AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಗ್ರಾಮ ನ್ಯಾಯಾಲಯ ಸ್ಥಾಪನೆಗೆ ಕ್ಯಾಬಿನೆಟ್ ತಾತ್ವಿಕ ಒಪ್ಪಿಗೆ: ಕಡ್ಡಾಯ ಗ್ರಾಮೀಣ ಸೇವೆಯಿಂದ ವೈದ್ಯರಿಗೆ ರಿಲ್ಯಾಕ್ಸ್

Karnataka Cabinet decisions; 100 ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ಮೂಲಕ ಅನುಮತಿ ನೀಡಿದೆ. ಸಚಿವ ಸಂಪುಟ ಕೈಗೊಂಡ ಇತರ ನಿರ್ಧಾರಗಳು, ಸಂಪುಟ ಸಭೆಯಲ್ಲಿ ಚರ್ಚೆಯಾದ ಇತರ ವಿಚಾರಗಳ ಬಗ್ಗೆ ಸಚಿವ ಹೆಚ್​​ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ. ಆ ವಿವರ ಇಲ್ಲಿದೆ.

100 ಗ್ರಾಮ ನ್ಯಾಯಾಲಯ ಸ್ಥಾಪನೆಗೆ ಕ್ಯಾಬಿನೆಟ್ ತಾತ್ವಿಕ ಒಪ್ಪಿಗೆ: ಕಡ್ಡಾಯ ಗ್ರಾಮೀಣ ಸೇವೆಯಿಂದ ವೈದ್ಯರಿಗೆ ರಿಲ್ಯಾಕ್ಸ್
ಸಚಿವ ಸಂಪುಟ ಸಭೆಯ ಬಳಿಕ ಸಚಿವ ಹೆಚ್​​ಕೆ ಪಾಟೀಲ್ ಮಾಹಿತಿ ನೀಡಿದರು.
ಪ್ರಸನ್ನ ಗಾಂವ್ಕರ್​
| Edited By: |

Updated on:Oct 19, 2023 | 7:25 PM

Share

ಬೆಂಗಳೂರು, ಅಕ್ಟೋಬರ್ 19: 2008-09ರಲ್ಲಿ ಗ್ರಾಮ ನ್ಯಾಯಾಲಯ ಸ್ಥಾಪನೆ ಬಗ್ಗೆ ಕಾನೂನು ತರಲಾಗಿತ್ತು. ಅದರಂತೆ 100 ಗ್ರಾಮ ನ್ಯಾಯಾಲಯಗಳ (Grama Nyayalayas) ಸ್ಥಾಪನೆಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ಮೂಲಕ ಅನುಮತಿ ನೀಡಿದೆ ಎಂದು ಸಚಿವ ಹೆಚ್​​ಕೆ ಪಾಟೀಲ್ (HK patil) ಗುರುವಾರ ಸಂಜೆ​ ತಿಳಿಸಿದರು. ಸಚಿವ ಸಂಪುಟ (Karnataka Cabinet) ಸಭೆಯ ಬಳಿ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸಂಬಂಧಿಸಿ ಮಾಹಿತಿ ನೀಡಿದರು. 100 ಗ್ರಾಮ ಕೋರ್ಟ್‌ ಸ್ಥಾಪನೆಗೆ ಅಂದಾಜು 25-30 ಕೋಟಿ ಆಗಬಹುದು ಎಂದರು. ಜತೆಗೆ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾದ ವಿಷಯಗಳ ಮತ್ತು ಕೈಗೊಳ್ಳಲಾದ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು.

ಒಟ್ಟು ಕೃಷಿ ತೋಟಾಗಾರಿಕೆ ನಷ್ಟ 33,770 ಕೋಟಿ ರೂಪಾಯಿ ಆಗಿದ್ದು, ನಾವು ಕೃಷಿ ತೋಟಗಾರಿಕೆ ನಷ್ಟಕ್ಕೆ 4,414 ಕೋಟಿ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದೇವೆ. 5,326 ಕೋಟಿ ರೂಪಾಯಿ ಒಟ್ಟು ನಷ್ಟ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದೇವೆ. ರಾಜ್ಯ ಮಂತ್ರಿಗಳು ಕೇಂದ್ರ ಮಂತ್ರಿಗಳ ಭೇಟಿ ಮಾಡುವುದಕ್ಕೆ ಪದೇ ಪದೇ ಸಮಯ ಕೇಳ್ತಿದ್ದಾರೆ ಎಂದು ಹೆಚ್​ಕೆ ಪಾಟೀಲ್ ತಿಳಿಸಿದರು.

ಕಡ್ಡಾಯ ಗ್ರಾಮೀಣ ಸೇವೆಯಿಂದ ವೈದ್ಯರಿಗೆ ರಿಲ್ಯಾಕ್ಸ್

ಕಡ್ಡಾಯ ಗ್ರಾಮೀಣ ಸೇವೆಯಿಂದ ವೈದ್ಯರಿಗೆ ವಿನಾಯಿತಿ ನೀಡಿ ನಿರ್ಧಾರ ಕೈಗೊಳ್ಳಲಾಗಿದೆ. ಕಡ್ಡಾಯ ಗ್ರಾಮೀಣ ಸೇವೆ ತಿದ್ದುಪಡಿ ಬಿಲ್‌ಗೆ ಸಂಪುಟ ಸಭೆ ಅನುಮೋದನೆ ನೀಡಿದೆ. ಸುಗ್ರೀವಾಜ್ಞೆ ಮೂಲಕ ವಿಧೇಯಕಕ್ಕೆ ಅನುಮೋದನೆ ಪಡೆಯಲು ನಿರ್ಧಾರ ಕೈಗೊಳ್ಳಲಾಗಿದೆ. ವೈದ್ಯರಿಗೆ ಕಡ್ಡಾಯ ಗ್ರಾಮೀಣ ಸೇವೆಯನ್ನು ಬದಲಾವಣೆ ಮಾಡಲು ತೀರ್ಮಾನಿಸಲಾಗಿದ್ದು, ಖಾಲಿ ಹುದ್ದೆಗಳಿಗೆ ಅಗತ್ಯವಿರುವಷ್ಟು ಮಾತ್ರ ಕಡ್ಡಾಯ ಗ್ರಾಮೀಣ ಸೇವೆ ನಿಗದಿಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಹೊಸದಾಗಿ 21 ತಾಲೂಗಳು ಬರಪೀಡಿತ ಎಂದು ಘೋಷಿಸಲು ಸಮ್ಮತಿ

ನೈಋತ್ಯ ಮುಂಗಾರಿನಲ್ಲಿ ಮಳೆ ಕೊರತೆಯಿಂದ ಬರಗಾಲ ಘೋಷಣೆ ಮಾಡಲಾಗಿದೆ. 195 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಿದ್ದೆವು. ಇದರ ಜೊತೆಗೆ 21 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಹೊಸದಾಗಿ 21 ತಾಲೂಕು ಬರಪೀಡಿತ ಎಂದು ಘೋಷಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೆಚ್​​ಕೆ ಪಾಟೀಲ್ ಮಾಹಿತಿ ನೀಡಿದರು.

ಅನ್ನಭಾಗ್ಯ: ಈಗಿರುವ ಪದ್ಧತಿ ಮುಂದುವರಿಸಲು ನಿರ್ಧಾರ

ಅಹಾರ ಇಲಾಖೆಯಿಂದ ಅಕ್ಕಿ ಒದಗಿಸುವ ವ್ಯವಸ್ಥೆ ಬಗ್ಗೆ ಚರ್ಚೆಯಾಗಿದೆ. ಈಗ ಇರುವ ಪದ್ಧತಿಯನ್ನೇ ಮುಂದುವರೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಐದು ಕೆಜಿ ಅಕ್ಕಿ ಕೊಡಬೇಕಾ ಅಥವಾ ನೀಡಲಾಗುತ್ತಿರುವ ಹಣ ಮುಂದುವರಿಸಬೇಕಾ ಎಂಬ ಚರ್ಚೆಯಾಗಿದೆ. ಸದ್ಯದ ಪದ್ದತಿಯನ್ನೇ ಮುಂದುವರಿಸಲು ಕ್ಯಾಬಿನೆಟ್ ನಿರ್ಧಾರ ಕೈಗೊಂಡಿದೆ ಎಂದು ಪಾಟೀಲ್ ತಿಳಿಸಿದರು.

ಬರಲಿದೆ ರಾಜ್ಯ ಅನಿಲ ನೀತಿ

ವಾಹನಗಳ ಸಿಎನ್​ಜಿ, ಗೃಹ ಬಳಕೆಯ ಪಿಎನ್​ಜಿ ಬಳಕೆಗೆ ರಾಜ್ಯ ಅನಿಲ ನೀತಿ ರೂಪಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸಿಟಿ ಗ್ಯಾಸ್ ​​​​ಡಿಸ್ಟ್ರಿಬ್ಯೂಷನ್ ನೆಟ್​​ವರ್ಕ್ ​ಪಾಲಿಸಿಗೆ ಅನುಮೋದನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: ನಗರ ಪ್ರದೇಶದ ಅನಧಿಕೃತ ಸ್ವತ್ತುಗಳಿಗೆ ‘ಬಿ’ ಖಾತೆ: ಈಶ್ವರ ಖಂಡ್ರೆ ಅಧ್ಯಕ್ಷತೆಯ ಉಪಸಮಿತಿಯ ಸಭೆಯಲ್ಲಿ ನಿರ್ಧಾರ

ಸಚಿವ ಸಂಪುಟದ ಇನ್ನಿತರ ನಿರ್ಧಾರಗಳು

  • ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮೀ ಯೋಜನೆ ವಿಸ್ತರಣೆ
  • ಕೃಷಿ ಇಲಾಖೆಯಿಂದ ರಸಗೊಬ್ಬರ ದಾಸ್ತಾನಿಗೆ 200 ಕೋಟಿ ರೂ ಬಂಡವಾಳ ಸಾಲ ತೆಗೆದುಕೊಳ್ಳಲು ಸರ್ಕಾರಿ ಖಾತರಿಗೆ ಅನುಮತಿ
  • ಪೊಲೀಸ್ ತರಬೇತಿ ಶಾಲೆಗಳ ಬಲವರ್ಧನೆ ಗೆ ಅಗತ್ಯ ಸಾಮಾಗ್ರಿ ಒದಗಿಸಲು 20 ಕೋಟಿ ಆಡಳಿತಾತ್ಮಕ ಅನುಮೋದನೆ
  • ಬೆಳಗಾವಿಯ ಸುವರ್ಣಸೌಧದಲ್ಲೇ ಅಧಿವೇಶನ ನಡೆಸುವ ಬಗ್ಗೆ ಚರ್ಚೆ, ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡುವ ಅಧಿಕಾರ ಸಿಎಂ ವಿವೇಚನೆಗೆ
  • ನಗರಾಭಿವೃದ್ಧಿ ಇಲಾಖೆಯಿಂದ ಎನ್.ಜಿ.ಟಿ ಅನುಸರಣೆಗೆ ತ್ವರಿತ ಪರಿಸರ ಪರಿಹಾರ ನಿಧಿ ಅಡಿಯಲ್ಲಿ 400.24 ಕೋಟಿ ವೆಚ್ಚದಲ್ಲಿ 110 ಮಲ ತ್ಯಾಜ್ಯ ಸಂಸ್ಕರಣ ಘಟಕಗಳನ್ನು ಸ್ಥಾಪನೆ ಮಾಡಲು ಕ್ಯಾಬಿನೆಟ್ ಅನುಮೋದನೆ.
  • 40 ಕೋಟಿ ಅಂದಾಜು ವೆಚ್ಚದಲ್ಲಿ ಸೆಸ್ ಪೂಲ್ ವೆಹಿಕಲ್ ಖರೀದಿಗೆ ಅನುಮೋದನೆ.
  • ಕೃಷಿ ಇಲಾಖೆಯಿಂದ ರಸಗೊಬ್ಬರ ದಾಸ್ತಾನಿಗೆ ೨೦೦ ಕೋಟಿ ರೂ ಬಂಡವಾಳ ಸಾಲ ತೆಗೆದುಕೊಳ್ಳಲು ಸರ್ಕಾರಿ ಖಾತರಿಗೆ ಅನುಮತಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:47 pm, Thu, 19 October 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್