AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anna Bhagya Scheme; ಐದು ಕೆಜಿ ಅಕ್ಕಿ ಬದಲಿಗೆ ಹಣ; ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ

ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್​ದಾರರಿಗೆ ಮಾಸಿಕ ತಲಾ 170 ರೂ. ನೀಡುತ್ತೇವೆ. ಜುಲೈ ತಿಂಗಳಿಂದಲೇ ಪಡಿತರದಾರರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಮುನಿಯಪ್ಪ ತಿಳಿಸಿದರು.

Anna Bhagya Scheme; ಐದು ಕೆಜಿ ಅಕ್ಕಿ ಬದಲಿಗೆ ಹಣ; ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Jun 28, 2023 | 3:55 PM

Share

ಬೆಂಗಳೂರು: ಕಾಂಗ್ರೆಸ್ ಚುನಾವಣಾಪೂರ್ವ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ಅಕ್ಕಿ ವಿತರಣೆಗೆ ತೊಡಕಾಗಿರುವುದರಿಂದ ಐದು ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಕರ್ನಾಟಕ ಸಚಿವ ಸಂಪುಟ (Karnataka Cabinet) ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಕುರಿತು ಆಹಾರ ಸಚಿವ ಮುನಿಯಪ್ಪ ಮಾಹಿತಿ ನೀಡಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರಾದ ಎಚ್​​ಕೆ ಪಾಟೀಲ್ ಹಾಗೂ ಕೆಎಚ್ ಮುನಿಯಪ್ಪ ಸಂಪುಟ ಸಭೆಯ ನಿರ್ಧಾರಗಳನ್ನು ಪ್ರಕಟಿಸಿದರು. ಇದರೊಂದಿಗೆ, ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್​ ಕಾರ್ಡ್​​ದಾರರಿಗೆ 5 ಕೆಜಿ ಅಕ್ಕಿ ಹಾಗೂ ಇನ್ನುಳಿದ 5ಕೆಜಿ ಅಕ್ಕಿಯ ಬದಲು ಹಣ ದೊರೆಯಲಿದೆ.

ಅಕ್ಕಿ ಬದಲು ಜನರಿಗೆ ಹಣ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ. 5 ಕೆಜಿ ಅಕ್ಕಿ ಬದಲು ಜನರಿಗೆ ಹಣ ನೀಡಲು ನಿರ್ಧರಿಸಲಾಗಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್​ದಾರರಿಗೆ ಮಾಸಿಕ ತಲಾ 170 ರೂ. ನೀಡುತ್ತೇವೆ. ಜುಲೈ ತಿಂಗಳಿಂದಲೇ ಪಡಿತರದಾರರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಮುನಿಯಪ್ಪ ತಿಳಿಸಿದರು.

ಅಕ್ಕಿ ಸಿಗವ ವರೆಗೆ ಮಾತ್ರ ಹಣ

ಅಕ್ಕಿ ಸಿಗುವವರೆಗೆ  ಮಾತ್ರ ಪರ್ಯಾಯ ವ್ಯವಸ್ಥೆಯಾಗಿ ಹಣ ನೀಡುತ್ತಿದ್ದೇವೆ. ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದು ಮುನಿಯಪ್ಪ ತಿಳಿಸಿದ್ದಾರೆ. ಈ ಮಧ್ಯೆ, ಒಟ್ಟು 15 ವಿಷಯಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ನಿರ್ಣಯ ಕೈಗೊಂಡಿದ್ದೇವೆ. ಈ ಪೈಕಿ ನಾಲ್ಕು ವಿಷಯಗಳು ಲೋಕಾಯುಕ್ತಕ್ಕೆ ಸಂಬಂಧಪಟ್ಟಿದ್ದು. ಕರ್ನಾಟಕ ಲೋಕಾಯುಕ್ತದ ಉಪನಿರ್ದೇಶಕರು, ಲೆಕ್ಕಪತ್ರ ಅಪರ ನಿಬಂಧಕರು ಗುತ್ತಿಗೆ ಮೇಲೆ ನೇಮಕ ಆಗಿದ್ದರು. ಇವರ ಸೇವೆಯನ್ನು ಒಂದು ವರ್ಷ ಗುತ್ತಿಗೆ ಆಧಾರದ ಮೇಲೆ ಮುಂದುವರಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಹೆಚ್​ಕೆ ಪಾಟೀಕ್ ತಿಳಿಸಿದರು.

ಇದನ್ನೂ ಓದಿ: ಕನ್ನಡಪರ ಸಂಘಟನೆ, ರೈತರು, ಹೋರಾಟಗಾರರ ಮೇಲಿನ ಕೇಸ್ ವಾಪಸ್; ಕರ್ನಾಟಕ ಸಚಿವ ಸಂಪುಟ ನಿರ್ಧಾರ

ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗಾಗಿ ಅಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ಕೇಂದ್ರ ಆಹಾರ ನಿಗಮದ ಮೊರೆ ಹೋಗಿತ್ತು. ಆದರೆ, ಅಲ್ಲಿಂದ ಹೆಚ್ಚುವರಿ ಅಕ್ಕಿ ಪೂರೈಕೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಸಚಿವ ಮುನಿಯಪ್ಪ ಅವರು ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೂ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿತ್ತು. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವಣ ಜಟಾಪಟಿಗೂ ಕಾರಣವಾಗಿತ್ತು. ರಾಜ್ಯದ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಣ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿತ್ತು.

ಬಡವರ ಕಾರ್ಯಕ್ರಮಕ್ಕೆ ಕಲ್ಲುಹಾಕುವ ಕೆಲಸ ಮಾಡಿದ್ದಾರೆ; ಸಿದ್ದರಾಮಯ್ಯ

ಬಿಜೆಪಿಯವರು, ಕೇಂದ್ರ ಸರ್ಕಾರದವರು ಬಡವರ ಕಾರ್ಯಕ್ರಮಕ್ಕೆ ಕಲ್ಲುಹಾಕುವ ಕೆಲಸ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಕೊಡುತ್ತೇವೆ ಎಂದರೂ ಕೇಂದ್ರ ಅಕ್ಕಿ ಪೂರೈಸಲು ಕೇಂದ್ರದವರು ಸಿದ್ಧರಿಲ್ಲ. ಬಡವರ ಕಾರ್ಯಕ್ರಮಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಆಹಾರ ಸಚಿವ ಮುನಿಯಪ್ಪ ಗೋಯಲ್​ರನ್ನು ಭೇಟಿ ಮಾಡಿದ್ದರು. ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅಕ್ಕಿ ಇಲ್ಲ ಎಂದಿದ್ದಾರೆ. ನಾನೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮನವಿ ಮಾಡಿದ್ದೆ. ಆಹಾರ ಸಚಿವ ಪಿಯೂಷ್ ಗೋಯಲ್​ಗೆ ಹೇಳುತ್ತೇನೆ ಎಂದಿದ್ದರು. ನಂತರ ಗೋಯಲ್ ಅವರನ್ನು ಮುನಿಯಪ್ಪ ಭೇಟಿಯಾಗಿ ಮನವಿ ಮಾಡಿದ್ದರು. ರಾಜ್ಯಕ್ಕೆ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದು ಗೋಯಲ್​ ಹೇಳಿದ್ದರು. ಜುಲೈ 1ರಿಂದ 10 ಕೆಜಿ ಆಹಾರಧಾನ್ಯ ನೀಡುವುದಾಗಿ ಭರವಸೆ ನೀಡಿದ್ದೆವು. ಜನರಿಗೆ ನಾವು ನೀಡಿದ ಭರವಸೆಯಂತೆ ಹಣ ನೀಡಲು ನಿರ್ಧರಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಫಲ ಕೊಡದ ದೆಹಲಿ ಭೇಟಿ: ಅಕ್ಕಿ ಕೊಡಲು ಕೇಂದ್ರ ಸಚಿವ ಪಿಯೂಷ್ ಗೋಯಲ್ ನಿರಾಕರಣೆ, ಮುನಿಯಪ್ಪ ಅಸಮಾಧಾನ

ಸಂಪುಟ ಸಭೆಯ ಇನ್ನಷ್ಟು ನಿರ್ಧಾರಗಳು

  • ವಿವಿಧ ನೀರಾವರಿ ನ್ಯಾಯಾಧಿಕರಣ ಕಾನೂನು ವಿಷಯಗಳ ಅನುಷ್ಠಾನ
  • ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಪುಟ ಉಪಸಮಿತಿ ರಚನೆ
  • ಆನೇಕಲ್, ಚಂದಾಪುರ ಒಳಚರಂಡಿ ಕಾಮಗಾರಿಗೆ 106 ಕೋಟಿ ರೂ.
  • ಕನ್ನಡಪರ ಸಂಘಟನೆ, ರೈತರ ಮೇಲಿನ ಕೇಸ್​ ವಾಪಸ್​ಗೆ ನಿರ್ಧಾರ
  • ಕೇಸ್​ ಹಿಂಪಡೆಯಲು ಸಂಪುಟ ಉಪಸಮಿತಿ ರಚನೆ ಮಾಡಲು ಅಸ್ತು
  • ಬೃಹತ್ ಬಂಡವಾಳ ಹೂಡಿಕೆಗೆ ಅಧಿಕಾರಯುತ ಮಂಜೂರು ಸಮಿತಿ ರಚನೆಗೆ ಅನುಮೋದನೆ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Wed, 28 June 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ