Karnataka Cabinet Expansion Highlights: ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ: ಸಚಿವರಿಗೆ ಕರೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ

ವಿವೇಕ ಬಿರಾದಾರ
| Updated By: ಗಂಗಾಧರ​ ಬ. ಸಾಬೋಜಿ

Updated on:May 27, 2023 | 10:59 PM

Karnataka Ministers Oath Taking Highlights Updates: ಭರ್ಜರಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್​ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಂಡಿದ್ದು, ಇಂದು 24 ಶಾಸಕರಿಗೆ ಮಂತ್ರಿಗಿರಿ ಒಲಿದಿದೆ. ಈ 24 ಶಾಸಕರು ಇಂದು ಪ್ರಮಾಣವಚನ ಸ್ವೀಕಲರಿಸಲಿದ್ದಾರೆ. ಈ ಕುರಿತಾದ ಕ್ಷಣ ಕ್ಷಣದ ಮಾಹಿತಿ ಟಿವಿ9 ಡಿಜಿಟಲ್​​ನಲ್ಲಿ...

ದೆಹಲಿಯಲ್ಲಿ ಹೈಕಮಾಂಡ್​ ನಾಯಕರ ಜೊತೆ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಭೆ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪಟ್ಟಿ ಅಂತಿಮಗೊಂಡಿದೆ. ಇಂದು (ಮೇ.27) ಬೆಳಗ್ಗೆ 11.45ಕ್ಕೆ ರಾಜಭವನದ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮ೦ತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒಳಗೊಂಡ ಹಾಲಿ ಅಸ್ತಿತ್ವವಿರುವ 10 ಮಂದಿಯ ಸಚಿವ ಸಂಪುಟಕ್ಕೆ ಶನಿವಾರ 24 ಮಂದಿ ಸೇರ್ಪಡೆಯಾದರೆ ಜೋಡೆತ್ತು ಸರ್ಕಾರದ ಪರಿಪೂರ್ಣ ಸಂಪುಟ ರಚನೆಯಾದಂತೆ ಆಗುತ್ತದೆ. ಈ ಕುರಿತಾದ ಲೇಟೆಸ್ಟ್​​ ಅಪ್ಡೇಟ್ಸ್​​ ಇಲ್ಲಿದೆ

LIVE NEWS & UPDATES

The liveblog has ended.
  • 27 May 2023 10:30 PM (IST)

    Karnataka Cabinet Expansion Live: ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡಿರುವ ಸಚಿವರು

    ಖಾತೆ ಹಂಚಿಕೆ ವಿಚಾರದಲ್ಲಿ ಸಚಿವರು ಅಸಮಾಧಾನಗೊಂಡಿದ್ದು, ಅಸಮಾಧಾನಿತ ಸಚಿವರಿಗೆ ಖುದ್ದು ಸಿಎಂ ಸಿದ್ದರಾಮಯ್ಯ ಕರೆ ಮಾಡಿ ಮಾತನಾಡಿದ್ದಾರೆ. ಖಾತೆಗಳನ್ನು ಒಪ್ಪಿಕೊಳ್ಳುವಂತೆ ಸಚಿವರನ್ನು ಮನವೊಲಿಸಿದ್ದಾರೆ. ಸಾರಿಗೆ ಇಲಾಖೆ ನಿರ್ವಹಿಸಲು ಒಪ್ಪದ ಸಚಿವ ರಾಮಲಿಂಗಾ ರೆಡ್ಡಿ, ಗೃಹ ಇಲಾಖೆ ನಿರ್ವಹಣೆಗೆ ಸಚಿವ ಡಾ.ಜಿ.ಪರಮೇಶ್ವರ್ ನಿರಾಕರಿಸಿದ್ದಾರೆ. ಇಬ್ಬರು ಸಚಿವರೊಂದಿಗೂ ಖುದ್ದು ಫೋನ್‌ನಲ್ಲಿ ಸಿಎಂ ಚರ್ಚಿಸಿದ್ದಾರೆ.

  • 27 May 2023 09:29 PM (IST)

    Karnataka Cabinet Expansion Live: ಖಾತೆ ಹಂಚಿಕೆ ಆಗಿಲ್ಲ ನಕಲಿ ಸುದ್ದಿಗಳಿಗೆ ಕಿವಿಗೊಡಬೇಡಿ

    ಸಿದ್ದರಾಮಯ್ಯ ಸರ್ಕಾರದ ಪೂರ್ಣ ಪ್ರಮಾಣದ ಸಂಪುಟ ರಚನೆಯಾಗಿದೆ. ಸಚಿವ ಸ್ಥಾನಕ್ಕೆ  ಏರ್ಪಟ್ಟಿದ್ದ ಬಾರೀ ಲಾಬಿ ಮಧ್ಯೆ ಕಾಂಗ್ರೆಸ್ ಹೈಕಮಾಂಡ್​ ಕೊನೆಗೂ 24 ಜನರ ಶಾಸಕರಿಗೆ ಸಚಿವ ಸ್ಥಾನ ನೀಡಿದೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಖಾತೆ ಹಂಚಿಕೆಯ ನಕಲಿ ಪಟ್ಟಿ ವೈರಲ್ ಆಗಿರುವುದರ ಕುರಿತು ಕಾಂಗ್ರೆಸ್​ ಟ್ವೀಟ್​ ಮಾಡಿದೆ.

  • 27 May 2023 08:59 PM (IST)

    Karnataka Cabinet Expansion Live: ನಾನು ಪರಿಷತ್​ನಲ್ಲಿ ಸಾಮಾನ್ಯ ಸದಸ್ಯನಾಗಿರ್ತೇನೆ-ಹರಿಪ್ರಸಾದ್

    MLC ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ ಎಂದು ಎಲ್ಲೂ ಹೇಳಿಲ್ಲ. ರಾಜೀನಾಮೆ ನೀಡುವುದು ಸುಳ್ಳು ಸುದ್ದಿ ಎಂದು ಹರಿಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ. ಪರಿಷತ್​ ಸಭಾನಾಯಕ ಯಾರನ್ನು ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಅವರನ್ನೇ ಕೇಳಿ. ನಾನು ಪರಿಷತ್​ನಲ್ಲಿ ಸಾಮಾನ್ಯ ಸದಸ್ಯನಾಗಿರ್ತೇನೆ ಎಂದರು.

  • 27 May 2023 08:12 PM (IST)

    Karnataka Cabinet Expansion Live: H.D.ಕುಮಾರಸ್ವಾಮಿ ಹಗಲುಗನಸು ಕಾಣುತ್ತಿದ್ದಾರೆ-ಹರಿಪ್ರಸಾದ್

    ಲೋಕಸಭೆ ಚುನಾವಣೆ ಬಳಿಕ ಸರ್ಕಾರ ಪತನವಾಗುತ್ತೆ ಎಂಬ ಹೇಳಿಕೆ H.D.ಕುಮಾರಸ್ವಾಮಿಗೆ ಬಿ.ಕೆ.ಹರಿಪ್ರಸಾದ್ ಟಾಂಗ್ ನೀಡಿದ್ದು, ಹಗಲುಗನಸು ಕಾಣುತ್ತಿದ್ದಾರೆ. ಇಷ್ಟು ದಿನವೂ ಕುಮಾರಸ್ವಾಮಿಗೆ ರಾತ್ರಿ, ಹಗಲು ನಿದ್ದೆ ಇರ್ತಿರಲಿಲ್ಲ. ಈಗ ಹಗಲು ರಾತ್ರಿ ನಿದ್ದೆ ಮಾಡ್ತಿದ್ದಾರೆ, ಹೀಗಾಗಿ ಕನಸು ಕಾಣ್ತಿದ್ದಾರೆ ಎಂದಿದ್ದಾರೆ.

  • 27 May 2023 07:41 PM (IST)

    Karnataka Cabinet Expansion Live: ಎಸ್​​ಎಸ್​ ಮಲ್ಲಿಕಾರ್ಜುನ ಅವರ ದೃಷ್ಠಿ ತೆಗೆದ ಪತ್ನಿ

    ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮನೆಗೆ ಬಂದ ಪತಿ ಎಸ್​ಎಸ್ ಮಲ್ಲಿಕಾರ್ಜುನ ಅವರಿಗೆ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ ದೃಷ್ಠಿ ತೆಗೆದಿದ್ದಾರೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ‌ ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸಕ್ಕೆ ಆಗಮಿಸಿದರು.

  • 27 May 2023 07:29 PM (IST)

    Karnataka Cabinet Expansion Live: ಕಿಮ್ಮನೆ ಪರ ಸಾಹಿತಿಗಳು, ಮಲೆನಾಡು ಒಕ್ಕೂಟ ಬ್ಯಾಟಿಂಗ್

    ಕಿಮ್ಮನೆ ರತ್ನಾಕರ್‌ಗೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಿ ಎಂದು ಕಿಮ್ಮನೆ ಪರ ಸಾಹಿತಿಗಳು, ಮಲೆನಾಡು ಒಕ್ಕೂಟ ಬ್ಯಾಟಿಂಗ್ ಮಾಡಿದೆ. ಶೀಘ್ರವೇ ಸಿಎಂ ಭೇಟಿಗೆ ಸಾಹಿತಿಗಳು, ಒಕ್ಕೂಟದಿಂದ ನಿರ್ಧಾರ ಮಾಡಲಾಗುವುದು. ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಸಜ್ಜನ ರಾಜಕಾರಣಿಯಾಗಿದ್ದಾರೆ. ಸೋಲಿನಿಂದ ಕಂಗೆಟ್ಟು ಕೂರುವುದಕ್ಕೆ ಪಕ್ಷ ಬಿಡಬಾರದು.

  • 27 May 2023 06:55 PM (IST)

    Karnataka Cabinet Expansion Live: ಗ್ಯಾರಂಟಿ ಯೋಜನೆಗಳು ಖಂಡಿತ ಜಾರಿಯಾಗುತ್ತೆ-ಹರಿಪ್ರಸಾದ್

    ಜನರಿಗೆ ನೀಡಿದ ಗ್ಯಾರಂಟಿಗಳ ಬಗ್ಗೆ ಅಂಕಿಅಂಶ ಸಂಗ್ರಹಿಸುತ್ತಿದ್ದಾರೆ. ನೀತಿ ನಿಯಮ ಏನು ಮಾಡಬೇಕೆಂದು ಸಮಯ ತೆಗೆದುಕೊಳ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಖಂಡಿತ ಜಾರಿಯಾಗುತ್ತೆ ಎಂದು ಹರಿಪ್ರಸಾದ್​ ಹೇಳಿದರು. ಕಾಂಗ್ರೆಸ್​​ ಗ್ಯಾರಂಟಿಗಳ ಬಗ್ಗೆ ಕುಮಾರಸ್ವಾಮಿ ಲೇವಡಿ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದರು.

  • 27 May 2023 06:10 PM (IST)

    Karnataka Cabinet Expansion Live: ಖಾತೆ ಹಂಚಿಕೆ ವಿಚಾರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ

    ಖಾತೆ ಹಂಚಿಕೆ ವಿಚಾರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ಖಾತೆ ನೀಡುವ ಬಗ್ಗೆ ಯಾವುದೇ ಚರ್ಚೆಯೇ ನಡೆಸಿಲ್ಲ. ಸಾರಿಗೆ ಇಲಾಖೆ ನೀಡುವುದಾದರೆ ನನಗೆ ಸಚಿವ ಸ್ಥಾನವೇ ಬೇಡ ಎಂದು ತಮ್ಮ ಆಪ್ತರ ಬಳಿ ರಾಮಲಿಂಗಾರೆಡ್ಡಿ ಅಸಮಾಧಾನ ಹೊರಹಾಕಿದ್ದಾರೆ. ಕಂದಾಯ ಅಥವಾ ಬೆಂಗಳೂರು ನಗರಾಭಿವೃದ್ಧಿ ನೀಡುವಂತೆ ಪಟ್ಟು ಹಿಡಿದಿದ್ದಾರೆ.

  • 27 May 2023 05:44 PM (IST)

    Karnataka Cabinet Expansion Live: ಸಚಿವ ಸ್ಥಾನ ಸಿಗದಿದ್ದಕ್ಕೆ ವಿಜಯಾನಂದ ಕಾಶಪ್ಪನವರ್​ ಬೇಸರ

    ಸಿದ್ದರಾಮಯ್ಯ, ಡಿಕೆ ಸಚಿವ ಸ್ಥಾನ ಕೊಡುವ ನಿರೀಕ್ಷೆ ಇತ್ತು. ಸಚಿವ ಸ್ಥಾನ ಕೊಡದಿದ್ದಕ್ಕೆ ಕ್ಷೇತ್ರದ ಜನ ಆಕ್ರೋಶ ಹೊರಹಾಕ್ತಿದ್ದಾರೆ. ಕ್ಷೇತ್ರದ ಜನರನ್ನು ಸಮಾಧಾನ ಮಾಡುತ್ತಿದ್ದೇನೆ ಎಂದು ವಿಜಯಾನಂದ ಕಾಶಪ್ಪನವರ್​ ಬೇಸರ ವ್ಯಕ್ತಪಡಿಸಿದ್ದಾರೆ. ಮಂತ್ರಿಯಾದ್ರೆ ಎಲ್ಲಿ ಬೆಳೆಯುತ್ತಾನೆ ಎಂದು ಕೆಲವರಿಗೆ ಹೊಟ್ಟೆ ಕಿಚ್ಚು. ನನ್ನ ವಿರುದ್ಧ ಷಡ್ಯಂತ್ರ ನಡೆದಿರಬಹುದು.​​ ನಮ್ಮ ನಾಯಕರು ಹಿತ್ತಾಳೆ ಕಿವಿ ಹಾಕಿಕೊಂಡು ಕುಳಿತಿರುತ್ತಾರೆ. ನಿಜವಾದ ಶಕ್ತಿ ಯಾರ ಬಳಿ ಎಂದು ತಿಳಿದಿರುತ್ತಾರೆ ಎಂದಿದ್ದಾರೆ

  • 27 May 2023 04:36 PM (IST)

    Karnataka Cabinet Expansion Live: ಖಾತೆ ಹಂಚಿಕೆ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಸಿಎಂ ಸಿದ್ದರಾಮಯ್ಯ

    ನಾಳೆ ಖಾತೆ ಹಂಚಿಕೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪೂರ್ಣ ಪ್ರಮಾಣದ ಸಂಪುಟ ರಚನೆ ಆಗಿದೆ. ಕೆಲವು ಮಾನದಂಡಗಳ ಆಧಾರದಲ್ಲಿ ಸಂಪುಟ ವಿಸ್ತರಣೆ ಮಾಡಲಾಗಿದೆ. ಮುಂದಿನ ಸಂಪುಟದಲ್ಲಿ ಐದು ಗ್ಯಾರಂಟಿ ಜಾರಿ ಮಾಡುತ್ತೇವೆ. ಈ ಹಿಂದೆಯೂ ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ. ಈಗಲೂ ನಾವು ಜನರಿಗೆ ಕೊಟ್ಟ ಭರವಸೆ ಈಡೇರಿಸುತ್ತೇವೆ ಎಂದರು.

  • 27 May 2023 04:27 PM (IST)

    Karnataka Cabinet Expansion Live: ಹರಿಪ್ರಸಾದ್​​ಗೆ ಸಚಿವಸ್ಥಾನ ಸಿಗದಿದ್ದಕ್ಕೆ ಬಿಲ್ಲವ ಮುಖಂಡರ ಬೇಸರ

    ಹರಿಪ್ರಸಾದ್​​ಗೆ ಸಚಿವಸ್ಥಾನ ಸಿಗದಿದ್ದಕ್ಕೆ ಬಿಲ್ಲವ ಮುಖಂಡರ ಬೇಸರವಾಗಿದ್ದಾರೆ. ನಮ್ಮನ್ನು ಪ್ರತಿನಿಧಿಸಲು ಜಿಲ್ಲೆಯಿಂದ ಯಾರಿಗೂ ಅವಕಾಶ ನೀಡಿಲ್ಲ. ಜಿಲ್ಲೆಯಲ್ಲಿ ನಮ್ಮ ಸಮುದಾಯದ ಇಬ್ಬರು ಪರಿಷತ್ ಸದಸ್ಯರಿದ್ದಾರೆ. ಎಂಎಲ್​ಸಿಯಾಗಿ ಬಿ.ಕೆ.ಹರಿಪ್ರಸಾದ್, ಹರೀಶ್ ಕುಮಾರ್ ಇದ್ದಾರೆ. ಹರಿಪ್ರಸಾದ್​​, ಹರೀಶ್​ಕುಮಾರ್​ರನ್ನು ಗಣನೆಗೆ ತೆಗೆದುಕೊಳ್ಳಬೇಕಿತ್ತು ಎಂದಿದ್ದಾರೆ.

  • 27 May 2023 03:29 PM (IST)

    Karnataka Cabinet Expansion Live: ಸಚಿವರ ಸಂಭಾನೀಯ ಖಾತೆಗಳು

    ಸಿಎಂ ಸಿದ್ದರಾಮಯ್ಯ ಸಂಪುಟ ಕಸರತ್ತಿಗೆ ಕೊನೆಗೂ ತೆರೆ ಬಿದ್ದಿದೆ. ಕಾಂಗ್ರೆಸ್‌ಗೆ ಕಗ್ಗಂಟಾಗಿದ್ದ ಸಂಪುಟ ವಿಸ್ತರಣೆ ಕೊನೆಗೂ ಮುಗಿದಿದೆ. ಸಚಿವರ ಸಂಭಾನೀಯ ಖಾತೆಗಳು ಹೀಗಿವೆ.

    ಸಿಎಂ ಸಿದ್ದರಾಮಯ್ಯ-ಹಣಕಾಸು, ಸಂಪುಟ ವ್ಯವಹಾರ, ಗುಪ್ತಚರ ಇಲಾಖೆ, ಡಿ.ಕೆ.ಶಿವಕುಮಾರ್​-ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ, ಡಾ.ಜಿ.ಪರಮೇಶ್ವರ್​​-ಗೃಹ ಖಾತೆ, ಹೆಚ್​​.ಕೆ.ಪಾಟೀಲ್​-ಕಾನೂನು ಮತ್ತು ಸಂಸದೀಯ ವ್ಯವಹಾರ, ಕೆ.ಹೆಚ್​.ಮುನಿಯಪ್ಪ-ಆಹಾರ ಮತ್ತು ನಾಗರಿಕ ಸರಬರಾಜು, ಕೆ.ಜೆ.ಜಾರ್ಜ್​- ಇಂಧನ ಖಾತೆ, ಎಂ.ಬಿ.ಪಾಟೀಲ್- ಬೃಹತ್ &ಮಧ್ಯಮ ಕೈಗಾರಿಕೆ, ಐಟಿ ಬಿಟಿ, ರಾಮಲಿಂಗಾರೆಡ್ಡಿ- ಸಾರಿಗೆ ಖಾತೆ, ಪ್ರಿಯಾಂಕ್​ ಖರ್ಗೆ-ಗ್ರಾಮೀಣಾಭಿವೃದ್ಧಿ & ಪಂಚಾಯತ್​​ರಾಜ್​, ಜಮೀರ್​ ಅಹ್ಮದ್ ಖಾನ್​​​-ವಸತಿ, ವಕ್ಫ್​​​ ಖಾತೆ,

    ಸತೀಶ್ ಜಾರಕಿಹೊಳಿ-ಲೋಕೋಪಯೋಗಿ ಇಲಾಖೆ, ಕೃಷ್ಣ ಭೈರೇಗೌಡ- ಕಂದಾಯ ಖಾತೆ, ಎನ್​​.ಚಲುವರಾಯಸ್ವಾಮಿ- ಕೃಷಿ ಖಾತೆ, ಕೆ.ವೆಂಕಟೇಶ್​​-ಪಶುಸಂಗೋಪನಾ ಖಾತೆ, ಡಾ.ಹೆಚ್​​.ಸಿ.ಮಹದೇವಪ್ಪ-ಸಮಾಜ ಕಲ್ಯಾಣ ಇಲಾಖೆ, ಈಶ್ವರ್​ ಖಂಡ್ರೆ-ಅರಣ್ಯ ಖಾತೆ, ಕೆ.ಎನ್​.ರಾಜಣ್ಣ-ಸಹಕಾರ, ದಿನೇಶ್​ ಗುಂಡೂರಾವ್​​-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,

    ಶರಣಬಸಪ್ಪ ದರ್ಶನಾಪುರ- ಸಣ್ಣ ಕೈಗಾರಿಕೆ ಖಾತೆ, ಶಿವಾನಂದ ಪಾಟೀಲ್​​- ಸಕ್ಕರೆ ಖಾತೆ, ಆರ್​.ಬಿ.ತಿಮ್ಮಾಪುರ- ಅಬಕಾರಿ, ಮುಜರಾಯಿ ಇಲಾಖೆ, ಎಸ್​.ಎಸ್​.ಮಲ್ಲಿಕಾರ್ಜುನ-ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಡಾ.ಶರಣ ಪ್ರಕಾಶ್ ಪಾಟೀಲ್- ಉನ್ನತ ಶಿಕ್ಷಣ ಖಾತೆ, ಮಂಕಾಳು ವೈದ್ಯ- ಮೀನುಗಾರಿಕೆ, ಬಂದರು ಮತ್ತು ಒಳಾಡಳಿತ ಸಾರಿಗೆ, ಲಕ್ಷ್ಮೀ ಹೆಬ್ಬಾಳ್ಕರ್ -ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿವರಾಜ್​​ ತಂಗಡಗಿ -ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ರಹೀಂ ಖಾನ್​​-ಪೌರಾಡಳಿತ ಖಾತೆ, ಡಿ.ಸುಧಾಕರ್​-ಮೂಲಸೌಕರ್ಯ, ಹಜ್​ ಖಾತೆ.

  • 27 May 2023 03:03 PM (IST)

    Karnataka Cabinet Expansion Live: ಕೆಲವು ಮಾನದಂಡಗಳ ಆಧಾರದಲ್ಲಿ ಸಂಪುಟ ವಿಸ್ತರಣೆ: ಸಿಎಂ ಸಿದ್ಧರಾಮಯ್ಯ

    ಬೆಂಗಳೂರು: ನಾಳೆ ಖಾತೆ ಹಂಚಿಕೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪೂರ್ಣ ಪ್ರಮಾಣದ ಸಂಪುಟ ರಚನೆ ಆಗಿದೆ. ಕೆಲವು ಮಾನದಂಡಗಳ ಆಧಾರದಲ್ಲಿ ಸಂಪುಟ ವಿಸ್ತರಣೆ ಮಾಡಲಾಗಿದೆ. ಮುಂದಿನ ಸಂಪುಟದಲ್ಲಿ ಐದು ಗ್ಯಾರಂಟಿ ಜಾರಿ ಮಾಡುತ್ತೇವೆ. ಈ ಹಿಂದೆಯೂ ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ. ಈಗಲೂ ನಾವು ಜನರಿಗೆ ಕೊಟ್ಟ ಭರವಸೆ ಈಡೇರಿಸುತ್ತೇವೆ. ವಿರೋಧ ಪಕ್ಷದವರು ಜನರಿಗೆ ಕೊಟ್ಟ ಭರವಸೆ ಈಡೇರಿಸಿರಲಿಲ್ಲ ಎಂದರು.

  • 27 May 2023 01:04 PM (IST)

    Karnataka Cabinet Expansion Live: ಸಿಎಂ ಸಿದ್ದರಾಮಯ್ಯ ಸರ್ಕಾರದ ಪರಿಪೂರ್ಣ ಸಂಪುಟ ರಚನೆ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಂಪುಟ ವಿಸ್ತರಣೆಯಾಗಿದ್ದು, ನೂತನವಾಗಿ 24 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಹಾಲಿ ಅಸ್ತಿತ್ವವಿರುವ 10 ಮಂದಿಯ ಸಚಿವ ಸಂಪುಟಕ್ಕೆ 24 ಸಚಿವರು ಸೇರ್ಪಡೆಗೊಳ್ಳುವ ಮೂಲಕ ಪರಿಪೂರ್ಣ ಸಂಪುಟ ರಚನೆಯಾಗಿದೆ.

  • 27 May 2023 12:59 PM (IST)

    Karnataka Cabinet Expansion Live: ದೇವರು, ವಾಲ್ಮೀಕಿ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಬಿ.ನಾಗೇಂದ್ರ

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಬಿ.ನಾಗೇಂದ್ರ ಅವರು ದೇವರು, ವಾಲ್ಮೀಕಿ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:56 PM (IST)

    Karnataka Cabinet Expansion Live: ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಎಂ.ಸಿ.ಸುಧಾಕರ್

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಎಂ.ಸಿ.ಸುಧಾಕರ್ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:53 PM (IST)

    Karnataka Cabinet Expansion Live: ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಮಧು ಬಂಗಾರಪ್ಪ

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಮಧು ಬಂಗಾರಪ್ಪ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:50 PM (IST)

    Karnataka Cabinet Expansion Live: ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಭೈರತಿ ಸುರೇಶ್

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಭೈರತಿ ಸುರೇಶ್​​ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:48 PM (IST)

    Karnataka Cabinet Expansion Live: ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಎನ್​ಎಸ್​​ ಬೋಸರಾಜು

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಎನ್​. ಎಸ್​​.ಬೋಸರಾಜು ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:45 PM (IST)

    Karnataka Cabinet Expansion Live: ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಸಂತೋಷ್ ಲಾಡ್​

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ  ಸಂತೋಷ್ ಲಾಡ್​ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:43 PM (IST)

    Karnataka Cabinet Expansion Live: ತೇರು ಮಲ್ಲೇಶ್ವರ್ ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಡಿ ಸುಧಾಕರ್

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಡಿ.ಸುಧಾಕರ್ ಅವರು ತೇರು ಮಲ್ಲೇಶ್ವರ್ ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:42 PM (IST)

    Karnataka Cabinet Expansion Live: ಇಂಗ್ಲಿಷ್​​ನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ರಹೀಂ ಖಾನ್​

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ರಹೀಂ ಖಾನ್​ ಅವರು ಇಂಗ್ಲಿಷ್​​ನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:40 PM (IST)

    Karnataka Cabinet Expansion Live: ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಲಕ್ಷ್ಮೀ ಹೆಬ್ಬಾಳ್ಕರ್

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ಜಗಜ್ಯೋತಿ ಬಸವೇಶ್ವರ, ಛತ್ರಪತಿ ಶಿವಾಜಿ ಮಹರಾಜ, ಡಾ. ಬಿ ಆರ್​ ಅಂಬೇಡ್ಕರ್​​ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಎರಡನೇ ಬಾರಿಗೆ ಗೌಪ್ಯತೆಯಲ್ಲಿಕ್ಷೇತ್ರದ ಮತದಾರ ಹಾಗೂ ತನ್ನ ತಾಯಿಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

  • 27 May 2023 12:33 PM (IST)

    Karnataka Cabinet Expansion Live: ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಮಂಕಾಳು ವೈದ್ಯ

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಮಂಕಾಳು ವೈದ್ಯ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:30 PM (IST)

    Karnataka Cabinet Expansion Live: ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಶರಣ ಪ್ರಕಾಶ್ ಪಾಟೀಲ್

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಶರಣ ಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:27 PM (IST)

    Karnataka Cabinet Expansion Live: ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಶಿವರಾಜ ತಂಗಡಗಿ

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಶಿವರಾಜ ತಂಗಡಗಿ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:26 PM (IST)

    Karnataka Cabinet Expansion Live: ಆರಾಧ್ಯ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಎಸ್​​ಎಸ್ ಮಲ್ಲಿಕಾರ್ಜುನ

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಎಸ್.ಎಸ್.ಮಲ್ಲಿಕಾರ್ಜುನ ಅವರು ಕಲ್ಲೇಶ್ವರ ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:21 PM (IST)

    Karnataka Cabinet Expansion Live: ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಆರ್​​​ಬಿ ತಿಮ್ಮಾಪುರ

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಆರ್.ಬಿ.ತಿಮ್ಮಾಪುರ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:18 PM (IST)

    Karnataka Cabinet Expansion Live: ಅಣ್ಣ ಬಸವಣ್ಣನ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಶಿವಾನಂದ ಪಾಟೀಲ್

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಶಿವಾನಂದ ಪಾಟೀಲ್​​ ಅವರು ಅಣ್ಣ ಬಸವಣ್ಣನ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:16 PM (IST)

    Karnataka Cabinet Expansion Live: ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಶರಣಬಸಪ್ಪ ದರ್ಶನಾಪುರ

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಶರಣಬಸಪ್ಪ ದರ್ಶನಾಪುರ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:13 PM (IST)

    Karnataka Cabinet Expansion Live: ​​ಪ್ರಮಾಣವಚನ ಸ್ವೀಕರಿಸಿದ ದಿನೇಶ್ ಗುಂಡೂರಾವ್

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ದಿನೇಶ್ ಗುಂಡೂರಾವ್ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:10 PM (IST)

    Karnataka Cabinet Expansion Live: ಬುದ್ಧ, ಬಸವ, ಅಂಬೇಡ್ಕರ್​​,ವಾಲ್ಮೀಕಿ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಕೆಎನ್ ​​ರಾಜಣ್ಣ

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಕೆ.ಎನ್.ರಾಜಣ್ಣ ಬುದ್ಧ, ಬಸವ, ಅಂಬೇಡ್ಕರ್​ ಮತ್ತು ವಾಲ್ಮೀಕಿ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:06 PM (IST)

    Karnataka Cabinet Expansion Live: ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಈಶ್ವರ ಖಂಡ್ರೆ

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಈಶ್ವರ ಖಂಡ್ರೆಯವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:04 PM (IST)

    Karnataka Cabinet Expansion Live: ಸತ್ಯ, ನಿಷ್ಠೆಯಿಂದ ​​ಪ್ರಮಾಣವಚನ ಸ್ವೀಕರಿಸಿದ ಹೆಚ್​ಸಿ ಮಹದೇವಪ್ಪ

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಡಾ.ಹೆಚ್​. ಸಿ.ಮಹದೇವಪ್ಪ ಸತ್ಯ ಮತ್ತು ನಿಷ್ಠೆಯಿಂದ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 12:01 PM (IST)

    Karnataka Cabinet Expansion Live: ಪ್ರಮಾಣವಚನ ಸ್ವೀಕರಿಸಿದ ಕೆ.ವೆಂಕಟೇಶ್

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಕೆ.ವೆಂಕಟೇಶ್ ದೇವರ ಹೆಸರಿನಲ್ಲಿ ​​ಪ್ರಮಾಣವಚನ ಮಾಡಿದ್ದಾರೆ. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 11:58 AM (IST)

    Karnataka Cabinet Expansion Live: ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಚಲುವರಾಯಸ್ವಾಮಿ

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಎನ್​​. ಚಲುವರಾಯಸ್ವಾಮಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

  • 27 May 2023 11:56 AM (IST)

    Karnataka Cabinet Expansion Live: ಪ್ರಮಾಣವಚನ ಸ್ವೀಕರಿಸಿದ ಕೃಷ್ಣಭೈರೇಗೌಡ

    ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಕೃಷ್ಣ ಭೈರೇಗೌಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

  • 27 May 2023 11:51 AM (IST)

    Karnataka Cabinet Expansion Live: ಪ್ರಮಾಣವಚನ ಸ್ವೀಕರಿಸಿದ ಹೆಚ್​​​ಕೆ ಪಾಟೀಲ್​​

    ಬೆಂಗಳೂರು: ರಾಜಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆದಿದ್ದು ಮೊದಲನೆಯದಾಗಿ ಸಚಿವರಾಗಿ ಹೆಚ್.ಕೆ.ಪಾಟೀಲ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

  • 27 May 2023 11:43 AM (IST)

    Karnataka Cabinet Expansion Live: ರಾಜಭವನಗೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಮ್ ಡಿಕೆ ಶಿವಕುಮಾರ್

    ಬೆಂಗಳೂರು: ನೂತನ ಸಚಿವರ ಪ್ರಮಾಣವಚನ ಸಮಾರಂಭ ನಿಮಿತ್ತ ರಾಜಭವನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ,  ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್​ ಆಗಮಿಸಿದ್ದಾರೆ.

  • 27 May 2023 11:03 AM (IST)

    Karnataka Cabinet Expansion Live: ಇಂದು ಅಥವಾ ನಾಳೆ ಸಚಿವರಿಗೆ ಖಾತೆ ಹಂಚಿಕೆ

    ಬೆಂಗಳೂರು: ಇಂದು ಅಥವಾ ನಾಳೆ ಸಚಿವರಿಗೆ ಖಾತೆ ಹಂಚಿಕೆ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

  • 27 May 2023 11:02 AM (IST)

    Karnataka Cabinet Expansion Live: ಕ್ಷೇತ್ರದ ಜತೆಗೆ ರಾಜ್ಯದ ಅಭಿವೃದ್ಧಿಗೆ ಗಮನಕೊಡುತ್ತೇನೆ; ಹೆಚ್​.ಸಿ.ಮಹದೇವಪ್ಪ

    ಬೆಂಗಳೂರು: ನಾನು ಯಾವತ್ತೂ ಸಚಿವ ಸ್ಥಾನ, ಇಂತಹದ್ದೇ ಖಾತೆ ಬೇಕು ಎಂದಿಲ್ಲ. ಮುಖ್ಯಮಂತ್ರಿಗಳು ನನಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ಕಾಂಗ್ರೆಸ್​ನಲ್ಲಿ ಯಾವುದೇ ಬಣ ಇಲ್ಲ, ಇರೋದು ಕಾಂಗ್ರೆಸ್​ ಬಣ. ನಮ್ಮ ಕ್ಷೇತ್ರದ ಜನರು, ಕಾರ್ಯಕರ್ತರಿಗೆ ಋಣಿಯಾಗಿದ್ದೇನೆ. ಕ್ಷೇತ್ರದ ಜತೆಗೆ ರಾಜ್ಯದ ಅಭಿವೃದ್ಧಿಗೆ ಗಮನಕೊಡುತ್ತೇನೆ ಎಂದು ಡಾ.ಹೆಚ್​.ಸಿ.ಮಹದೇವಪ್ಪ ಹೇಳಿದ್ದಾರೆ.

  • 27 May 2023 10:07 AM (IST)

    Karnataka Cabinet Expansion Live: ಯಾವುದೇ ಖಾತೆ ನೀಡಿದರೂ ನಿಭಾಯಿಸುವೆ: ದಿನೇಶ್ ಗುಂಡೂರಾವ್

    ಬೆಂಗಳೂರು: ಯಾವುದೇ ಖಾತೆ ನೀಡಿದರೂ ನಿಭಾಯಿಸುವೆ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತೆ. ನಾವು ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ವಿಪಕ್ಷಗಳು ಸ್ವಲ್ಪ ತಾಳ್ಮೆಯಿಂದ ಇರಬೇಕು. ಗೊಂದಲ ಸೃಷ್ಟಿಸುವ ಕೆಲಸವನ್ನು ವಿಪಕ್ಷಗಳು ಮಾಡಬಾರದು ಎಂದು ಬೆಂಗಳೂರಿನಲ್ಲಿ ಶಾಸಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  ​

  • 27 May 2023 09:41 AM (IST)

    Karnataka Cabinet Expansion Live: ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಾಂಗ್ರೆಸ್ ಕಾರ್ಯಕರ್ತ ಪತ್ರ

    ಚಾಮರಾಜನಗರ: ಉಪ್ಪಾರ ಸಮುದಾಯದ ಶಾಸಕ ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಾಂಗ್ರೆಸ್ ಕಾರ್ಯಕರ್ತ ಪತ್ರ ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಕಾಂಗ್ರೆಸ್ ಪಕ್ಷ ಉಪ್ಪಾರ ಸಮುದಾಯಕ್ಕೆ ನಂಬಿಕೆ ದ್ರೋಹ ಮಾಡಿದೆ. ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡದಿದ್ದರೇ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನನ್ನ ಆತ್ಮಹತ್ಯೆಗೆ ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ, ರಾಹುಲ್‌ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕಾರಣ ಎಂದು ಕಾರ್ಯಕರ್ತ ಚಂದ್ರಶೇಖರ್ ಪತ್ರ ಬರೆದು ಪತ್ರ ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾನೆ.

  • 27 May 2023 08:39 AM (IST)

    Karnataka Cabinet Expansion Live: ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರ ಆಕ್ರೋಶ

    ಬೆಳಗಾವಿ: ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಿಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷ್ಮಣ ಸವದಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಹಾಕಿ  ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್​ಗೆ ಹೆಚ್ಚು ಸ್ಥಾನ ಬರಲು ಲಕ್ಷ್ಮಣ ಸವದಿ ಕಾರಣ. ಲಕ್ಷ್ಮಣ ಸವದಿ ಮಂತ್ರಿ ಆಗದಂತೆ ಕೆಲವರು ಕುತಂತ್ರ ನಡೆಸಿದ್ದಾರೆಂದು ಆರೋಪ ಮಾಡಿದ್ದಾರೆ.

  • 27 May 2023 08:01 AM (IST)

    Karnataka Cabinet Expansion Live: ಇಂದು ಸಿದ್ದರಾಮಯ್ಯ ಸಂಪುಟ ಸೇರಲಿದ್ದಾರೆ 24 ಸಚಿವರು

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪಟ್ಟಿ ಅಂತಿಮಗೊಂಡಿದ್ದು, ಇಂದು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

  • Published On - May 27,2023 7:58 AM

    Follow us
    ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
    ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
    ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
    ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
    ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
    ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
    ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
    ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
    Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
    Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
    ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
    ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
    ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
    ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
    ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
    ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
    ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
    ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
    ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
    ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ