Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka caste census: ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಏ. 17ಕ್ಕೆ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ ನಿಗದಿ

ಕರ್ನಾಟಕ ಜಾತಿ ಗಣತಿ ವರದಿ: ಸಾಕಷ್ಟು ಪರ ವಿರೋಧ ಚರ್ಚೆಗೆ ಗ್ರಾಸವಾಗಿರುವ ಜಾತಿ ಗಣತಿ ವರದಿ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬಂದಿದೆ. ಜಾತಿ ಗಣತಿ ವರದಿ ಜಾರಿಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಈ ಹಿಂದೆ ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ ಭರವಸೆ ನೀಡಿದ್ದರು. ಇದೀಗ ಆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಮುಂದೇನಾಯಿತು? ತಿಳಿಯಲು ಓದಿ.

Karnataka caste census: ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಏ. 17ಕ್ಕೆ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ ನಿಗದಿ
ಸಚಿವ ಸಂಪುಟ ಸಭೆ
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on:Apr 11, 2025 | 2:10 PM

ಬೆಂಗಳೂರು, ಏಪ್ರಿಲ್ 11: ಕರ್ನಾಟಕದ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ ಜಾತಿ ಗಣತಿ (Caste Census) ವರದಿ ಅನುಷ್ಠಾನ ಸಂಬಂಧ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ (Karnataka Cabinet Meeting) ಮಹತ್ವದ ಚರ್ಚೆಯಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ಜಾರಿಯ ಸಾಧ್ಯಾಸಾಧ್ಯತೆ ಬಗ್ಗೆ ಚರ್ಚಿಸಲಾಗಿದ್ದು, ಅಂತಿಮವಾಗಿ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವುದೆಂದು ನಿರ್ಧರಿಸಲಾಯಿತು.

ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಲಕೋಟೆ ಓಪನ್ ಮಾಡಲಾಯಿತು. ಸಚಿವರ ಕೈಗೆ ಜಾತಿ ಗಣತಿ ದತ್ತಾಂಶ ನೀಡಿದ ಬಳಿಕ ಆ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಲಾಯಿತು. ಸಂಪುಟ ಸಹೋದ್ಯೋಗಿಗಳ ಅಭಿಪ್ರಾಯ ಆಲಿಸಿದ ಸಿದ್ದರಾಮಯ್ಯ, ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ನಿರ್ಧಾರಕ್ಕೆ ಬಂದರು.

ಜನ ಗಣತಿ ಸಮೀಕ್ಷಾ ವರದಿಯನ್ನು 2024ರ ಫೆಬ್ರವರಿಯಲ್ಲಿ ಮುಚ್ಚಿದ ಲಕೋಟೆಯಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಇದಾದ ನಂತರ ಜಾತಿ ಗಣತಿ ವರದಿ ಸೋರಿಕೆಯಾಗಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು.

ಇದನ್ನೂ ಓದಿ
Image
ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಸಿದ್ದರಾಮಯ್ಯ ಗ್ಯಾರಂಟಿ ಮಾತು!
Image
ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ,ರಾಜ್ಯದ 7 ಕೋಟಿ ಕನ್ನಡಿಗರ ಸಮೀಕ್ಷೆ
Image
ಸರ್ಕಾರ ಬಿದ್ದರೆ ಬೀಳಲಿ ಜಾತಿಗಣತಿ ಜಾರಿ ಮಾಡಲೇಬೇಕು: ಬಿಕೆ ಹರಿಪ್ರಸಾದ್
Image
ಅಹಿಂದ ಟ್ರಂಪ್ ಕಾರ್ಡ್ ಬಳಸಿ ಮುಡಾ ಕಷ್ಟದಿಂದ ಹೊರಬರಲು ಸಿಎಂ ಪ್ರತ್ಯಸ್ತ್ರ

ಏಪ್ರಿಲ್ 17 ರಂದು ಜಾತಿ ಗಣತಿ ಸಂಬಂಧ ವಿಶೇಷ ಸಂಪುಟ ಸಭೆ

ಏಪ್ರಿಲ್ 17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ಜಾತಿ ಗಣತಿ ವಿಚಾರವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.

ಜನ ಗಣತಿ ಸಮೀಕ್ಷಾ ವರದಿ: ಏನೇನಿರಲಿವೆ?

ಪೆಟ್ಟಿಗೆ 1

  • 2015 ರ ಸಮೀಕ್ಷೆಯ ಸಮಗ್ರ ವರದಿ
  • ಜಾತಿವಾರು ಜನಸಂಖ್ಯಾ ವಿವರ – 1 ಸಂಪುಟ
  • ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಜಾತಿ)– 1 ಸಂಪುಟ
  • ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಪಂಗಡಗಳು)– 1 ಸಂಪುಟ
  • ಜಾತಿ, ವರ್ಗಗಳ ಪ್ರಮುಖ ಲಕ್ಷಣಗಳು (ಎಸ್‌ಸಿಎಸ್‌ಟಿ ಬಿಟ್ಟು )– 7 ಸಂಪುಟಗಳು
  • ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿಅಂಶಗಳು ( 2 ಸಿ.ಡಿಗಳು)
  • 2015 ರ ಸಮೀಕ್ಷೆಯ ‘ದತ್ತಾಂಶಗಳ ಅಧ್ಯಯನ ವರದಿ–2024’

ಪೆಟ್ಟಿಗೆ 2

  • ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಮಾಹಿತಿಯ ಜಾತಿ, ವರ್ಗವಾರು (ಎಸ್‌ಸಿಎಸ್‌ಟಿ ಬಿಟ್ಟು )– 4 ಸಂಪುಟಗಳು
  • ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಮಾಹಿತಿಯ ಜಾತಿ, ವರ್ಗವಾರು (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು) – 1 ಸಂಪುಟ
  • ತಾಲ್ಲೂಕುವಾರು, ಜಾತಿವಾರು ಕುಟುಂಬಗಳು ಹಾಗೂ ಜನಸಂಖ್ಯೆಯ ವರದಿ– 30 ಸಂಪುಟಗಳು
  • ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಪ್ರಾತಿನಿಧ್ಯದ ಕುರಿತ ದ್ವಿತೀಯ ಮೂಲಗಳಿಂದ ಪಡೆದ ವಿವರಗಳು– 1 ಸಂಪುಟ

ಇದನ್ನೂ ಓದಿ: ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ: ಸಿದ್ದರಾಮಯ್ಯ 

ಈ ಮಧ್ಯೆ, ಜಾತಿ ಗಣತಿ ವಿಚಾರವಾಗಿ ಶುಕ್ರವಾರ ಕೂಡ ವಿಪಕ್ಷಗಳ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಕುರ್ಚಿ ಕಳೆದುಕೊಳ್ಳುವ ಭೀತಿ ಎದುರಾದಾಗಲೆಲ್ಲ ಸಿದ್ದರಾಮಯ್ಯಗೆ ಜಾತಿ ಗಣತಿ ವರದಿ ನೆನಪಾಗುತ್ತದೆ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:03 pm, Fri, 11 April 25