AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ನಲ್ಲಿ ಆರದ ಖಾತೆ ಕಿಚ್ಚು: ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಕೆಎಚ್ ಮುನಿಯಪ್ಪ ಬಹಿರಂಗ ಅಸಮಾಧಾನ

ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಕೆಎಚ್ ಮುನಿಯಪ್ಪ ತಮಗೆ ನೀಡಿರುವ ಆಹಾರ ಖಾತೆ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಹೈಕಮಾಂಡ್ ಹಿರಿತನವನ್ನು ಕಡೆಗಣಿಸಿದೆ ಎಂದು ಆರೋಪಿಸಿ ಕೃಷಿ ಅಥವಾ ಸಮಾಜ ಕಲ್ಯಾಣ ಖಾತೆಗಾಗಿ ಪಟ್ಟು ಹಿಡಿದಿದ್ದಾರೆ. ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್​ ತೆಗೆದುಕೊಳ್ಳಲ್ಲ ಎಂದಿದ್ದಾರೆ. ಇದರೊಂದಿಗೆ, ಕಾಂಗ್ರೆಸ್ ಖಾತೆ ಹಂಚಿಕೆ ಬಿಕ್ಕಟ್ಟು ಮತ್ತಷ್ಟು ಜೋರಾಗುವ ಸುಳಿವು ಕಾಣಿಸಿದೆ.

ಕಾಂಗ್ರೆಸ್‌ನಲ್ಲಿ ಆರದ ಖಾತೆ ಕಿಚ್ಚು: ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಕೆಎಚ್ ಮುನಿಯಪ್ಪ ಬಹಿರಂಗ ಅಸಮಾಧಾನ
ಕೆಎಚ್ ಮುನಿಯಪ್ಪImage Credit source: tv9
ನವೀನ್ ಕುಮಾರ್ ಟಿ.
| Edited By: |

Updated on:Jun 05, 2026 | 12:05 PM

Share

ಬೆಂಗಳೂರು, ಜೂನ್ 5: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಸೃಷ್ಟಿಯಾಗಿರುವ ಭಿನ್ನಮತ ಈಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸುಳಿವು ಕಾಣಿಸಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನದ ರಾಜೀನಾಮೆ ನೀಡಿದ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ಮುಖಂಡ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆಎಚ್ ಮುನಿಯಪ್ಪ (KH Muniyappa) ತಮಗೆ ನೀಡಿರುವ ಖಾತೆ ಬಗ್ಗೆ ಬಹಿರಂಗವಾಗಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಖಾತೆ ಹಂಚಿಕೆಯಲ್ಲಿ ಹಿರಿತನವನ್ನು ಪರಿಗಣಿಸುತ್ತಿಲ್ಲ ಎಂದು ಹೈಕಮಾಂಡ್ ವಿರುದ್ಧವೇ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಆಹಾರ ಇಲಾಖೆ ಸಚಿವನಾಗಿ ಚಾರ್ಜ್​ ತೆಗೆದುಕೊಳ್ಳಲ್ಲ ಎಂದು ಹೇಳಿದ್ದಾರೆ.

ಮುಖ್ಯಾಂಶಗಳು

  • ಖಾತೆ ಹಂಚಿಕೆಯಲ್ಲಿ ಹಿರಿತನಕ್ಕೆ ಬೆಲೆ ಸಿಕ್ಕಿಲ್ಲ: ಮುನಿಯಪ್ಪ.
  • ಹೀಗೆಯೇ ಮುಂದುವರಿದರೆ 2028ರ ಚುನಾವಣೆಗೆ ಭಾರಿ ಕಷ್ಟ: ಮುನಿಯಪ್ಪ.
  • ಸಮಾಜ ಕಲ್ಯಾಣ ಅಥವಾ ಕೃಷಿ ಖಾತೆಗೆ ಪಟ್ಟು.

ಹಿರಿತನಕ್ಕೆ ಸಿಗದ ಮಾನ್ಯತೆ: ಮುನಿಯಪ್ಪ ಆಕ್ರೋಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ, ‘ನಾನು ಈಗಾಗಲೇ 8 ಬಾರಿ ಗೆದ್ದಿರುವ ಹಿರಿಯ ರಾಜಕಾರಣಿ. ಆದರೆ ಖಾತೆ ಹಂಚಿಕೆಯಲ್ಲಿ ನಮ್ಮ ಸೀನಿಯಾರಿಟಿಯನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಪಕ್ಷದಲ್ಲಿ ಎಲ್ಲರನ್ನೂ ಸಮತೋಲನವಾಗಿ ನೋಡಬೇಕಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲ ನಾಯಕರನ್ನೂ ಒಂದೇ ಕಣ್ಣಿನಿಂದ ನೋಡಬೇಕು’ ಎಂದು ನೇರವಾಗಿ ಅಸಮಾಧಾನ ಹೊರಹಾಕಿದ್ದಾರೆ. ಈ ರೀತಿಯ ಗೊಂದಲಗಳು ಪಕ್ಷಕ್ಕೆ ಒಳ್ಳೆಯದಲ್ಲ, ಇಲಾಖೆಗಳ ಹಂಚಿಕೆ ಸರಿಯಾಗಿಲ್ಲದಿದ್ದರೆ ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗುವ ಆತಂಕವಿದೆ ಎಂದು ಅವರು ಎಚ್ಚರಿಸಿದ್ದಾರೆ.

ಖಾತೆ ಬದಲಾವಣೆಗಾಗಿ ಹೈಕಮಾಂಡ್‌ಗೆ ಮನವಿ

ತಾವು ಈಗಾಗಲೇ ಮೂರು ವರ್ಷಗಳ ಕಾಲ ಆಹಾರ ಇಲಾಖೆಯನ್ನು ನಿಭಾಯಿಸಿರುವ ಅನುಭವ ಹೊಂದಿದ್ದು, ಈ ಬಾರಿ ತಮಗೆ ಜನರ ನೇರ ಸೇವೆಗೆ ಮುಕ್ತ ಅವಕಾಶವಿರುವ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವಂತೆ ಬೇಡಿಕೆ ಇಟ್ಟಿದ್ದಾಗಿ ಮುನಿಯಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

‘ನಾನು ಇತ್ತೀಚೆಗಷ್ಟೇ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದೇನೆ. ಎಲ್ಲರನ್ನೂ ಒಂದೇ ರೀತಿಯಲ್ಲಿ ನಡೆಸಿಕೊಳ್ಳಬೇಕು ಎಂದು ಕೇಳಿಕೊಂಡಿದ್ದೇನೆ. ನನ್ನ ಖಾತೆಯನ್ನು ಶೀಘ್ರದಲ್ಲೇ ಬದಲಾವಣೆ ಮಾಡಿಕೊಡಲಿದ್ದಾರೆ ಎಂಬ ನಂಬಿಕೆ ನನಗಿದೆ’ ಎಂದು ಮುನಿಯಪ್ಪ ಹೇಳಿದ್ದಾರೆ. ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆಯಿಂದ ಕಂಗೆಟ್ಟಿರುವ ಕಾಂಗ್ರೆಸ್ ಸರ್ಕಾರಕ್ಕೆ, ಮುನಿಯಪ್ಪ ಅವರ ಈ ಬಹಿರಂಗ ಬಂಡಾಯ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:42 am, Fri, 5 June 26

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ