AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪುಟ ವಿಸ್ತರಣೆಗೆ ಇಂದು ದೆಹಲಿಯಲ್ಲಿ ಮಹತ್ವದ ಕಸರತ್ತು: ಹೈಕಮಾಂಡ್ ಗ್ರೀನ್ ಸಿಗ್ನಲ್ ನಿರೀಕ್ಷೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ಚರ್ಚೆಗೆ ಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ಇಂದು ದೆಹಲಿಗೆ ತೆರಳುತ್ತಿದ್ದು, ಹೈಕಮಾಂಡ್ ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ. ಕಳೆದ ವಾರ ನೀಟ್ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ಭಾಗಿಯಾಗಿದ್ದರಿಂದ ಸಂಪುಟ ಕುರಿತ ನಿರ್ಧಾರ ಅಂತಿಮಗೊಂಡಿರಲಿಲ್ಲ.

ಸಂಪುಟ ವಿಸ್ತರಣೆಗೆ ಇಂದು ದೆಹಲಿಯಲ್ಲಿ ಮಹತ್ವದ ಕಸರತ್ತು: ಹೈಕಮಾಂಡ್ ಗ್ರೀನ್ ಸಿಗ್ನಲ್ ನಿರೀಕ್ಷೆ
ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಡಿಕೆಶಿ, ಕೆಪಿಸಿಸಿ ಅಧ್ಯಕ್ಷ ಕೆಪಿ ಹರಿಪ್ರಸಾದ್Image Credit source: tv9
Sunil MH
| Edited By: |

Updated on: Jul 27, 2026 | 7:03 AM

Share

ಮುಖ್ಯಾಂಶಗಳು

  • ಸಂಪುಟ ವಿಸ್ತರಣೆ ಕುರಿತು ಇಂದು ದೆಹಲಿಯಲ್ಲಿ ಮಹತ್ವದ ಚರ್ಚೆ
  • ಸಿಎಂ ಡಿಕೆಶಿ, ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್ ದೆಹಲಿ ಭೇಟಿ
  • ಸಚಿವಾಕಾಂಕ್ಷಿ ಶಾಸಕರ ಲಾಬಿ ಜೋರು, ಹೈಕಮಾಂಡ್ ನಿರ್ಧಾರಕ್ಕೆ ಕಾತರ

ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಚರ್ಚೆ ಮತ್ತೆ ಜೋರಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂದು ದೆಹಲಿಗೆ ತೆರಳಲಿದ್ದು, ಸಂಜೆ ರಾಜ್ಯದ ಸಂಸದರೊಂದಿಗೆ ಆಡಳಿತಾತ್ಮಕ ವಿಚಾರವಾಗಿ ಮಹತ್ವದ ಸಭೆ ನಡೆಸಲಿದ್ದಾರೆ. ಬಳಿಕ ಮಂಗಳವಾರ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಸಂಪುಟ ವಿಸ್ತರಣೆ ಕುರಿತು ಅಂತಿಮ ಹಂತದ ಚರ್ಚೆ ನಡೆಸುವ ಸಾಧ್ಯತೆ ಇದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕೂಡ ಇಂದು ದೆಹಲಿಗೆ ತೆರಳಲಿದ್ದಾರೆ.

ಹೈಕಮಾಂಡ್ ಒಪ್ಪಿಗೆ ನೀಡಿದರೆ ಇದೇ ವಾರ, ಜುಲೈ 29 ಅಥವಾ 30ರಂದು ನೂತನ ಸಚಿವರ ಪ್ರಮಾಣವಚನ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳ ನೇಮಕದ ಕುರಿತ ಚರ್ಚೆಯೂ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ಖರ್ಗೆ ಭೇಟಿಗೆ ಸಚಿವಾಕಾಂಕ್ಷಿಗಳ ದಂಡು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳುವ ಮುನ್ನವೇ ಬೆಂಗಳೂರಿನ ಅವರ ನಿವಾಸಕ್ಕೆ ಸಚಿವ ಸ್ಥಾನಾಕಾಂಕ್ಷಿ ಶಾಸಕರು ಭೇಟಿ ನೀಡಿ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಹಂಪನಗೌಡ ಬಾದರ್ಲಿ, ದದ್ದಲ್, ಅಜಯ್ ಸಿಂಗ್, ರಹೀಂ ಖಾನ್ ಸೇರಿದಂತೆ ಹತ್ತಕ್ಕೂ ಹೆಚ್ಚು ಶಾಸಕರು ಖರ್ಗೆ ಅವರನ್ನು ಭೇಟಿಯಾಗಿದ್ದಾರೆ.

ಇದೇ ವೇಳೆ ಬಿ. ನಾಗೇಂದ್ರ, ವಿಜಯಾನಂದ ಕಾಶಪ್ಪನವರ್ ಹಾಗೂ ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಕೆಲ ನಾಯಕರು ಪ್ರತ್ಯೇಕವಾಗಿ ದೆಹಲಿಗೆ ತೆರಳಿ ತಮ್ಮ ಪರ ಲಾಬಿ ನಡೆಸುತ್ತಿದ್ದಾರೆ.

ಸಚಿವ ಸ್ಥಾನಕ್ಕಾಗಿ ನಾಯಕರ ನಿರೀಕ್ಷೆ

ಚಿತ್ರದುರ್ಗ ಶಾಸಕ ಶಿವಗಂಗಾ ಬಸವರಾಜ ಅವರು ಸಚಿವ ಸ್ಥಾನ ಕುರಿತು ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದ್ದು, ಪಕ್ಷದ ನಾಯಕತ್ವದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ‘ನಾನು ಪಕ್ಷದಲ್ಲಿ ಶಿವನ ಮುಂದಿನ ಬಸವ ಇದ್ದಂತೆ. ಡಿಕೆಶಿ ಸಾಹೇಬರನ್ನ ಗಣಪತಿಯಂತೆ ಸುತ್ತುವರಿಯುತ್ತೇನೆ, ಮಂತ್ರಿಗಿರಿ ಕೊಟ್ಟರೆ ಗುಡ್, ಕೊಡದಿದ್ದರೆ ವೆರಿ ಗುಡ್’ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಮತ್ತೊಂದೆಡೆ ಸಚಿವ ಎಂ.ಬಿ. ಪಾಟೀಲ್ ವಿಜಯಪುರ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ತಮಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಲಿದೆ ಎಂಬ ಸುದ್ದಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಇಂದು ರಾಜ್ಯ ಸಂಸದರ ಜತೆ ಡಿಕೆಶಿ ಸಭೆ

ಸಂಸತ್ ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಸಂಜೆ 6.30ಕ್ಕೆ ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ಸಂಸದರ ಸಭೆ ಕರೆದಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿದ ಬಾಕಿ ಉಳಿದಿರುವ ಯೋಜನೆಗಳ ಕುರಿತು ಚರ್ಚಿಸಲು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸಂಸದರಿಗೆ ಆಹ್ವಾನ ನೀಡಲಾಗಿದೆ.

ಇದನ್ನೂ ಓದಿ: ಚುನಾವಣಾ ರಾಜಕೀಯಕ್ಕೆ ಸಿದ್ದರಾಮಯ್ಯ ನಿವೃತ್ತಿ ಘೋಷಣೆ ಬೆನ್ನಲ್ಲೇ ಆಪ್ತರು ಮತ್ತು ಅಭಿಮಾನಿಗಳಲ್ಲಿ ಆತಂಕ

ಸಂಪುಟ ವಿಸ್ತರಣೆ ಕುರಿತ ಚರ್ಚೆ, ಸಚಿವಾಕಾಂಕ್ಷಿಗಳ ಲಾಬಿ ಹಾಗೂ ದೆಹಲಿಯಲ್ಲಿ ನಡೆಯಲಿರುವ ಸರಣಿ ಸಭೆಗಳ ನಡುವೆಯೇ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಯಾವುದು ಎಂಬುದರ ಮೇಲೆ ರಾಜಕೀಯ ವಲಯದ ಚಿತ್ತ ನೆಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!