Karnataka Bypolls 2021: ಕೊನೆಗೂ ಹಾನಗಲ್ ಉಪಚುನಾವಣೆ ಬಿಜೆಪಿ ಉಸ್ತುವಾರಿ ಪಟ್ಟಿಗೆ ಬಿವೈ ವಿಜಯೇಂದ್ರ ಸೇರ್ಪಡೆ

BY Vijayendra: ಬಿಜೆಪಿ ಹೊಸದಾಗಿ ಬಿಡುಗಡೆ ಮಾಡಿರುವ ಹಾನಗಲ್ ಉಪಚುನಾವಣೆಯ 13 ಉಸ್ತುವಾರಿಗಳ ಪಟ್ಟಿಯಲ್ಲಿ ಬಿ.ವೈ. ವಿಜಯೇಂದ್ರ ಅವರ ಹೆಸರು ಕೂಡ ಸೇರ್ಪಡೆಯಾಗಿದೆ.

Karnataka Bypolls 2021: ಕೊನೆಗೂ ಹಾನಗಲ್ ಉಪಚುನಾವಣೆ ಬಿಜೆಪಿ ಉಸ್ತುವಾರಿ ಪಟ್ಟಿಗೆ ಬಿವೈ ವಿಜಯೇಂದ್ರ ಸೇರ್ಪಡೆ
ಬಿ.ವೈ ವಿಜಯೇಂದ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 05, 2021 | 3:57 PM

ಬೆಂಗಳೂರು: ಕರ್ನಾಟಕದ ಹಾನಗಲ್ ಹಾಗೂ ಸಿಂಧಗಿ ಉಪಚುನಾವಣೆ (By Elections) ಉಸ್ತುವಾರಿಗಳ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮಗ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೆಸರಿಲ್ಲ ಎಂಬ ಕಾರಣಕ್ಕೆ ಅವರ ಅಭಿಮಾನಿಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ, ವಿಜಯೇಂದ್ರ ಟ್ವೀಟ್ ಮತ್ತು ಫೇಸ್​ಬುಕ್ ಪೋಸ್ಟ್ ಮೂಲಕ ತಮ್ಮ ಅಭಿಮಾನಿಗಳಿಗೆ ಶಾಂತ ರೀತಿಯಿಂದ ನಡೆದುಕೊಳ್ಳಲು ಮನವಿ ಮಾಡಿದ್ದರು. ಅದರ ಬೆನ್ನಲ್ಲೇ ಬಿಜೆಪಿ ಇದೀಗ ಉಸ್ತುವಾರಿಗಳ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬಿ.ವೈ. ವಿಜಯೇಂದ್ರ ಅವರಿಗೆ ಹಾನಗಲ್ ಉಪಚುನಾವಣೆ ಉಸ್ತುವಾರಿ ಹೊಣೆ ನೀಡಿದೆ.

ಅಕ್ಟೋಬರ್ 30ರಂದು ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆ ನಡೆಯಲಿದೆ. ಈ ಉಪಚುನಾವಣೆಯ ಬಿಜೆಪಿ ಉಸ್ತುವಾರಿಗಳ ಪಟ್ಟಿಯಲ್ಲಿ ಬಿ.ವೈ. ವಿಜಯೇಂದ್ರ ಅವರ ಹೆಸರಿರದಿರುವುದಕ್ಕೆ ಅವರ ಅಭಿಮಾನಿಗಳು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿದ್ದರು. ಇದೀಗ ಬಿಜೆಪಿ ಹೊಸದಾಗಿ ಬಿಡುಗಡೆ ಮಾಡಿರುವ ಹಾನಗಲ್ ಉಪಚುನಾವಣೆಯ 13 ಉಸ್ತುವಾರಿಗಳ ಪಟ್ಟಿಯಲ್ಲಿ ಬಿ.ವೈ. ವಿಜಯೇಂದ್ರ ಅವರ ಹೆಸರು ಕೂಡ ಸೇರ್ಪಡೆಯಾಗಿದೆ.

ಬಿ.ವೈ. ವಿಜಯೇಂದ್ರ ಅವರ ಜೊತೆಗೆ ಸಚಿವರಾದ ಮುರುಗೇಶ್ ನಿರಾಣಿ. ಬಿ.ಸಿ. ಪಾಟೀಲ್, ಜೆ.ಸಿ. ಮಾಧುಸ್ವಾಮಿ, ಶಿವರಾಮ್ ಹೆಬ್ಬಾರ್, ಸಂಸದ ಶಿವಕುಮಾರ್ ಉದಾಸಿ ಮುಂತಾದ ನಾಯಕರ ಹೆಸರನ್ನು ನಮೂದಿಸಲಾಗಿದೆ. ಸಿಂಧಗಿ ಉಪಚುನಾವಣೆಯ ಬಿಜೆಪಿ ಉಸ್ತುವಾರಿಗಳಾಗಿ ಸಚಿವರಾದ ಗೋವಿಂದ ಕಾರಜೋಳ, ವಿ. ಸೋಮಣ್ಣ, ಸಿ.ಸಿ. ಪಾಟೀಲ್, ಶಶಿಕಲಾ ಜೊಲ್ಲೆ ಮುಂತಾದವರಿದ್ದಾರೆ.

ಕಳೆದ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವಿನಲ್ಲಿ ಬಿ.ವೈ. ವಿಜಯೇಂದ್ರ ಬಹಳ ಪ್ರಮುಖ ಪಾತ್ರ ವಹಿಸಿದ್ದರು. ಉಪಚುನಾವಣೆಯ ಸ್ಪೆಷಲಿಸ್ಟ್​ ಎಂದೇ ಹೆಸರಾಗಿರುವ ಬಿ.ವೈ. ವಿಜಯೇಂದ್ರ ಅವರ ಹೆಸರು ಬಿಜೆಪಿಯ ಮೊದಲಿನ ಉಸ್ತುವಾರಿಗಳ ಪಟ್ಟಿಯಲ್ಲಿ ಇರಲಿಲ್ಲ. ಹೀಗಾಗಿ ಅವರ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿ.ವೈ. ವಿಜಯೇಂದ್ರ, ಪಕ್ಷದ ರಾಜ್ಯ ಉಪಾಧ್ಯಕ್ಷನಾಗಿ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಮಾಡುವುದೂ ಸೇರಿದಂತೆ ಪಕ್ಷ ನೀಡುವ ಜವಾಬ್ದಾರಿಯನ್ನು ನಿರ್ವಹಿಸಲು ನಾನು ಕಟಿಬದ್ಧನಾಗಿದ್ದೇನೆ. ಪಕ್ಷದ ಗೆಲುವೇ ನಮಗೆ ಮುಖ್ಯ. ಭಿನ್ನಾಭಿಪ್ರಾಯದಿಂದ ಕಾರ್ಯಕರ್ತರಲ್ಲಿ ಗೊಂದಲ ಮೂಡುತ್ತದೆ. ಇದರಿಂದ ವಿಪಕ್ಷಗಳಿಗೆ ಪರೋಕ್ಷವಾಗಿ ಸಹಾಯ ಮಾಡಿದಂತಾಗುತ್ತದೆ. ಯಾರೂ ಈ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡಬೇಡಿ ಎಂದಿದ್ದರು.

ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಸಿ.ಎಂ. ಉದಾಸಿ 2021ರ ಜೂನ್ 8ರಂದು ನಿಧನರಾಗಿದ್ದರು. ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಅಕ್ಟೋಬರ್ 30ರಂದು ಉಪಚುನಾವಣೆ ನಡೆಯಲಿದೆ. ಹಾಗೇ, ಈ ಹಿಂದೆ ಎರಡು ಬಾರಿ ಸಿಂಧಗಿ ಕ್ಷೇತ್ರದ ಶಾಸಕರಾಗಿದ್ದ ಜೆಡಿಎಸ್​ನ ಎಂ.ಸಿ. ಮನಗೂಳಿ ಜನವರಿ 28 ರಂದು ಮೃತಪಟ್ಟಿದ್ದರು. ಇದೀಗ ಅವರ ನಿಧನದಿಂದ ತೆರವಾದ ಸಿಂಧಗಿ ಕ್ಷೇತ್ರಕ್ಕೆ ಅಕ್ಟೋಬರ್ 30ರಂದು ಮತದಾನ ನಡೆಯಲಿದ್ದು,  ನವೆಂಬರ್ 2ರಂದು ಎರಡೂ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಅಕ್ಟೋಬರ್ 30ಕ್ಕೆ ಮೂರು ಲೋಕಸಭಾ, 30 ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ: ನವೆಂಬರ್ 2ರಂದು ಮತ ಎಣಿಕೆ

Karnataka Bypoll Dates: ರಾಜ್ಯದ ಹಾನಗಲ್, ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಘೋಷಣೆ

Published On - 3:51 pm, Tue, 5 October 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ