AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

195 ತಾಲೂಕುಗಳ ಬರ ಘೋಷಣೆಗೆ ಸಚಿವ ಸಂಪುಟ ಒಪ್ಪಿಗೆ; ಸಚಿವ ಹೆಚ್‌ಕೆ ಪಾಟೀಲ್‌ ಮಾಹಿತಿ

Karnataka Cabinet Decisions; ರಾಜ್ಯದಲ್ಲಿ ಬರದಿಂದ 2655 ಕೋಟಿ ರೂ. ತೋಟಗಾರಿಕೆ ಬೆಳೆ ನಷ್ಟವಾಗಿದೆ. ತೋಟಗಾರಿಕೆ ಬೆಳೆ ನಷ್ಟಕ್ಕೆ 206 ಕೋಟಿ ಪರಿಹಾರ ಕೋರಲು ತೀರ್ಮಾನ ಕೈಗೊಳ್ಳಲಾಗಿದೆ. 195 ಪಶು ಶಿಬಿರಕ್ಕಾಗಿ 104 ಕೋಟಿ ರೂ.ಗೆ ಬೇಡಿಕೆ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೆಚ್‌ಕೆ ಪಾಟೀಲ್‌ ತಿಳಿಸಿದರು.

195 ತಾಲೂಕುಗಳ ಬರ ಘೋಷಣೆಗೆ ಸಚಿವ ಸಂಪುಟ ಒಪ್ಪಿಗೆ; ಸಚಿವ ಹೆಚ್‌ಕೆ ಪಾಟೀಲ್‌ ಮಾಹಿತಿ
ಹೆಚ್‌ಕೆ ಪಾಟೀಲ್‌
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on:Sep 22, 2023 | 10:12 PM

Share

ಬೆಂಗಳೂರು, ಸೆಪ್ಟೆಂಬರ್ 22: ರಾಜ್ಯದ 195 ತಾಲೂಕುಗಳ ಬರ ಘೋಷಣೆಗೆ ಸಚಿವ ಸಂಪುಟ (Cabinet) ಶುಕ್ರವಾರ ರಾತ್ರಿ ಒಪ್ಪಿಗೆ ಸೂಚಿಸಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸಚಿವ ಹೆಚ್‌ಕೆ ಪಾಟೀಲ್‌ (HK Patil) ಮಾಧ್ಯಮಗಳಿಗೆ ಮಾಹಿತಿ ನೀಡಿದರು. ರಾಜ್ಯದಲ್ಲಿ ಬರಗಾಲದ ಸ್ಥಿತಿಯಿಂದ 30,432 ಕೋಟಿ ರೂ. ನಷ್ಟ ಉಂಟಾಗಿದೆ. 4,860 ಕೋಟಿ ರೂ. ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸ್ತಿದ್ದೇವೆ. ರಾಜ್ಯದಲ್ಲಿ ಬರಗಾಲದಿಂದ 39,039 ಲಕ್ಷ ಹೆಕ್ಟೇರ್‌ನಲ್ಲಿ ಕೃಷಿ ಬೆಳೆ ನಷ್ಟವಾಗಿದೆ. ಎನ್‌ಡಿಆರ್‌ಎಫ್‌ ಪ್ರಕಾರ 3824.67 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೆಚ್‌ಕೆ ಪಾಟೀಲ್‌ ತಿಳಿಸಿದರು.

ರಾಜ್ಯದಲ್ಲಿ ಬರದಿಂದ 2655 ಕೋಟಿ ರೂ. ತೋಟಗಾರಿಕೆ ಬೆಳೆ ನಷ್ಟವಾಗಿದೆ. ತೋಟಗಾರಿಕೆ ಬೆಳೆ ನಷ್ಟಕ್ಕೆ 206 ಕೋಟಿ ಪರಿಹಾರ ಕೋರಲು ತೀರ್ಮಾನ ಕೈಗೊಳ್ಳಲಾಗಿದೆ. 195 ಪಶು ಶಿಬಿರಕ್ಕಾಗಿ 104 ಕೋಟಿ ರೂ.ಗೆ ಬೇಡಿಕೆ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ. 624 ಮೇವು ಬ್ಯಾಂಕ್‌ ಸ್ಥಾಪನೆಗೆ 126.3 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ ಇಡಲಾಗುವುದು. ಔಷಧಕ್ಕೆ 25 ಕೋಟಿ ರೂ, ಆಹಾರಕ್ಕಾಗಿ ಮೇವು ಬೀಜಕ್ಕೆ 50 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗುವುದು. ದೆಹಲಿಗೆ ತೆರಳಿ ಮನವಿ ಸಲ್ಲಿಸಲು ಕಂದಾಯ ಸಚಿವರಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ಪಾಟೀಲ್ ತಿಳಿಸಿದರು.

ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ: ಹೈಕೋರ್ಟ್ ಆದೇಶ

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯ ಸಂಪುಟ ಉಪಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜ್ಯ ಸರ್ಕಾರ, 195 ಬರ ಪೀಡಿತ ತಾಲ್ಲೂಕುಗಳನ್ನು ಇತ್ತೀಚೆಗಷ್ಟೇ ಅಧಿಕೃತವಾಗಿ ಘೋಷಣೆ ಮಾಡಿತ್ತು.

ಕೊಡಗರು ಇನ್ನು ಮುಂದೆ ಕೊಡವರು

ಸಚಿವ ಸಂಪುಟ ಸಭೆಯಲ್ಲಿ ಎರಡು ಪ್ರಮುಖ ವಿಚಾರ ಚರ್ಚೆ ಆಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಕುಂಚಿಟಿಗರ ಸಮಾಜವನ್ನು ಕೇಂದ್ರದ ಹಿಂದುಳಿದ ವರ್ಗಗಳ ಜಾತಿ ಪಟ್ಟಿಗೆ ಸೇರ್ಪಡೆಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ. ಒಬಿಸಿ ಪಟ್ಟಿಗೆ ಸೇರಿಸುವುದಕ್ಕೆ ಕೇಂದ್ರಸರ್ಕಾರಕ್ಕೆ ಶಿಫಾರಸು ಮಾಡ್ತಿದ್ದೇವೆ. ಕೊಡವ ಸಮಾಜದ ಹೆಸರು ಕೊಡಗರು ಅಂತಾ ಇತ್ತು. ಇದೀಗ ಅದನ್ನು ಕೊಡವ ಅಂತಾ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 pm, Fri, 22 September 23