Karnataka Bypoll Dates: ರಾಜ್ಯದ ಹಾನಗಲ್, ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಘೋಷಣೆ

ಹಾನಗಲ್, ಸಿಂಧಗಿ ವಿಧಾನಸಭಾ ಉಪಚುನಾವಣೆ ದಿನಾಂಕ: ರಾಜ್ಯದ ಹಾನಗಲ್, ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕಗಳನ್ನು ಘೋಷಿಸಲಾಗಿದೆ.

Karnataka Bypoll Dates: ರಾಜ್ಯದ ಹಾನಗಲ್, ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಘೋಷಣೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shivaprasad.hs

Updated on:Sep 28, 2021 | 10:55 AM

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಘೋಷಿಸಿದೆ. ಅಕ್ಟೋಬರ್ 30ರಂದು 2 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರವು ಸಿ.ಎಂ ಉದಾಸಿ ಅವರ ನಿಧನದಿಂದ ತೆರವಾಗಿತ್ತು. ಎಂ.ಸಿ.ಮನಗೂಳಿ ಅವರ ನಿಧನದಿಂದ ಸಿಂದಗಿ ಕ್ಷೇತ್ರ ತೆರವಾಗಿತ್ತು. ಇದೀಗ ರಾಜ್ಯದ ಎರಡೂ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದ್ದು, ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. 

ಸಿಂದಗಿ ಕ್ಷೇತ್ರ: ಈ ಹಿಂದೆ ಎರಡು ಬಾರಿ ಸಿಂದಗಿ ಕ್ಷೇತ್ರದ ಶಾಸಕರಾಗಿದ್ದ ಜೆಡಿಎಸ್​ನ ಎಂ.ಸಿ.ಮನಗೂಳಿ 2021 ರ ಜನವರಿ 28 ರಂದು ಮೃತಪಟ್ಟಿದ್ದರು. ಇದೀಗ ಅವರ ನಿಧನದ ಕಾರಣದಿಂದ ತೆರವಾದ ಸಿಂದಗಿ ಕ್ಷೇತ್ರಕ್ಕೆ ಉಪ ಚುನಾವಣೆಯನ್ನು ಘೋಷಿಸಿ ಕೇಂದ್ರ ಚುನಾವಣಾ ಆಯೋಗವು ದಿನಾಂಕ ನಿಗದಿ ಮಾಡಿದೆ. ಮನಗೂಳಿ ಈ ಹಿಂದೆ ಸಚಿವರೂ ಆಗಿದ್ದರು.

ಮನಗೂಳಿಯವರ ನಿಧನಾನಂತರ ಅವರ ಕುಟುಂಬ ಜೆಡಿಎಸ್​ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಪಕ್ಷವನ್ನು ಸೇರಿದ್ದರು. ಎಂ.ಸಿ.ಮನಗೂಳಿ ಪುತ್ರ ಅಶೋಕ್ ಮನಗೂಳಿ ಈಗಾಗಲೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಣೆಯಾಗಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ಟಿಕೆಟ್​ಗಾಗಿ ಲಾಬಿ ನಡೆಯುತ್ತಿದ್ದು, ಬಿಜೆಪಿಯಿಂದ ಬಿ.ವೈ. ವಿಜಯೇಂದ್ರ, ಲಕ್ಷ್ಮಣ ಸವದಿ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಮಾಜಿ ಶಾಸಕ ರಮೇಶ ಭೂಸನೂರು ಕೂಡ ಬಿಜೆಪಿ ಟಿಕೆಟ್​ ಆಕಾಂಕ್ಷಿ ಪಟ್ಟಿಯಲ್ಲಿದ್ದಾರೆ. ಜೆಡಿಟಸ್ ಪಕ್ಷವು ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದೆ. ಅಕ್ಟೋಬರ್ 8 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಹಾನಗಲ್ ಕ್ಷೇತ್ರ: ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಸಿ.ಎಂ.ಉದಾಸಿ, ಜೂನ್ 8,2021ರಂದು ನಿಧನರಾಗಿದ್ದರು. ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಅಕ್ಟೋಬರ್ 30,2021ರಂದು ಉಪಚುನಾವಣೆ ನಡೆಯಲಿದೆ.

ಇದನ್ನೂ ಓದಿ:

ಮೈಸೂರು: ಪೊಲೀಸ್ ಕಾನ್ಸ್​ಟೇಬಲ್​ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಭಾಗಿ

ಬೆಂಗಳೂರಿನಲ್ಲಿ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿತ!

(Karnataka Bypoll election dates are announced for Hanagal and Sindagi election will be on October 30th)

Published On - 10:10 am, Tue, 28 September 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ