ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಅಸ್ತು

ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಲಿ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಅಸ್ತು
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
Follow us
| Updated By: ರಮೇಶ್ ಬಿ. ಜವಳಗೇರಾ

Updated on:Jan 18, 2024 | 4:46 PM

ಬೆಂಗಳೂರು, (ಜನವರಿ 18): ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. ಇಂದು(ಜನವರಿ 18) ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಟಪುದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಂಪುಟ ಸಭೆ ಬಳಿಕ ಎಚ್​ಕೆ ಪಾಟೀಲ್ ಹಾಗೂ ಹೆಚ್​ಸಿ ಮಹಾದೇವಪ್ಪ ಜಂಟಿ ಸುದ್ದಿಗೋಷ್ಠಿ ನಡೆಸಿ ನ್ಯಾಯಮೂರ್ತಿ ಸದಾಶಿವ ಆಯೋಗದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರದಿ ಬಗ್ಗೆ ವಿವರಿಸಿದರು.

ನ್ಯಾಯಮೂರ್ತಿ ಸದಾಶಿವ ಆಯೋಗದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರದಿ ಮೇರೆಗೆ ಒಳ ಮೀಸಲಾತಿಗಾಗಿ ಸಂವಿಧಾನದ ಅನುಚ್ಛೇದ 341ಕ್ಕೆ ತಿದ್ದುಪಡಿ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಲು ಸಿದ್ದರಾಮಯ್ಯ ನೇತೃತ್ವದ ಸಂಪುಟ ನಿರ್ಧರಿಸಿದ್ದು, ಸಂವಿಧಾನಬದ್ಧವಾಗಿ ರಾಜ್ಯಗಳಿಗೆ ಅಧಿಕಾರ ಕೊಡಲು ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಫೆ.12ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ, ಫೆಬ್ರವರಿ 16ರಂದು ಬಜೆಟ್ ಮಂಡನೆ

ಇನ್ನು ಸಂಪುಟ ಸಭೆ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರಾದ ಎಚ್​ಕೆ ಪಾಟೀಲ್ ಹಾಗೂ ಡಾ ಹೆಚ್​ಸಿ ಮಹಾದೇವಪ್ಪ, 2 ದಶಕಗಳಿಂದ ದಲಿತರ ಒಳ‌ಪಂಗಡಗಳು ಅನ್ಯಾಯ ಆಗಿದೆ ಒಳಮೀಸಲಾತಿ ಬೇಕು ಎಂದು ಕೇಳುತ್ತಿದ್ದರು. ಹೀಗಾಗಿ ನ್ಯಾ.ಸದಾಶಿವ ಆಯೋಗದ ವರದಿ ನೀಡಲು ಸರ್ಕಾರ ಕೇಳಿತ್ತು. ಸದಾಶಿವ ಆಯೋಗದ ವರದಿ ಅಸೆಂಬ್ಲಿಯಲ್ಲಿ ಪ್ಲೇಸ್ ಆಗಲೇ ಇಲ್ಲ. ಸದಾಶಿವ ಆಯೋಗದ ವರದಿಯನ್ನು ನಾವು ಅಧಿಕಾರಕ್ಕೆ ಬಂದಾಗ ಮಂಡನೆ ಮಾಡ್ತೀವಿ ಅಂತ ಪ್ರಣಾಳಿಕೆಯಲ್ಲಿ ಹಾಕಿದ್ದೆವು. ಬಿಜೆಪಿಯ ಸರ್ಕಾರ ತರಾತುರಿಯಲ್ಲಿ ಕಾನೂನು ಸಚಿಬರ ನೇತೃತ್ವದಲ್ಲಿ ಕ್ಯಾಬಿನೆಟ್ ಸಬ್ ಕಮಿಟಿ ಮಾಡಿದ್ದರು. ನ್ಯಾ.ಸದಾಶಿವ ಆಯೋಗದ ವರದಿ ಕಮಿಟಿ ಅಪ್ರಸ್ತುತ ಹಾಗೂ ಮುಕ್ತಾಯ ಆಗಿದೆ ಅಂತ ಕ್ಯಾಬಿನೆಟ್ ನಿರ್ಣಯ ಮಾಡಿದ್ರು ಎಂದು ಹೇಳಿದರು.

2011 ಜನಸಂಖ್ಯೆ ಆಧಾರದ ಮೇಲೆ ನ್ಯಾಯಮೂರ್ತಿ ನಾಗ ಮೋಹನ್ ದಾಸ್ ವರದಿ ನೀಡಲಾಗಿತ್ತು ಸಂವಿಧಾನದ ಆರ್ಟಿಕಲ್ 341ಕ್ಕೆ ಖಂಡ (3) ನ್ನು ಸೇರಿಸದೇ ಹೋದರೆ ಒಳ ಮೀಸಲಾತಿ ನೀಡಲು ಸಾಧ್ಯವಿಲ್ಲ. ಪಾರ್ಲಿಮೆಂಟ್ ಮೂಲಕವೇ ಇದು ಆಗಬೇಕು. ರಾಜ್ಯ ಸರ್ಕಾರ ಇದನ್ನು ಮಾಡಲು ಸಾಧ್ಯವೇ ಇಲ್ಲ. ರಿಜೆಕ್ಟ್ ಆಗಿರುವ ವರದಿಯನ್ನು ನಾವು ಕ್ಯಾಬಿನೆಟ್ ಗೆ ತರಲು ಸಾಧ್ಯವಿಲ್ಲ. 101 ಜಾತಿಗಳ ಹಿತ ಕಾಪಾಡಲು ಆರ್ಟಿಕಲ್ 341ಗೆ ತಿದ್ದುಪಡಿ ತನ್ನಿ ಎಂದು ಕೇಂದ್ರಕ್ಕೆ ಶಿಫಾರಸು ಮಾಡಿದ್ದೇವೆ. ಎಂದು ಹೇಳಿದರು.

ಕೇಂದ್ರದ ಅಂಗಳಕ್ಕೆ ಒಳಮೀಸಲಾತಿ

ಇದರೊಂದಿಗೆ ಒಳ ಮೀಸಲಾತಿ ಇದೀಗ ಕೇಂದ್ರ ಸರ್ಕಾರದ ಅಂಗಳಕ್ಕೆ ತಲುಪಿದೆ. ಹಿಂದೆ ಬಿಜೆಪಿ ಸರ್ಕಾರ ವರ್ಗೀಕರಣ ಮಾಡಿ ಆದೇಶ ಮಾಡಿತ್ತು. ಸದ್ಯ ಈ ವಿಚಾರ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ಈಗ ಸಿದ್ದರಾಮಯ್ಯನವರ ಸರ್ಕಾರ ಕಾನೂನು ತಿದ್ದುಪಡಿ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಿ ಕೈತೊಳೆದುಕೊಂಡಿದೆ. ಹೀಗಾಗಿ ಒಳ ಮೀಸಲಾತಿ ವಿವಾದ ಇದೀಗ ಕೇಂದ್ರದ ಅಂಗಳ ತಲುಪಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Thu, 18 January 24

ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು
ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು