AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರ ಮುನಿಸು ತಣಿಸಲು ಕಾಂಗ್ರೆಸ್ ಸರ್ಕಾರ ಮತ್ತೊಂದು ಹೆಜ್ಜೆ: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 600 ಕೋಟಿ ರೂ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 600 ಕೋಟಿ ರೂ., ಬಿಡದಿ ಟೌನ್‌ಶಿಪ್ ಯೋಜನೆಗೆ ಅನುಮೋದನೆ ಹಾಗೂ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ವಿತರಣೆ ಸೇರಿದಂತೆ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಹೈಸ್ಪೀಡ್ ರೈಲು ನಿಲ್ದಾಣಗಳು ಮತ್ತು ಪ್ರಾದೇಶಿಕ ವಿಮಾನಯಾನ ಸೇವೆಗಳಿಗೆ ಪ್ರೋತ್ಸಾಹಧನ ನೀಡಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಮುಸ್ಲಿಮರ ಮುನಿಸು ತಣಿಸಲು ಕಾಂಗ್ರೆಸ್ ಸರ್ಕಾರ ಮತ್ತೊಂದು ಹೆಜ್ಜೆ: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 600 ಕೋಟಿ ರೂ.
ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಹೆಚ್​ಕೆ ಪಾಟೀಲ್Image Credit source: tv9
ಹರೀಶ್ ಜಿ.ಆರ್​.
| Edited By: |

Updated on: May 01, 2026 | 7:23 AM

Share

ಬೆಂಗಳೂರು, ಮೇ 1: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್ ಗೊಂದಲದಿಂದ ಮುಸ್ಲಿಂ (Muslims) ಸಮುದಾಯ ಕಾಂಗ್ರೆಸ್ (Congress) ವಿರುದ್ಧ ತೀವ್ರ ಅಸಮಾಧಾನ ಹೊಂದಿತ್ತು. ಇದೀಗ ಅಲ್ಪಸಂಖ್ಯಾತರ ಮುನಿಸು ತಣಿಸಲು ಮುಂದಾಗಿರುವ ಸರ್ಕಾರ, 2026-27 ಮತ್ತು 2027-28ನೇ ಸಾಲಿನಲ್ಲಿ ಅವರ ಕಾಲೋನಿಗಳ ಅಭಿವೃದ್ಧಿಗೆ 600 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಸಚಿವ ಸಂಪುಟ (Karnataka Cabinet) ಸಭೆಯಲ್ಲಿ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತು ಕಾನೂನು ಸಚಿವ ಹೆಚ್​​ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

1 ರಿಂದ 12ನೇ ತರಗತಿಯವರೆಗೆ ಓದುತ್ತಿರುವ ಕಾರ್ಮಿಕರ ಮಕ್ಕಳಿಗೆ 115.84 ಕೋಟಿ ರೂ. ವೆಚ್ಚದಲ್ಲಿ 8,600 ಮೌಲ್ಯದ ಲೇಖನ ಸಾಮಗ್ರಿ, ಪುಸ್ತಕಗಳನ್ನೊಳಗೊಂಡ ಶಾಲಾ ಕಿಟ್ ನೀಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಆರೋಗ್ಯ ಕ್ಷೇತ್ರಕ್ಕೆ ಬಲ ತುಂಬಲು ಉಚಿತ ರೋಗ ಪತ್ತೆಗಾಗಿ 6 ಎಂಆರ್‌ಐ ಸ್ಕ್ಯಾನಿಂಗ್ ಯಂತ್ರಗಳನ್ನು ಖರೀದಿಸಲು ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.

ರೈತರ ವಿರೋಧದ ನಡುವೆ ಬಿಡದಿ ಟೌನ್​​ಶಿಪ್​​ಗೆ ಅನುಮೋದನೆ

ಬಹು ದಿನಗಳಿಂದ ಬಾಕಿ ಇದ್ದ ಬಿಡದಿ ಟೌನ್‌ಶಿಪ್ ಯೋಜನೆಗೆ ಮರುಜೀವ ನೀಡಲಾಗಿದೆ. ಸುಮಾರು 7,481 ಎಕರೆ ಪ್ರದೇಶದಲ್ಲಿ ಈ ಯೋಜನೆ ನಿರ್ಮಾಣವಾಗಲಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದಲೇ ಈ ಬೃಹತ್ ಉಪನಗರ ತಲೆ ಎತ್ತಲಿದೆ. ಈ ಹಿಂದೆ ರೈತರ ವಿರೋಧದಿಂದ ವಿಳಂಬವಾಗಿದ್ದ ಯೋಜನೆಗೆ ಈಗ ಹೊಸ ರೂಪ ನೀಡಲಾಗಿದ್ದು, ಭೂಮಿ ಕಳೆದುಕೊಳ್ಳುವ ರೈತರಿಗೆ ಪ್ರತಿ ಎಕರೆಗೆ 9600 ಚದರ ಅಡಿ ಅಭಿವೃದ್ಧಿಪಡಿಸಿದ ಭೂಮಿ ನೀಡಲು ಸರ್ಕಾರ ನಿರ್ಧರಿಸಿದೆ.

  • ಆರೋಗ್ಯ ಮತ್ತು ಮೂಲಸೌಕರ್ಯ: ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ರೋಗ ಪತ್ತೆಗಾಗಿ 6 ಹೊಸ ಎಂಆರ್‌ಐ (MRI) ಸ್ಕ್ಯಾನಿಂಗ್ ಯಂತ್ರಗಳನ್ನು ಖರೀದಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.
  • ಕಲಬುರ್ಗಿ-ಬೆಂಗಳೂರು ಹಾಗೂ ಬೀದರ್-ಬೆಂಗಳೂರು ವಿಮಾನಯಾನ ಸೇವೆಗಳ ನಿರ್ವಹಣೆಗಾಗಿ ವರ್ಷಕ್ಕೆ ₹28.7 ಕೋಟಿ ಪ್ರೋತ್ಸಾಹಧನ ನೀಡಲು ಅನುಮೋದನೆ.
  • ವಾಯವ್ಯ ಸಾರಿಗೆ ಸಂಸ್ಥೆಗೆ 80 ಹೊಸ ಬಸ್‌ಗಳ ಖರೀದಿಗಾಗಿ ₹32 ಕೋಟಿ ಬಿಡುಗಡೆ. ಬೆಂಗಳೂರು-ಹೈದ್ರಾಬಾದ್ ಹೈಸ್ಪೀಡ್ ರೈಲು ಯೋಜನೆಯಡಿ ಕರ್ನಾಟಕದಲ್ಲಿ ಬರಲಿರುವ 15 ನಿಲ್ದಾಣಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
  • ರೈತರಿಂದ ಬಿಳಿಜೋಳ ಖರೀದಿಸಲು ಅಗತ್ಯವಿರುವ ಹೆಚ್ಚುವರಿ ಗೋಣಿ ಚೀಲಗಳ ಖರೀದಿಗಾಗಿ ₹21.35 ಕೋಟಿ ವೆಚ್ಚ ಮಾಡಲು ಒಪ್ಪಿಗೆ ನೀಡಲಾಗಿದೆ.
  • ತಿರುಮಲ ಕರ್ನಾಟಕ ರಾಜ್ಯ ಛತ್ರ: ಆಂಧ್ರಪ್ರದೇಶದ ತಿರುಮಲದಲ್ಲಿರುವ ಕರ್ನಾಟಕ ರಾಜ್ಯ ಛತ್ರದ ನಿರ್ವಹಣೆಯನ್ನು
  • ಕಂದಾಯ ಇಲಾಖೆಯಿಂದ ಪ್ರವಾಸೋದ್ಯಮ ಇಲಾಖೆಗೆ (KSTDC) ವರ್ಗಾಯಿಸಲು ನಿರ್ಧರಿಸಲಾಗಿದೆ.
  • ಶಿಕ್ಷಣ ನೀತಿ: ರಾಜ್ಯ ಶಿಕ್ಷಣ ನೀತಿ ಆಯೋಗ ನೀಡಿರುವ ಅಂತಿಮ ವರದಿಯ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದರೂ, ಯಾವುದೇ ಅಂತಿಮ ತೀರ್ಮಾನ ಕೈಗೊಳ್ಳದೆ ಮುಂದಿನ ಸಭೆಗೆ ಮುಂದೂಡಲಾಗಿದೆ.

ಸಚಿವ ಸಂಪುಟ ಸಭೆಯ ವಿವರವಾದ ಮಾಹಿತಿಗೆ ಓದಿ: ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್ ಜಾರಿಗೆ ಸಂಪುಟ ಅಸ್ತು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ