುದಂತೂ ಗ್ಯಾರಂಟಿ.

ಉಳಿದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯವಿರುವುದರಿಂದ ಆಡಳಿತಾರೂಢ ಬಿಜೆಪಿಗೆ ಸವಾಲಾಗಿದೆ. ಆದರೂ, ಮೇಲ್ನೋಟಕ್ಕೆ ಜಾತಿ ಸಮೀಕರಣವನ್ನು ಗಮನಿಸಿದರೆ ಬಿಜೆಪಿಗೆ ಸ್ವಲ್ಪ ಮುನ್ನಡೆ ಸಿಗಬಹುದು ಎನ್ನುವ ಅಂದಾಜು ಮಾಡಲಾಗುತ್ತಿದೆ.

ಇದನ್ನೂ ಓದಿ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿದೆ: ಪ್ರಮೋದ್ ಮುತಾಲಿಕ್

ಮಸ್ಕಿ ಉಪಚುನಾವಣೆಯಲ್ಲಿ ಗೆಲುವು ಖಂಡಿತ, ಗೆದ್ದ ನಂತರ ಸಚಿವನಾಗುವ ವಿಶ್ವಾಸವಿದೆ: ಅನರ್ಹ ಶಾಸಕ ಪ್ರತಾಪ್ ಗೌಡ

Published On - 5:19 pm, Tue, 16 March 21

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ