ಕೇಂದ್ರದ ವಿರುದ್ಧ ಮತ್ತೆ ಸಿಡಿದೆದ್ದ ರಾಜ್ಯ ಸರ್ಕಾರ, ವಿಬಿ ಜಿ ರಾಮ್ ಜೀ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಲು ತೀರ್ಮಾನ

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು (ಮನ್​ರೇಗಾ ) ತಿದ್ದುಪಡಿ ಮಾಡಿ ವಿಬಿ ಜಿ ರಾಮ್ ಜೀ ಎಂದು ಬದಲಿಸಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ರಾಜ್ಯ ಸಿದ್ದರಾಮಯ್ಯನವರ ಸರ್ಕಾರ ಕೋರ್ಟ್ ಮೆಟ್ಟಿಲೇರಲು ತೀರ್ಮಾನಿಸಿದೆ. ಈ ಸಂಬಂಧ ಇಂದಿನ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದು, ಈ ಬಗ್ಗೆ ಕಾನೂನು ಸಚಿವ ಎಚ್​​ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

ಕೇಂದ್ರದ ವಿರುದ್ಧ ಮತ್ತೆ ಸಿಡಿದೆದ್ದ ರಾಜ್ಯ ಸರ್ಕಾರ, ವಿಬಿ ಜಿ ರಾಮ್ ಜೀ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಲು ತೀರ್ಮಾನ
Mgnrega Vs Vb G Ram G
Edited By:

Updated on: May 07, 2026 | 9:58 PM

ಬೆಂಗಳೂರು, (ಮೇ 07): ಮನ್​ರೇಗಾ (MGNREGA) ಎನ್ನುವುದನ್ನು ವಿಬಿ ಜಿ ರಾಮ್ ಜೀ (VB-G RAM G) ಎಂದು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕೋರ್ಟ್ ಮೊರೆ ಹೋಗಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಸಂಬಂಧ ಇಂದು (ಮೇ 07) ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಚರ್ಚಿಸಿದ್ದು, ಮನ್​ರೇಗಾ ಹೆಸರು ಬದಲಾವಣೆ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಲು ತೀರ್ಮಾನಿಸಿದೆ. ಈ ಬಗ್ಗೆ ಕಾನೂನು ಸಚಿವ ಎಚ್​​ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

  • ಮನ್​ರೇಗಾ ಹೆಸರು ಬದಲಾವಣೆ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ
  • ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
  • ವಿಬಿ ಜಿ ರಾಮ್ ಜೀ ಎಂದು ಬದಲಿಸಿದ್ದ ಕೇಂದ್ರ ಸರ್ಕಾರ

ಇದನ್ನೂ ಓದಿ: G-RAM-G: ಜಿ ರಾಮ್‌ ಜಿ ಕಾಯ್ದೆ- ಮತ್ತಷ್ಟು ಉದ್ಯೋಗ, ಮತ್ತಷ್ಟು ಭದ್ರತೆ

ಸಚಿವ ಸಂಪುಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್​​ಕೆ ಪಾಟೀಲ್, ಮನ್​ರೇಗಾವನ್ನು ವಿಬಿ ಜಿ ರಾಮ್ ಜೀ ಎಂದು ಬದಲಿಸಿದ ಕೇಂದ್ರ ಸರ್ಕಾರ ನಡೆಯನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಲು ಸಂಪುಟದಲ್ಲಿ ನಿರ್ಧರಿಸಿದ್ದೇವೆ. ಈ ಬಗ್ಗೆ ಸಂಪುಟ ಸಭೆಯಲ್ಲಿ 15 ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಮನ್​ರೇಗಾ ಸ್ಥಗಿತ ಮಾಡಿದ್ದರಿಂದ ಬಡವರಿಗೆ ಅನಾನುಕೂಲವಾಗಲಿದೆ. ಹೀಗಾಗಿ ಮನ್​ರೇಗಾ ಮರು ಸ್ಥಾಪನೆಗೆ ನಾವು ಚಳವಳಿ ಮಾಡಿದ್ದೆವು. ಮೇ ತಿಂಗಳಾದರೂ ವಿಬಿ ಜಿ ರಾಮ್​​ಜೀ ನೋಟಿಫೈ ಆಗಿಲ್ಲ. ಇದುವರೆಗೆ ವಿಬಿ ಜಿ ರಾಮ್​​ಜೀ ದೇಶದಲ್ಲಿ ಇನ್ನೂ ಬಂದಿಲ್ಲ. ಮನ್​ರೇಗಾ ಬಾಕಿ ಕೆಲಸ ಮುಂದುವರಿಸಬಹುದೆಂದು ಆದೇಶಿಸಿದೆ. ಆದರೆ ಕೇಂದ್ರ ಸರ್ಕಾರ ಯಾವುದೇ ಅನುದಾನ ನೀಡಿಲ್ಲ ಎಂದು ಹೇಳಿದರು.

ಈ ಬಾರಿ ಮಳೆ ಕೊರತೆಯಿಂದ ನೀರಿನ ಸಂಕಷ್ಟ ಅಂತಿದ್ದಾರೆ. ಆದರೂ ಬಡವರ ಕೆಲಸದ ಬಗ್ಗೆ ಕೇಂದ್ರ ಚಿಂತನೆ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಣಯದ ಮೂಲಕ ಒತ್ತಡ ಹೇರಿದ್ದೇವೆ. ಮುಖ್ಯಮಂತ್ರಿ ಕೂಡ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದರು.

ರಾಜ್ಯ ಶಿಕ್ಷಣ ನೀತಿ ಆಯೋಗದ ಶಿಫಾರಸು ಮಂಡನೆ

ಸಂಪುಟ ಸಭೆಯಲ್ಲಿ ಆಯೋಗದ ಶಿಫಾರಸುಗಳ ಬಗ್ಗೆ ಚರ್ಚೆ ಆಗಿದ್ದು, ಆಯೋಗದ ವರದಿಯ ಅನುಷ್ಠಾನಕ್ಕೆ ಸಂಪುಟ ಉಪ ಸಮಿತಿ ರಚಿಸಲು ಸಂಪುಟದಲ್ಲಿ ನಿರ್ಧಾರವಾಗಿದೆ. ಈ ಸಂಪುಟ ಉಪ ಸಮಿತಿಯು, ಆಯೋಗದ ಶಿಫಾರಸು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us