AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಗೆ ಆ ಸಚಿವರು ಗೋಣಿಚೀಲದಲ್ಲಿ ಹಣ ತರುತ್ತಾರೆ! ಬಿವೈ ವಿಜಯೇಂದ್ರ ಗಂಭೀರ ಆರೋಪ

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣ ಹಂಚುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ. ಸಚಿವರೊಬ್ಬರು ದಾವಣಗೆರೆಯಲ್ಲಿ ಹಣದ ಗೋಣಿಚೀಲವನ್ನೇ ತಂದು ಕೂರುತ್ತಾರೆ ಎಂದ ಅವರು, ಹಾಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನ ಬೇಸತ್ತಿದ್ದು, ಬಿಜೆಪಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಗೆ ಆ ಸಚಿವರು ಗೋಣಿಚೀಲದಲ್ಲಿ ಹಣ ತರುತ್ತಾರೆ! ಬಿವೈ ವಿಜಯೇಂದ್ರ ಗಂಭೀರ ಆರೋಪ
ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರImage Credit source: tv9
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Mar 23, 2026 | 11:17 AM

Share

ಬಾಗಲಕೋಟೆ, ಮಾರ್ಚ್ 23: ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳ ಹಿನ್ನೆಲೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. ಈ ಮಧ್ಯೆ, ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ವಿಜಯೇಂದ್ರ, ದಾವಣಗೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಹಣ ತರುವುದಿಲ್ಲ, ಸಚಿವರೊಬ್ಬರು ಗೋಣಿಚೀಲದಲ್ಲಿ ಹಣ ತಂದು ಕೂರುತ್ತಾರೆ ಎಂದು ಆರೋಪಿಸಿದರು. ಅಲ್ಲಿನ ರಾಜಕೀಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ನನಗೆ ತಿಳಿದಿದೆ ಎಂದು ಹೇಳಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

‘ರಾಜ್ಯದ ಜನ ಕಾಂಗ್ರೆಸ್ ಸರ್ಕಾರದಿಂದ ಬೇಸತ್ತಿದ್ದಾರೆ. ಇದು ಬಡವರು ಮತ್ತು ದೀನದಲಿತರ ವಿರೋಧಿ ಸರ್ಕಾರ’ ಎಂದು ಅವರು ಆರೋಪಿಸಿದರು. ಸದ್ಯದ ರಾಜಕೀಯ ವಾತಾವರಣ ನೋಡಿದರೆ ಬಿಜೆಪಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಕಮಲದ ಹೂವು ಅರಳುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಈ ಹಿಂದೆ ಸಿರಾ ಮತ್ತು ಕೆಆರ್ ಪೇಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕುತಂತ್ರ ಮಾಡಿತ್ತು ಎಂದು ಆರೋಪಿಸಿದ ಅವರು, ಮತದಾನ ಕೊನೆಯ ದಿನದವರೆಗೆ ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.

ವಿಜಯೇಂದ್ರ ಮಾತಿನ ವಿಡಿಯೋ

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರ ಆಶೀರ್ವಾದ ಪಡೆದು ಬಂದಿದ್ದಾಗಿ ತಿಳಿಸಿದ ವಿಜಯೇಂದ್ರ, ಅವರೆಂದೂ ಇಟ್ಟ ಹಿಜ್ಜೆಯಿಂದ ಹಿಂದೆ ಸರಿದವರಲ್ಲ. ಪಕ್ಷದ ಗುರಿ ಸಾಧನೆಗೆ ದಿಟ್ಟ ಹೆಜ್ಜೆ ಇಡಲಾಗುತ್ತಿದೆ ಎಂದರು.

ಇದನ್ನೂ ಓದಿ: ಶಾಮನೂರು ಮೊಮ್ಮಗನಿಗೆ ಕಾಂಗ್ರೆಸ್ ಟಿಕೆಟ್​ಗೆ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!

ಬಾಗಲಕೋಟೆ ಕ್ಷೇತ್ರದಲ್ಲಿ ಇದ್ದ ಸಣ್ಣಪುಟ್ಟ ಗೊಂದಲಗಳನ್ನು ಬಗೆಹರಿಸಲಾಗುವುದು. ಎಲ್ಲ ನಾಯಕರು ಒಟ್ಟಾಗಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿ ಚರಂತಿಮಠರ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು. ಒಟ್ಟಿನಲ್ಲಿ, ಉಪಚುನಾವಣೆ ಸಮೀಪಿಸುತ್ತಿದ್ದಂತೆ ಆರೋಪ-ಪ್ರತ್ಯಾರೋಪಗಳ ನಡುವೆ ರಾಜ್ಯ ರಾಜಕೀಯ ಕಾವು ಹೆಚ್ಚಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!