AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಆರಂಭವಾಗಲಿದೆ ಕೃಷಿ ಭಾಗ್ಯ ಯೋಜನೆ: ಸಚಿವ ಸಂಪುಟ ಮಹತ್ವದ ನಿರ್ಧಾರ

2023-24ನೇ ಸಾಲಿನಡಿ 24 ಜಿಲ್ಲೆಗಳ 106 ತಾಲೂಕಿನಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆ ಜಾರಿಗೆ ಸಂಪುಟದಲ್ಲಿ ಅನುಮೋದನೆ ಪಡೆಯಲಾಗಿದೆ ಎಂದು ಸಚಿವ ಹೆಚ್‌ಕೆ ಪಾಟೀಲ್ ಮಾಹಿತಿ ನೀಡಿದರು.

ಮತ್ತೆ ಆರಂಭವಾಗಲಿದೆ ಕೃಷಿ ಭಾಗ್ಯ ಯೋಜನೆ: ಸಚಿವ ಸಂಪುಟ ಮಹತ್ವದ ನಿರ್ಧಾರ
ಸಾಂದರ್ಭಿಕ ಚಿತ್ರ
ಪ್ರಸನ್ನ ಗಾಂವ್ಕರ್​
| Edited By: |

Updated on:Nov 09, 2023 | 8:28 PM

Share

ಬೆಂಗಳೂರು, ನವೆಂಬರ್ 9: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ (Karnataka Cabinet Meet) ಗುರುವಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ‘ಕೃಷಿ ಭಾಗ್ಯ (Krushi Bhagya)‘ ಯೋಜನೆ ಮತ್ತೆ ಪ್ರಾರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಂಪುಟ ಸಭೆಯ ಬಳಿಕ ಸಚಿವ ಹೆಚ್‌ಕೆ ಪಾಟೀಲ್ (HK Patil) ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 2023-24ನೇ ಸಾಲಿನಡಿ 24 ಜಿಲ್ಲೆಗಳ 106 ತಾಲೂಕಿನಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಜಾರಿಗೆ ಸಂಪುಟದಲ್ಲಿ ಅನುಮೋದನೆ ಪಡೆಯಲಾಗಿದೆ ಎಂದರು.

ಪ್ರಧಾನಮಂತ್ರಿ ಕೃಷಿಸಿಂಚಾಯಿ ಯೋಜನೆ 5 ತಾಲೂಕಿನಲ್ಲಿ ಜಾರಿಗೆ ಒಪ್ಪಿಗೆ ನೀಡಲಾಗಿದೆ. 2025-26ನೇ ಸಾಲಿನ ವರೆಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅನುಷ್ಠಾನಗೊಳ್ಳಲಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಒಟ್ಟು ಮೊತ್ತ 38 ಕೋಟಿ ರೂಪಾಯಿ ಆಗಿದೆ. ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಗೆ ವಿಮಾ ಕಂಪನಿ ನಿಗದಿ ಮಾಡಲಾಗಿದೆ. ಕ್ಲಸ್ಟರ್‌ವಾರು ವಿಮಾ ಸಂಸ್ಥೆಗಳ ನಿಗದಿಗೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

10 ಕ್ಲಸ್ಟರ್‌ಗಳಲ್ಲಿ ರಿಲಯನ್ಸ್ ಜನರಲ್ ಇನ್ಶುರೆನ್ಸ್, ಬಜಾಜ್ ಅಲಿಯನ್ಸ್, SBI ಜನರಲ್ ಇನ್ಶುರೆನ್ಸ್, ಯುನಿವರ್ಸಲ್ ಸೊಂಪೊ ಜನರಲ್ ಇನ್ಶುರೆನ್ಸ್, ಫ್ಯೂಚರ್ ಇನ್ಶುರೆನ್ಸ್ ಕಂಪನಿ ನಿಗದಿಗೊಳಿಸಿ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಪಾಟೀಲ್ ತಿಳಿಸಿದರು.

ಡಾ.ನಾಗಮಣಿ ಕಡ್ಡಾಯ ನಿವೃತ್ತಿಗೆ ಅನುಮೋದನೆ

ಡಾ. ನಾಗಮಣಿ ಕಡ್ಡಾಯ ನಿವೃತ್ತಿ ನಿರ್ಧಾರಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಲೋಕಾಯುಕ್ತ ಪೊಲೀಸರ ದಾಳಿ ವೇಳೆ ಡಾ. ನಾಗಮಣಿ ಸಿಕ್ಕಿಬಿದ್ದಿದ್ದರು.

ಈ ಮಧ್ಯೆ, ಲೋಕಾಯುಕ್ತ ಸಂಸ್ಥೆಗೆ ಗುತ್ತಿಗೆ ಆಧಾರದಲ್ಲಿ ಲೆಕ್ಕಾಧೀಕ್ಷಕರ ನೇಮಕ, ರಾಜ್ಯಪಾಲರ ಸಚಿವಾಲಯಕ್ಕೆ ಸರ್ಜನ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಡಾ.ನವೀನ್ ಕುಮಾರ್ ನೇಮಕಗೊಳಿಸಿ ನೇಮಕಗೊಳಿಸಿ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ: ಸಂಪುಟದಲ್ಲಿ ನಡೆಯದ ಚರ್ಚೆ

ಸಚಿವ ಸಂಪುಟದ ಇತರ ನಿರ್ಣಯಗಳು

  1. ಕನಕಪುರ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು 10.38 ಕೋಟಿ ರೂ. ಅನುಮೋದನೆ (ಇನ್ಫೋಸಿಸ್ ಕಂಪನಿ ವತಿಯಿಂದ ಸಿಎಸ್ಆರ್ ಫಂಡ್ ನಿಂದ ನಿರ್ಮಿಸಿರುವ ಕನಕಪುರದ ತಾಯಿ ಆಸ್ಪತ್ರೆ)
  2. ಮಹತ್ವಾಕಾಂಕ್ಷೆ ತಾಲೂಕುಗಳ 73 ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಲ್ಲಿ ಹಾಗೂ 50 ಆದರ್ಶ ಶಾಲೆಗಳಲ್ಲಿ 20 ಕೋಟಿ ವೆಚ್ಚದಲ್ಲಿ ಆವಿಷ್ಕಾರ ಇನ್ನೋವೇಟಿವ್ ಲ್ಯಾಬ್ ಗಳ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ
  3. ಸಂವಿಧಾನ ದಿನಾಚರಣೆ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆ ಸಮಾವೇಶವಾಗಿ ಆಚರಣೆಗೆ 18 ಕೋಟಿ ರೂ.
  4. ವಾಯುವ್ಯ ಸಾರಿಗೆಯಲ್ಲಿ16.20 ಕೋಟಿ ರೂ. ವೆಚ್ಚದಲ್ಲಿ 45 ಬಸ್ ಗಳ ಖರೀದಿಗೆ ಅನುಮೋದನೆ
  5. ಹುಬ್ಬಳ್ಳಿ ಬಿ.ಆರ್.ಟಿಗೆ 45 ಕೋಟಿ ರೂ. ವೆಚ್ಚದಲ್ಲಿ 100 ಬಸ್ ಖರೀದಿಗೆ ಅನುಮೋದನೆ
  6. ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ – 2023 ನಿಯಮಗಳಿಗೆ ತಿದ್ದುಪಡಿಗೆ ಒಪ್ಪಿಗೆ
  7. ಪೋಷಣ್ ಅಭಿಯಾನಕ್ಕೆ 26.60 ಕೋಟಿ ರೂ. ವೆಚ್ಚದಲ್ಲಿ ಉಪಕರಣಗಳ ಖರೀದಿ
  8. ಗ್ರೋತ್ ಮಾನಿಟರಿಂಗ್ ಡಿವೈಸಸ್ ಖರೀದಿಗೆ ಅನುಮೋದನೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:18 pm, Thu, 9 November 23

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು