Covid Scam: ಕೊವಿಡ್​ ಹಗರಣದ ತನಿಖೆಗೆ SIT ರಚನೆ ಮಾಡಲು ಸಂಪುಟ ಅಸ್ತು

ಕರ್ನಾಟಕದಲ್ಲಿ ಕೋವಿಡ್ ಕಾಲಘಟ್ಟದಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆದಿದೆ ಎಂದು ನ್ಯಾ. ಮೈಕಲ್ ಕುನ್ಹಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿದ್ದ ಹಗರಣದ ತನಿಖೆಯನ್ನು ಈಗಿನ ಕಾಂಗ್ರೆಸ್ ಸರ್ಕಾರ ನಿವೃತ್ತ ನ್ಯಾಯಮೂರ್ತಿಯ ಮೂಲಕ ನಡೆಸಲು ತೀರ್ಮಾನಿಸಿತ್ತು. ಅದರ ವರದಿಯೀಗ ಸರ್ಕಾರದ ಕೈ ಸೇರಿದೆ. ಇದರ ಬೆನ್ನಲ್ಲೇ ಇದೀಗ ಕೋವಿಡ್ ಹಗರಣದ ತನಿಖೆಯನ್ನು ಎಸ್​ಐಟಿಗೆ ವಹಿಸಲು ಸಂಪುಟ ಅಸ್ತು ಎಂದಿದೆ.

Covid Scam: ಕೊವಿಡ್​ ಹಗರಣದ ತನಿಖೆಗೆ SIT ರಚನೆ ಮಾಡಲು ಸಂಪುಟ ಅಸ್ತು
Edited By:

Updated on: Nov 14, 2024 | 5:00 PM

ಬೆಂಗಳೂರು, (ನವೆಂಬರ್ 14): ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿದೆಯೆನ್ನಲಾದ ಸಾವಿರಾರು ಕೋಟಿ ರೂ. ಕೋವಿಡ್ – 19 ಹಗರಣದ ತನಿಖೆಗಾಗಿ ಈಗಿನ ಕಾಂಗ್ರೆಸ್ ಸರ್ಕಾರ ನೇಮಿಸಿದ್ದ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿ ಟಿವಿ9ಗೆ ಸಹ ಲಭ್ಯವಾಗಿದ್ದು, ಅದರಲ್ಲಿ 918 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಲಾಗಿದೆ. ಈ ಸಂಬಂಧ ಇಂದು (ನವೆಂಬರ್ 14) ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದು, ಅಂತಿಮವಾಗಿ ಕೊವಿಡ್​ ಹಗರಣದ ತನಿಖೆಗೆ SIT ರಚನೆ ಮಾಡಲು ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ಅಸ್ತು ಎಂದಿದೆ.

ಕೊವಿಡ್​ ಹಗರಣದ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗುತ್ತಿದ್ದಂತೆಯೇ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸಚಿವರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಎಸ್ಐಟಿ ಗೆ ವಹಿಸಲು ಕ್ಯಾಬಿನೆಟ್ ತೀರ್ಮಾನಿಸಿದೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಕೊರೊನಾ ಹಗರಣ: ಕುನ್ಹಾ ಸಮಿತಿ ವರದಿ ಆಧರಿಸಿ ಕ್ರಮಕ್ಕೆ ನಮ್ಮ ಸರ್ಕಾರ ಬದ್ಧ: ಸಿಎಂ

ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್​ಕೆ ಪಾಟೀಲ್, ಕೊವಿಡ್​ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ. ಕೊವಿಡ್ ಹಗರಣ ಸಂಬಂಧ ಹಲವು ದೂರುಗಳು ದಾಖಲಾಗಿದ್ದವು. ಕೊವಿಡ್​ ಹಗರಣದ ತನಿಖೆಗೆ ಎಸ್​ಐಟಿ ರಚನೆ ಮಾಡಲಾಗುವುದು. ವರದಿ ಆಧರಿಸಿ ಎಸ್ಐಟಿ ತನಿಖೆ ಆಗಲಿದೆ . ಅಗತ್ಯ ಬಿದ್ದರೆ FIR ದಾಖಲಾಗುತ್ತೆ, ಚಾರ್ಜ್​ಶೀಟ್ ಕೂಡ ಹಾಕ್ತೇವೆ. ಯಾರ ವಿರುದ್ಧ FIR ದಾಖಲಿಸಬೇಕೆಂದು SIT ನಿರ್ಧರಿಸುತ್ತದೆ ಎಂದು ಸ್ಪಷ್ಟಪಡಿಸಿದರು.

ಸಂಸದ ಡಾ.C.N.ಮಂಜುನಾಥ್​ಗೆ ಸಂಕಷ್ಟ?

ಕೊವಿಡ್​ ಹಗರಣದ ತನಿಖೆಗೆ ಸರ್ಕಾರದಿಂದ ಎಸ್​ಐಟಿ ರಚನೆ ಮಾಡಲು ತೀರ್ಮಾನಿಸಿದೆ. ಹೀಗಾಗಿ ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರಾಗಿದ್ದ ಶ್ರೀರಾಮುಲು ಸೇರಿದಂತೆ ಇತರರಿಗೆ ಸಂಕಷ್ಟ ಎದುರಾಗಲಿದೆ. ಅದರಲ್ಲೂ ಪ್ರಮುಖವಾಗಿ ಸಂಸದ ಡಾ.ಸಿ.ಎನ್​.ಮಂಜುನಾಥ್​ಗೆ ಈ ಹಗರಣ ಕಂಟಕ ತಂದಿಡಬಹುದು. ಯಾಕಂದ್ರೆ ಮಂಜುನಾಥ್ ಅವರು ಕೋವಿಡ್ ಸಂದರ್ಭದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಮುಖ್ಯಸ್ಥರಾಗಿದ್ದರು. ಟಾಸ್ಕ್ ಫೋರ್ಸ್ ನಿರ್ಣಯದಂತೆ ಕೆಲ ಉಪಕರಣಗಳ ಖರೀದಿ ಆಗಿದೆ. ಈ ಹಿನ್ನೆಲೆ ಟಾಸ್ಕ್ ಫೋರ್ಸ್ ಬಗ್ಗೆಯೂ ಕುನ್ಹಾ ವರದಿಯಲ್ಲಿ ಪ್ರಸ್ತಾಪವಾಗಿದೆ. ಇದರಿಂದ ಮಂಜುನಾಥ್ ಅವರ ಬುಡಕ್ಕೂ ಹಗರಣ ಬಂದರೂ ಅಚ್ಚರಿ ಪಡಬೇಕಿಲ್ಲ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಕೊರೊನಾ ಹಗರಣದ ಮತ್ತಷ್ಟು ಸ್ಫೋಟಕ ಅಂಶ ಬೆಳಕಿಗೆ: ಬಿಎಸ್​ವೈ, ಶ್ರೀರಾಮುಲುಗೆ ಕುತ್ತು!

ಮಧ್ಯಂತರ ವರದಿಯಲ್ಲಿರೋದೇನು?

ಬಿಎಸ್​ವೈ, ರಾಮುಲು ಕಾರ್ಯವೈಖರಿಗೆ ಸಮಿತಿ ಅಕ್ಷೇಪ ವ್ಯಕ್ತಪಡಿಸಿದೆ. ಖಾಸಗಿ ಲ್ಯಾಬ್​ಗಳಿಗೆ 6.93ಕೋಟಿ ಹಣ ಸಂದಾಯವಾಗಿದೆ. ಆದ್ರೆ 14 ಲ್ಯಾಬ್​ಗಳು ICMRನಿಂದ ಮಾನ್ಯತೆ ಪಡೆದಿಲ್ಲ. ಈ ICMR ಲ್ಯಾಬ್​ಗಳು ಅಧಿಕೃತ ಅಲ್ಲ ಎಂದು ಜಾನ್ ಮೈಕೆಲ್ ಡಿ ಕುನ್ಹಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. RTPCR ಟೆಸ್ಟ್​ಗೆ ಲ್ಯಾಬ್​ಗಳ ಸಾಮರ್ಥ್ಯ, ಕ್ಷಮತೆ ಗುರುತಿಸಿಲ್ಲ. ಸಾಮರ್ಥ್ಯ, ಕ್ಷಮತೆ ಪರಿಶೀಲಿಸದೆ ಲ್ಯಾಬ್​ಗಳಿಗೆ ಅನುಮತಿ ನೀಡಲಾಗಿದೆ. 6 ಖಾಸಗಿ ಲ್ಯಾಬ್ ಗಳಿಗೆ ಒಪ್ಪಂದವಿಲ್ಲದೆ ಹಣ ಸಂದಾಯ ಮಾಡಲಾಗಿದೆ. ಅನಧಿಕೃತವಾಗಿ ಲ್ಯಾಬ್​ಗಳಿಗೆ ಹಣ ಸಂದಾಯದ ಬಗ್ಗೆ ಮಧ್ಯಂತರ ವರದಿ ನೀಡಲಾಗಿದೆ. 8 ಲ್ಯಾಬ್​ಗಳಿಗೆ ಅನುಮತಿ ಪಡೆಯದೆ 4.28 ಕೋಟಿ ಹಣ ನೀಡಲಾಗಿದೆ. ಕಾರ್ಯಾದೇಶವಿಲ್ಲದೆ ಖಾಸಗಿ ಲ್ಯಾಬ್​ಗಳು ಬಿಲ್ ನೀಡಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:52 pm, Thu, 14 November 24

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Loading...
Unable to load recommendations.
Follow Us