ಅಧಿಕಾರಿಗಳನ್ನು ‘ಸರ್’ ಎಂದು ಸಂಬೋಧಿಸಿದ ಸಚಿವರು: ಸಿಟ್ಟಾದ ಸಿಎಂ ಸಿದ್ದರಾಮಯ್ಯ!

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಕರ್ನಾಟಕ ಸಚಿವ ಸಂಪುಟ ಸಭೆ ವಿಚಿತ್ರ ಸನ್ನಿವೇಶವೊಂದಕ್ಕೆ ಸಾಕ್ಷಿಯಾಯಿತು. ‘ಸರ್, ಸರ್’ ಎಂದು ಸಚಿವರು ಸಂಬೋಧಿಸಿದ್ದಕ್ಕೆ ಸಿಟ್ಟಾದ ಸಿಎಂ ಸಿದ್ದರಾಮಯ್ಯ ಮಂತ್ರಿಗಳಿಗೆ ಕ್ಲಾಸ್ ತೆಗೆದುಕೊಂಡ ವಿದ್ಯಮಾನವೂ ನಡೆಯಿತು. ಅಷ್ಟಕ್ಕೂ ಸಿದ್ದರಾಮಯ್ಯ ಸಚಿವರ ವಿರುದ್ಧ ಸಿಟ್ಟಾಗಿದ್ದೇಕೆ? ಇಲ್ಲಿದೆ ಮಾಹಿತಿ.

ಅಧಿಕಾರಿಗಳನ್ನು ‘ಸರ್’ ಎಂದು ಸಂಬೋಧಿಸಿದ ಸಚಿವರು: ಸಿಟ್ಟಾದ ಸಿಎಂ ಸಿದ್ದರಾಮಯ್ಯ!
ಸಿದ್ದರಾಮಯ್ಯ
Follow us
| Updated By: ಗಣಪತಿ ಶರ್ಮ

Updated on: Sep 06, 2024 | 8:07 AM

ಬೆಂಗಳೂರು, ಸೆಪ್ಟೆಂಬರ್ 6: ಕರ್ನಾಟಕ ಸಚಿವ ಸಂಪುಟ ಸಭೆ ಗುರುವಾರ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಐದು ಕೆಜಿ ಅಕ್ಕಿ ಬದಲು ವ್ಯಕ್ತಿಗೆ 170 ರೂ.ನಂತೆ ಹಣ ವರ್ಗಾವಣೆ ಮಾಡುವುದನ್ನು ಮುಂದುವರಿಸುವುದೂ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಸಚಿವ ಸಂಪುಟ ಕೈಗೊಂಡಿದೆ. ಆದರೆ, ಸಭೆಯ ಮಧ್ಯೆ ಅಚ್ಚರಿಯ ಸನ್ನಿವೇಶವೊಂದು ಸೃಷ್ಟಿಯಾಯಿತು.

ಕೆಲವು ಮಂದಿ ಸಚಿವರು ಅಧಿಕಾರಿಗಳನ್ನು ‘ಸರ್, ಸರ್’ ಎಂದು ಸಂಬೋಧಿಸಿ ಮಾತನಾಡುತ್ತಿದ್ದರು. ಇದನ್ನು ಕಂಡ ಸಿಎಂ ಸಿದ್ದರಾಮಯ್ಯ ಸಿಟ್ಟಾದರು. ಅಷ್ಟೇ ಅಲ್ಲ, ಕೆಲವು ಸಚಿವರಿಗೆ ಸಿಟ್ಟಿನಿಂದಲೇ ಕ್ಲಾಸ್ ತೆಗೆದುಕೊಂಡರು.

‘ಸರ್’ ಎಂದು ಕರೆಯಬೇಡಿ: ಸಿಎಂ ಖಡಕ್ ಸೂಚನೆ

ಯಾವೊಬ್ಬ ಸಚಿವರೂ ಅಧಿಕಾರಿಗಳನ್ನು ‘ಸರ್’ ಎಂದು ಕರೆಯಕೂಡದು ಎಂದು ಅಧಿಕಾರಿಗಳೆದುರಿಗೇ ನೇರವಾಗಿ ಸಿಎಂ ಹೇಳಿದರು. ಸಾಂವಿಧಾನಿಕವಾಗಿ ನೀವು (ಸಚಿವರು) ಇಲಾಖೆಯ ನಾಯಕರು. ಅಧಿಕಾರಿ ವರ್ಗ ನಿಮ್ಮ ಕೈಯಡಿ ಇದೆ. ನೀವೇ ಅಧಿಕಾರಿಗಳಿಗೆ ‘ಸರ್, ಸರ್’ ಎನ್ನುವ ಮೂಲಕ ಮಂತ್ರಿ ಸ್ಥಾನವನ್ನು ಕಡೆಗೆಣಿಸುತ್ತಿದ್ದೀರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಅಧಿಕಾರಿಗಳು ಗೌರವಿಸುವಂತೆ ವರ್ತಿಸಿ

ಇಲಾಖೆ ಬಗ್ಗೆ ಮಾಹಿತಿ ಕೊರತೆ ಇದ್ದರೆ ಅದಕ್ಕೆ ಬೇಕಾದ ಸೂಕ್ತ ಮಾಹಿತಿ ಅಧಿಕಾರಿಗಳಿಂದ ತರಿಸಿಕೊಳ್ಳಿ. ಅದರ ಬದಲಾಗಿ ಅದೇ ಇಲಾಖೆಯ ಇನ್ನೋರ್ವ ಅಧಿಕಾರಿಗೆ ‘ಸರ್ ಸರ್’ ಎಂದರೆ ಹೇಗೆ? ಅಧಿಕಾರಿಗಳು ಸದಾ ಆ ಸ್ಥಾನಕ್ಕೆ ಗೌರವಿಸುವಂತೆ ನಿಮ್ಮ ವರ್ತನೆ ಸಹ ಇರಬೇಕು ಎಂದು ಸಿಎಂ ನಿರ್ದೇಶನ ನೀಡಿದರು.

ಇದನ್ನೂ ಓದಿ: ಅನ್ನಭಾಗ್ಯದ 5 ಕೆಜಿ ಅಕ್ಕಿಯ ಹಣ ನೀಡುವುದು ಮುಂದುವರಿಕೆ: ಸಚಿವ ಸಂಪುಟದ ತೀರ್ಮಾನಗಳು ಇಲ್ಲಿವೆ

ಕಡತವೊಂದರ ಮಾಹಿತಿ ನೀಡುವ ಸಂದರ್ಭದಲ್ಲಿ ಸಚಿವರೊಬ್ಬರು ಅಧಿಕಾರಿಗಳ ಹೆಸರಿನ ಜತೆ ‘ಸರ್’ ಸೇರಿಸಿ ಮಾತನಾಡಿದ್ದು ಇಷ್ಟಕ್ಕೆಲ್ಲ ಕಾರಣವಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು
ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು
ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಸಂಭ್ರಮ, ವಿಡಿಯೋ ನೋಡಿ
ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಸಂಭ್ರಮ, ವಿಡಿಯೋ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ