Milk Price Hike: ನಂದಿನಿ ಹಾಲಿನ ದರ ಆಗಸ್ಟ್ 1ರಿಂದ 3 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

|

Updated on: Jul 28, 2023 | 3:11 PM

ಹಾಲು ಉತ್ಪಾದಕರ ಬೇಡಿಕೆಗಳನ್ನು ಪರಿಗಣಿಸಿ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಭೆಯ ನಂತರ ಸಚಿವ ಹೆಚ್​ಕೆ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Milk Price Hike: ನಂದಿನಿ ಹಾಲಿನ ದರ ಆಗಸ್ಟ್ 1ರಿಂದ 3 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ
ನಂದಿನಿ ಹಾಲು (ಸಾಂದರ್ಭಿಕ ಚಿತ್ರ)
Follow us on

ಬೆಂಗಳೂರು: ನಂದಿನಿ ಹಾಲಿನ ದರವನ್ನು ಆಗಸ್ಟ್ 1 ರಿಂದ ಲೀಟರ್‌ಗೆ ಮೂರು ರೂಪಾಯಿಗಳಷ್ಟು ಹೆಚ್ಚಿಸಲು ಕರ್ನಾಟಕ ಸಚಿವ ಸಂಪುಟ (Karnataka Cabinet) ಗುರುವಾರ ರಾತ್ರಿ ನಿರ್ಧರಿಸಿದೆ. ಕರ್ನಾಟಕ ಹಾಲು ಒಕ್ಕೂಟ(KMF) ಉತ್ಪನ್ನಗಳ ಬ್ರಾಂಡ್ ಆಗಿರುವ ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಇತ್ತೀಚೆಗಷ್ಟೇ ಕೆಎಂಎಫ್​ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಸೇರಿದಂತೆ ಪ್ರಮುಖರು ಚರ್ಚೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದಿದ್ದರು. ಇದೀಗ ದರ ಹೆಚ್ಚಳ ಪ್ರಸ್ತಾವನೆಗೆ ಸಚಿವ ಸಂಪುಟದ ಅನುಮೋದನೆ ಪಡೆಯಲಾಗಿದೆ.

ಹಾಲು ಉತ್ಪಾದಕರ ಬೇಡಿಕೆಗಳನ್ನು ಪರಿಗಣಿಸಿ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಭೆಯ ನಂತರ ಸಚಿವ ಹೆಚ್​ಕೆ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಹಾಲಿನ ದರ ಹೆಚ್ಚಳ ಕ್ರಮವನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕದಲ್ಲಿ ಕಡಿಮೆ ದರದಲ್ಲಿ ಹಾಲು ಮಾರಾಟವಾಗುತ್ತಿದೆ. ನಮ್ಮ ರಾಜ್ಯಕ್ಕೆ ಹೋಲಿಸಿದರೆ ಇತರ ರಾಜ್ಯಗಳಲ್ಲಿ ಹಾಲು ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ ಎಂದು ಶುಕ್ರವಾರ ಹೇಳಿದ್ದಾರೆ.

ಪರಿಷ್ಕೃತ ದರ ಲೆಕ್ಕಾಚಾರದ ಪ್ರಕಾರ, ಲೀಟರ್‌ಗೆ 39 ರೂ. ಬೆಲೆಯ ಹಾಲು (ಟೋನ್ಡ್) ಆಗಸ್ಟ್ 1ರಿಂದ 42 ರೂ.ಗೆ ಮಾರಾಟವಾಗಲಿದೆ. ಉಳಿದಂತೆ ಲೀಟರ್‌ಗೆ 54 ರಿಂದ 56 ರೂ.ವರೆಗೆ ಮಾರಾಟವಾಗುತ್ತದೆ. ತಮಿಳುನಾಡಿನಲ್ಲಿ ಲೀಟರ್‌ ಹಾಲಿಗೆ 44 ರೂ.,” ಎಂದು ಮುಖ್ಯಮಂತ್ರಿ ಹೇಳಿದರು.

ಇದನ್ನೂ ಓದಿ: CM in Bengaluru: ಹಾಲಿನ ದರ ಹೆಚ್ಚಿಸುವ ನಿರ್ಧಾರ ಕೆಎಂಎಫ್ ತೆಗೆದುಕೊಂಡಿದ್ದು: ಸಿದ್ದರಾಮಯ್ಯ, ಮುಖ್ಯಮಂತ್ರಿ

ಈ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, “ನಾವು ರೈತರಿಗೆ (ಹಾಲು ಉತ್ಪಾದಕರಿಗೆ) ಹಣವನ್ನು ನೀಡಬೇಕಾಗಿದೆ, ಇಂದು ಇಡೀ ದೇಶದಲ್ಲಿ ಇದು (ಟೋನ್ಡ್ ಹಾಲು) ಲೀಟರ್‌ಗೆ 56 ರೂ. ನಮ್ಮ ರಾಜ್ಯದಲ್ಲಿ ಜನರು ಪಡೆಯುತ್ತಿದ್ದಾರೆ. ಕಡಿಮೆ ಬೆಲೆ.”

ರೈತರಿಗೆ ನೆರವಾಗುವ ಉದ್ದೇಶದಿಂದ ಹಾಲಿನ ದರವನ್ನು ಮೂರು ರೂಪಾಯಿಗಳಷ್ಟು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಅವರು ಹೇಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Fri, 28 July 23