AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡವರಿಗೆ 15 ಲಕ್ಷ ಉಚಿತ ಸೈಟ್: ಮಹಿಳೆಯರು, ರೈತರು, ವಿದ್ಯಾರ್ಥಿಗಳಿಗೆ ಸರ್ಕಾರ ಬಂಪರ್ ಕೊಡುಗೆ!

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ರೈತರು, ಮಹಿಳೆಯರು, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಬಡವರಿಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ಉಚಿತ ನಿವೇಶನ, ಸ್ಮಾರ್ಟ್‌ಕಾರ್ಡ್, ವಿದ್ಯಾರ್ಥಿ ಚುನಾವಣೆ ಸೇರಿದಂತೆ ಹಲವು ನಿರ್ಣಯ ಕೈಗೊಳ್ಳಲಾಗಿದೆ. ವಿವರ ಇಲ್ಲಿದೆ.

ಬಡವರಿಗೆ 15 ಲಕ್ಷ ಉಚಿತ ಸೈಟ್: ಮಹಿಳೆಯರು, ರೈತರು, ವಿದ್ಯಾರ್ಥಿಗಳಿಗೆ ಸರ್ಕಾರ ಬಂಪರ್ ಕೊಡುಗೆ!
ಸಿಎಂ ಡಿಕೆ ಶಿವಕುಮಾರ್Image Credit source: tv9
ಪ್ರಸನ್ನ ಗಾಂವ್ಕರ್​
| Edited By: |

Updated on:Sep 10, 2026 | 9:47 AM

Share

ಮುಖ್ಯಾಂಶಗಳು

  • ರಾಜ್ಯಾದ್ಯಂತ ಬಡವರಿಗೆ 15 ಲಕ್ಷ ಉಚಿತ ಸೈಟ್
  • ಕಾರ್ಮಿಕರಿಗೆ 10 ಸಾವಿರ ಮನೆ ಕಟ್ಟಿಕೊಡಲು ಪ್ಲ್ಯಾನ್
  • ಕಾಲೇಜು ಹಾಗೂ ವಿವಿಗಳಲ್ಲಿ ವಿದ್ಯಾರ್ಥಿ ಚುನಾವಣೆ

ಬೆಂಗಳೂರು, ಸೆಪ್ಟೆಂಬರ್ 10: ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಸೆಪ್ಟೆಂಬರ್ 10ಕ್ಕೆ 100 ದಿನಗಳನ್ನ ಪೂರೈಸಿದೆ. ಸೆಂಚುರಿ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರ ಬುಧವಾರ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ. ಮಹಿಳೆಯರು, ರೈತರು, ವಿದ್ಯಾರ್ಥಿಗಳಿಗೆ ಸರ್ಕಾರ ಬಂಪರ್​ ಕೊಡುಗೆಗಳನ್ನು ಘೋಷಿಸಿದೆ

‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ

ಬರದ ಘಾತದಿಂದ ಕಂಗೆಟ್ಟಿರುವ ರೈತರಿಗೆ ಸರ್ಕಾರ ಶುಭ ಸುದ್ದಿ ಕೊಟ್ಟಿದೆ. ಜಮೀನು ಉಳುಮೆಗೆ ಈಗ ಎತ್ತುಗಳನ್ನು ಬಳಸುವುದು ಕಡಿಮೆಯಾಗಿದೆ. ಕೆಲಸಕ್ಕೆ ಜನ ಸಿಗುತ್ತಿಲ್ಲ. ಹೀಗಾಗಿ ಬಡ ರೈತರಿಗೆ ಅನುಕೂಲ ಆಗಬೇಕೆಂಬ ನಿಟ್ಟಿನಲ್ಲಿ ಮುಖ್ಯಮಂತ್ರಿ ನೇಗಿಲ ಯೋಗಿ ಯೋಜನೆ ಜಾರಿಗೆ ಸಚಿವ ಸಂಪುಟ ಅಸ್ತು ಎಂದಿದೆ. ರೈತರಿಂದ ಟ್ರ್ಯಾಕ್ಟರ್​ಗಳನ್ನು ಸರ್ಕಾರವೇ ಬಾಡಿಗೆಗೆ ಪಡೆದು ಬಡ ರೈತರ ಜಮೀನು ಉಳುಮೆ ಮಾಡಿಸಲು ನಿರ್ಧರಿಸಲಾಗಿದೆ. 3 ಎಕರೆಗಿಂತ ಕಡಿಮೆ ಜಮೀನಿರುವ ಅನ್ನದಾತರಿಗೆ ಅನುಕೂಲ ಆಗಲಿದೆ.

ರಾಜ್ಯಾದ್ಯಂತ ಬಡವರಿಗೆ 15 ಲಕ್ಷ ಉಚಿತ ಸೈಟ್

ರಾಜ್ಯಾದ್ಯಂತ ಬಡವರಿಗೆ 15 ಲಕ್ಷ ಉಚಿತ ನಿವೇಶನ ಹಂಚಿಕೆ ಗುರಿ ಹೊಂದಲಾಗಿದೆ. ಪ್ರತಿ ಜಿಲ್ಲೆಯಲ್ಲಿ 50 ಸಾವಿರ ಉಚಿತ ನಿವೇಶನ ಹಂಚೋದಕ್ಕೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಮೊದಲ ಹಂತದಲ್ಲಿ 5 ಲಕ್ಷ ಸೈಟುಗಳನ್ನು 30 ಜಿಲ್ಲೆಗೆ ಹಂಚಲಿದ್ದಾರೆ. ಎಲ್ಲಾ ಡಿಸಿಗಳಿಗೆ ಸ್ಥಳ ಗುರುತಿಸಲು ಸೂಚಿಸಲಾಗಿದೆ. ಎಸ್​ಸಿ ಎಸ್​​ಟಿ ಓಬಿಸಿ ವರ್ಗಕ್ಕೆ ಮೊದಲ ಪ್ರಾತಿನಿಧ್ಯ ನೀಡಲಾಗುತ್ತದೆ.

ಮಹಿಳೆಯರ ಫ್ರೀ ಬಸ್ ಸಂಚಾರಕ್ಕೆ ಸ್ಮಾರ್ಟ್ ಕಾರ್ಡ್

ಸರ್ಕಾರದ ಶಕ್ತಿಯೋಜನೆಯಲ್ಲಿ ನಿತ್ಯ ಲಕ್ಷಾಂತರ ಮಹಿಳೆಯರು ಬಸ್​ನಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಆದರೆ ಈಗ, ಹೊಸ ಸ್ಮಾರ್ಟ್ ಕಾರ್ಡ್ ನೀಡೋದಕ್ಕೆ ಸಚಿವ ಸಂಪುಟ ಸಭೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್​ಕಾರ್ಡ್ ತೋರಿಸಿ ಮಹಿಳೆಯರು ಪ್ರಯಾಣಿಸಬಹುದಾಗಿದೆ.

ಕಾಲೇಜು ಹಾಗೂ ವಿವಿಗಳಲ್ಲಿ ವಿದ್ಯಾರ್ಥಿ ಚುನಾವಣೆ

ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಸರ್ಕಾರ ಮುಂದಾಗಿದೆ. ಹೀಗಾಗಿ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳಚುನಾವಣೆ ನಡೆಸಲು ಸಚಿವ ಸಂಪುಟ ಅಸ್ತು ಎಂದಿದೆ.

ಕಾರ್ಮಿಕರಿಗೆ 10 ಸಾವಿರ ಮನೆ ಕಟ್ಟಿಕೊಡಲು ಪ್ಲ್ಯಾನ್

ಸರ್ಕಾರ ಕಾರ್ಮಿಕರಿಗೂ ಬಂಪರ್ ನೀಡಿದೆ. ಕೈಗಾರಿಕೆಗಳು ತಮ್ಮ ನೌಕರರು ಸಮೀಪದಲ್ಲೇ ವಾಸಿಸಲು ಮನೆಗಳನ್ನು ಕಟ್ಟಿಕೊಡಲು ಶ್ರಮಿಕ ನಿವಾಸ ಯೋಜನೆ ಜಾರಿಗೆ ತೀರ್ಮಾನಿಸಲಾಗಿದೆ. ಉದ್ದಿಮೆಗಳು ತಮ್ಮ ನೌಕರರಿಗೆ ಮನೆ ಕಟ್ಟಿಕೊಡಲು ಕೈಗಾರಿಕೆಗಳಿಗೆ ಬಂಡವಾಳ ಸಹಾಯಧನ ನೀಡಲು ನಿರ್ಧರಿಸಲಾಗಿದೆ.

10 ಜಿಲ್ಲೆಗಳಲ್ಲಿ ಉದ್ಯೋಗ ನಿಧಿ ಯೋಜನೆ

10 ಜಿಲ್ಲೆಗಳಲ್ಲಿ ಉದ್ಯೋಗ ನಿಧಿ ಯೋಜನೆ ಜಾರಿಗೆ ನಿರ್ಣಯ ಕೈಕೊಳ್ಳಲಾಗಿದೆ. ಜಿಲ್ಲೆಗಳಲ್ಲಿ ಹೊಸದಾಗಿ ಉದ್ಯೋಗ ಸೃಷ್ಟಿಸೊ ಕಂಪನಿಗಳ ಮಾಲೀಕರಿಗೆ, ಪ್ರತಿ ಉದ್ಯೋಗಿಯ ಮೇಲೆ ಮಾಸಿಕ 2,500 ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ.

ಇದನ್ನೂ ಓದಿ: ನೇಗಿಲ ಯೋಗಿ, ತೇಗ ಸಿರಿ: ರೈತರಿಗಾಗಿ ಹಲವು ಯೋಜನೆ ಜಾರಿಗೆ ಕ್ಯಾಬಿನೆಟ್ ಗ್ರೀನ್​​ ಸಿಗ್ನಲ್

ರೈತರಿಗೆ ತೇಗದ ಸಸಿ ನೀಡುವ ತೇಗ ಸಿರಿ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಸಿಎಂ ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಇಂದಿಗೆ 100 ದಿನ. ಹೀಗಾಗಿ ಸಂಪುಟ ಸಭೆಯಲ್ಲಿ ರಾಜ್ಯ ಜನರಿಗೆ ಕೊಡುಗೆಗಳ ಮಹಾಪೂರವನ್ನೇ ಹರಿಸಲಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:44 am, Thu, 10 September 26

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ