ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 43 ಪ್ರಕರಣ ವಾಪಸ್: ಸಚಿವ ಸಂಪುಟ ನಿರ್ಧಾರ

| Updated By: ಗಂಗಾಧರ​ ಬ. ಸಾಬೋಜಿ

Updated on: Oct 10, 2024 | 4:04 PM

ಇಂದಿನ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್​, ಸಂಪುಟ ಸಭೆಯಲ್ಲಿ 16 ವಿಷಯಗಳ ಬಗ್ಗೆ ಚರ್ಚೆ ನಡೆಸಿ ನಿರ್ಧರಿಸಿದ್ದೇವೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 43 ಪ್ರಕರಣ ವಾಪಸ್​ ಪಡೆಯಲು ಸಂಪುಟ ನಿರ್ಧಾರ ಮಾಡಿದೆ ಎಂದು ಹೇಳಿದ್ದಾರೆ.

ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 43 ಪ್ರಕರಣ ವಾಪಸ್: ಸಚಿವ ಸಂಪುಟ ನಿರ್ಧಾರ
ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 43 ಪ್ರಕರಣ ವಾಪಸ್: ಸಚಿವ ಸಂಪುಟ ನಿರ್ಧಾರ
Follow us on

ಬೆಂಗಳೂರು, ಅಕ್ಟೋಬರ್​ 10: ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಂಪುಟ ಸಭೆ ಮಾಡಲಾಗಿದೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 43 ಪ್ರಕರಣಗಳನ್ನು ಪ್ರಾಸಿಕ್ಯೂಷನ್​ನಿಂದ ಕೈಬಿಡಲು ಸಂಪುಟ ತೀರ್ಮಾನ ಮಾಡಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪುಟ ಸಭೆಯಲ್ಲಿ 16 ವಿಷಯಗಳ ಬಗ್ಗೆ ಚರ್ಚೆ ನಡೆಸಿ ನಿರ್ಧರಿಸಿದ್ದೇವೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯವರು ಪ್ರಸ್ತಾಪಿಸಿದ್ದ ಸೋಮೇಶ್ವರ ಶುಗರ್ಸ್ ಬದಲು ಮೃಣಾಲ್ ಶುಗರ್ಸ್ ಹೊಸ ಕಾರ್ಖಾನೆಗೆ ಧಾರವಾಡದ 19 ಗ್ರಾಮಗಳ ಕಬ್ಬು ಮೀಸಲು ಕ್ಷೇತ್ರ ಮಾಡಲು ನಿರ್ಣಯಿಸಲಾಗಿದೆ ಎಂದರು.

ಸಚಿವರ ರಹಸ್ಯ ಸಭೆಗಳಿಂದ ಗೊಂದಲ ಹಿನ್ನೆಲೆ ಗರಂ ಆದ ಸಿಎಂ ಸಿದ್ದರಾಮಯ್ಯ 

ಸಚಿವರ ರಹಸ್ಯ ಸಭೆಗಳಿಂದ ಗೊಂದಲ ಹಿನ್ನೆಲೆ ಸಂಪುಟ ಸಭೆಯ ಆರಂಭದಲ್ಲಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಪಕ್ಷದ ಕಾರ್ಯಕರ್ತರು, ಜನರಿಗೆ ಕೆಟ್ಟ ಸಂದೇಶ ರವಾನೆಯಾಗುತ್ತಿದೆ ಎಂದು ಕೋಪಗೊಂಡಿದ್ದಾರೆ.

ಇದನ್ನೂ ಓದಿ: ಕೋವಿಡ್​ ಹಗರಣ: ಕ್ಯಾಬಿನೆಟ್‌ ಸಬ್ ಕಮಿಟಿ ಜೊತೆ ಎಸ್‌ಐಟಿ ರಚನೆಗೆ ಸಂಪುಟ ಸಭೆ ತೀರ್ಮಾನ

ನಾವೆಲ್ಲರೂ ನಿಮ್ಮ ಪರವಾಗಿದ್ದೇವೆ ಎಂದು ಸಚಿವರು ದನಿಗೂಡಿಸಿದರು. ನಮ್ಮಿಂದ ಯಾವುದೇ ಗೊಂದಲ ಸೃಷ್ಟಿಯಾಗುವುದಿಲ್ಲವೆಂದು ಸಂಪುಟಸಭೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಸಚಿವರು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಸಾಕಷ್ಟು ಜಟಾಪಟಿ ನಡುವೆ ರಾಜ್ಯಪಾಲರ ಭೇಟಿಯಾದ ಸಿದ್ದರಾಮಯ್ಯ

ಇನ್ನು ಸಿಎಂ ಸಿದ್ದರಾಮಯ್ಯ ನೇತ್ರತ್ವದಲ್ಲಿ ಇಂದು ನಡೆದ ಕ್ಯಾಬಿನೆಟ್ ಮೀಟಿಂಗ್​ನಲ್ಲಿ ಹಲವು ಮಹತ್ವದ ವಿಚಾರಗಳು ಚರ್ಚೆ ಮಾಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್​ ಹಗರಣ ಆರೋಪ ವಿಚಾರವಾಗಿ ಕ್ಯಾಬಿನೆಟ್‌ ಸಬ್ ಕಮಿಟಿ ಜೊತೆ ಎಸ್‌ಐಟಿ ರಚನೆಗೆ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.